Homeಕರೋನಾ ತಲ್ಲಣಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

- Advertisement -
- Advertisement -

`ಧರೆಹತ್ತಿ ಉರಿದೊಡೆ’ ಎಂದು ಬಸವಣ್ಣನವರು ಹೇಳಿದ್ದ ಮಾತು ಇಂದು ನಿಜವಾಗಿದೆ. ಅದನ್ನು “ಈ ಕಾಲಘಟ್ಟಕ್ಕೆ ಹೋಲಿಸಿ ನೋಡುವುದಾದರೆ ಇಂದು ವಿಶ್ವಕ್ಕೆ ಬೆಂಕಿ ಬಿದ್ದಿದಂತಿದೆ. ಈ ಸಂದರ್ಭವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಬೇಕಿದ್ದ ಸರ್ಕಾರಗಳೆಲ್ಲವೂ ಕೈಚೆಲ್ಲಿ ಧರೆ ಹತ್ತಿ ಉರಿಯುವಂತೆ ಮಾಡಿವೆ” ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.

ಜನಾಗ್ರಹ ಆಂದೋಲನ ಸಂಘಟನೆ ವತಿಯಿಂದ ಪ್ರತಿ ಪಕ್ಷಗಳ ಮತ್ತು ಸರ್ವ ಸಂಘಟನೆಗಳ ತುರ್ತು ಸಮಾಲೋಚನಾ ಸಭೆಯಲ್ಲಿ ‘ಮಿಷನ್ ಸೇವ್ ಲೈಫ್’ ಯೋಜನೆಯನ್ನು ಆನ್‌ಲೈನ್ ಮೂಲಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. “ಸಮಾಜದ ಕಟ್ಟಕಡೆಯ ಜನರಿಗೆ ಆಹಾರದ ಕಿಟ್, ಮೆಡಿಕಲ್ ಕಿಟ್ ಮತ್ತು ವೈದ್ಯಕೀಯ ನೆರವನ್ನು ಒದಗಿಸುವುದು ‘ಮಿಷನ್ ಸೇವ್ ಲೈಫ್’ನ  ಆಶಯವಾಗಿದೆ” ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಾತನಾಡಿ “ನಮಗೂ ಸುಮ್ಮನೆ ಕೂರಲು ಆಗುತ್ತಿಲ್ಲ. ನಮ್ಮಿಂದ ಸಾಧ್ಯವಿರುವ ಸಹಾಯವನ್ನು ಜನತೆಗೆ ನೀಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಾಲುತ್ತಿಲ್ಲ. ಸರ್ಕಾರ ಯಾರ ಮಾತನ್ನೂ ಕೇಳಲು ಸಿದ್ಧವಿಲ್ಲ. ನಿಸ್ವಾರ್ಥವಾಗಿ ಸಾಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿರುವ ನೀವೆಲ್ಲಾ ಜೊತೆಗೂಡಿಸಿರುವುದು ಸಂತಸದ ವಿಚಾರ. ನಮ್ಮ ಪಕ್ಷ ನಿಮ್ಮ ಜೊತೆಗಿದೆ. ನೀವು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಸಂಪೂರ್ಣ ಸಹಕರಿಸಿ ಜೊತೆಗೂಡುತ್ತೇವೆ” ಎಂದರು.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಸಮಾರೋಪದ ಮಾತುಗಳನ್ನಾಡಿ “ಆಸ್ಪತ್ರೆಯಲ್ಲಿ ಬೆಡ್ಡಿಲ್ಲ, ಸ್ಮಶಾನದಲ್ಲಿ ಜಾಗವಿಲ್ಲ” ಎಂಬ ಪರಿಸ್ಥಿತಿ ಏರ್ಪಟ್ಟಿದೆ. ಇಂತಹ ಹೊತ್ತಿನಲ್ಲಿ ಈ ಸಭೆಗೆ ವಿಶೇಷ ಮಹತ್ವವಿದೆ. ಸಮಾಲೋಚನಾ ಮಂಡಳಿಯನ್ನು ವಿಸ್ತರಿಸಿ, ಕೂಲಂಕೂಷ ಚರ್ಚೆ ನಡೆಸಿ ಮುಂದಿನ ಹೋರಾಟದ ಹೆಜ್ಜೆಗಳ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

ನಿವೃತ್ತ ಐಎಎಸ್ ಅಧಿಕಾರಿ ಶಸಿಕಾಂತ್ ಸೆಂದಿಲ್, ಆಮ್ ಆದ್ಮಿ ಪಕ್ಷದ ವರಿಷ್ಟ ಪೃಥ್ವಿರೆಡ್ಡಿ, ಸ್ವರಾಜ್ ಇಂಡಿಯಾದ ಚಾಮರಾಸ ಮಾಲಿ ಪಾಟೀಲ್, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ರೈತ ಚಳವಳಿಯ ಮುಖಂಡರುಗಳಾದ ಬಡಗಲಪುರ ನಾಗೇಂದ್ರ, ಹೆಚ್. ಸಿ. ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಾದ ಡಿ.ಜಿ. ಸಾಗರ್, ನಾಗಾವರ, ಅಲ್ಪಸಂಖ್ಯಾತ ಸಮುದಾದ ಮುಖಂಡರುಗಳಾದ ಯೂಸೂಫ್ ಕನಿ, ಅಫ್ಸರ್ ಕೊಡ್ಲಿಪೇಟೆ, ತಾಹೀರ್ ಹುಸೈನ್ ಮುಂತಾದವರು ಅಭಿಪ್ರಾಯ ಹಂಚಿಕೊಂಡರು.  ಸಲಹೆ ಮಾಡಿದರು. ಸಭೆಯಲ್ಲಿ 60ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

  • ಕೋವಿಡ್ ಸಂಬಂಧಿತ ಎಲ್ಲಾ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುಡಿಯುವ ವ್ಯಕ್ತಿ ಮಡಿದ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು. ಚಾಮರಾಜನಗರದಲ್ಲಿ ಸರ್ಕಾರಿ ವೈಫಲ್ಯದಿಂದಾಗಿ ಮೃತರಾದ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಬೇಕು.
  • ಎಲ್ಲಾ ವಯಸ್ಕರಿಗೂ ಸರ್ಕಾರ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು.
  • ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಸಮಗ್ರ ಪಡಿತರ ಕಿಟ್ ಅನ್ನು ಸರ್ಕಾರ ವಿತರಿಸಬೇಕು.
  • ಲಾಕ್ ಡೌನಿನಿಂದ ಕೆಲಸ ಇಲ್ಲದಾಗಿರುವ ಎಲ್ಲಾ ಶ್ರಮಜೀವಿ ಕುಟುಂಬಗಳಿಗೆ ಕೂಡಲೇ 5000 ನಗದು ವರ್ಗಾವಣೆ ಮಾಡಬೇಕು.
  • ಮೂರನೇ ಅಲೆಗೆ ತಯಾರಿಯನ್ನೂ ಮಾಡಿಕೊಳ್ಳಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೆಡ್ ಮತ್ತು ಆಕ್ಸಿಜನ್ ಲಭ್ಯತೆಯನ್ನು ತೀವ್ರಗತಿಯಲ್ಲಿ ಹೆಚ್ಚಿಸಬೇಕು. ಗ್ರಾಮ ಮಟ್ಟದಲ್ಲಿ ಕೋವಿಡ್ ನಿರ್ವಹಣಾ ಸಮಿತಿಗಳನ್ನು ರಚಿಸಿ ಶಕ್ತಿಯುತಗೊಳಿಸಬೇಕು.
  • ಮುಂಗಾರು ಕೃಷಿ ಪ್ರಾರಂಭವಾಗುತ್ತಿದ್ದು ಈ ಸಂದರ್ಭದಲ್ಲಿ ಸರ್ಕಾರ ಗೊಬ್ಬರದ ಬೆಲೆಯನ್ನು ಏರಿಸಿರುವುದು ಖಂಡನಾರ್ಹ. ಕೂಡಲೇ ಗೊಬ್ಬರ, ಬೀಜ ಮತ್ತು ಕೃಷಿ ಪರಿಕರಗಳ ಬೆಲೆಯನ್ನು ತಗ್ಗಿಸಬೇಕು ಮತ್ತು ಸಬ್ಸಿಡಿಯನ್ನು ಹೆಚ್ಚಿಸಬೇಕು.

ಸಭೆಗೆ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಸ್ವರ್ಣ ಭಟ್ ಅವರು ಸ್ವಾಗತ ಬಯಸಿದರು. ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಮು ಸೌಹಾರ್ದ ವೇದಿಕೆಯ ಕೆ.ಎಲ್. ಅಶೋಕ್ ಸಭೆಯನ್ನು ನಿರೂಪಣೆ ಮಾಡಿದರು. ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್ ಶ್ರೀಧರ್ ಸಭೆಯ ನಿರ್ಣಯಗಳನ್ನು ಮಂಡಿಸಿದರು.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...