Homeಕರ್ನಾಟಕಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಮತ್ತು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 75(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶಹಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೀಡಿದ ದೂರಿನ ಮೇರೆಗೆ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸ್ವಯಂಪ್ರೇರಿತ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಈ ಕ್ರಮ ಜರುಗಿಸಲಾಗಿದೆ. ಮುತ್ಯಾನ ವರ್ತನೆ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಪ್ರಕರಣ ದಾಖಲಾದ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ಹೈದರಾಬಾದ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೆಸ್ವಾಮಿ ಕೆ.ಟಿ ಅವರು, ” ಆಯೋಗ ಮುತ್ಯಾ ವಿರುದ್ದ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವುದನ್ನು ಮತ್ತು ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಖಚಿತಪಡಿಸಿದ್ದಾರೆ.

ಆಯೋಗ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ. ಅವರು ಸಂಬಂಧಿತ ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರುಗಿಸಲಿದ್ದಾರೆ ಎಂದು ತಿಳಿಸಿದ್ಧಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...