Homeಕರ್ನಾಟಕತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ಚಿ.ನಾ.ಹಳ್ಳಿಯಲ್ಲಿ ನಿರ್ಮಿಸಿದ್ದ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದು ಸಾಹಿತಿಗಳ ಅಸಮಾಧಾನ, ಆಕ್ರೋಶಕ್ಕೆ ಕಾರಣವಾಗಿದೆ.

ಧ್ವನಿ-ಬೆಳಕು ವ್ಯವಸ್ಥೆ, ಕಾಂಪೌಂಡ್ ನಿರ್ಮಾಣ ಕಾಮಗಾರಿ ಇನ್ನೂ ಮುಗಿದಿರಲಿಲ್ಲ. ಆದರು ಆತುರಾತುರವಾಗಿ ಸಚಿವ ಸಿ.ಟಿ.ರವಿ ಅವರನ್ನ ಕರೆಸಿ ಉದ್ಘಾಟಿಸುವ ಅಗತ್ಯವೇನಿತ್ತು? ತೀನಂಶ್ರೀ ಭವನ ಬೇಕೆಂದು ಹಲವು ವರ್ಷಗಳಿಂದ ಹೋರಾಡಿದ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಯಾವುದೇ ಕನ್ನಡ ಪರ ಸಂಘಟನೆಗಳು ಮತ್ತು ಸಾಹಿತಿಗಳನ್ನು ಬೇಕೆಂದೇ ಆಹ್ವಾನಿಸದೇ ಹೊರಗಿಟ್ಟಿದ್ದು ಏಕೆ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕಳೆದ ಏಳೆಂಟು ವರ್ಷಗಳಿಂದಲೂ ತೀನಂಶ್ರೀ ಭವನ ನಿರ್ಮಾಣ ಮಾಡಬೇಕೆಂದು ಕನ್ನಡದ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್, ಸಾಹಿತಿಗಳು, ಹೋರಾಟಗಾರರು ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಸೆಯಾಗಿತ್ತು. ಇಂದು ತೀನಂಶ್ರೀ ಭವನ ನಿರ್ಮಾಣಗೊಳ್ಳಲು ಇದೇ ಕಾರಣ.

ಹೀಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತೀನಂಶ್ರೀ ಭವನ ಉದ್ಘಾಟನೆಗೆ ಸಿ.ಟಿ.ರವಿ ಅವರನ್ನು ಕರೆಸಿದರು. ಅಧಿಕಾರಿಗಳು ಕಾಮಗಾರಿ ಮುಗಿದಿಲ್ಲ, ಉದ್ಘಾಟಿಸುವುದು ಬೇಡವೆಂದರೂ ಸಹ, ಸಚಿವ ಮಾಧುಸ್ವಾಮಿ ‘ಇಲ್ರೀ, ನಾನು ಹೇಳಿದಷ್ಟು ಕೇಳ್ರಿ’ ಎಂದು ಎಚ್ಚರಿಕೆ ಕೊಟ್ಟರು ಎನ್ನಲಾಗಿದೆ.

ಸಚಿವರ ಸೂಚನೆ ಮೇರೆಗೆ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿದ್ದರು. ಸೌಜನ್ಯಕ್ಕೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ಯಾವುದೇ ಪದಾಧಿಕಾರಿಗಳು, ಸಾಹಿತಿಗಳಿಗೂ ಮಾಹಿತಿ ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ಕಸಾಪ ಹೆಸರು ಮುದ್ರಿಸಿದ್ದಾರೆ.

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

ಯಾರಿಗೂ ಮಾಹಿತಿಯೇ ಇಲ್ಲದಂತೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಚಿಕ್ಕನಾಯಕನಹಳ್ಳಿಯವರೇ ಆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು, ಸಾಹಿತಿಗಳು ಆದ ಎಸ್.ಜಿ ಸಿದ್ದರಾಮಯ್ಯ. ಸಂಶೋಧಕ ಕೆ.ಬಿ.ಶಿವತಾರಕ್, ತಿಮ್ಮನಹಳ್ಳಿ ವೇಣುಗೋಪಾಲ್, ನಟರಾಜ್ ಹುಳಿಯಾರ್, ಹುಳಿಯಾರು ಕಾಲೇಜಿನ ಪ್ರಾಂಶುಪಾಲರು, ಲೇಖಕರಾದ ಬಿಳಿಗೆರೆ ಕೃಷ್ಣಮೂರ್ತಿ, ಕೃಷಿಕ ಸಾಹಿತಿ ಬಾಳೇಕಾಯಿ ಶಿವ ನಂಜಪ್ಪ ಹೀಗೆ ಜಿಲ್ಲೆಯ ಯಾವ ಪ್ರಾತಿನಿಧಿಕ ಸಾಹಿತಿಗಳನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನೂ ಮುದ್ರಿಸಲಿಲ್ಲ.

ಇದನ್ನೂ ಓದಿ: ಡಿ.ಜೆ ಹಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ: ನಿರಪರಾಧಿಗಳ ಬಿಡುಗಡೆಗೆ ಆಗ್ರಹ

ಜಿಲ್ಲೆಯ ಎಲ್ಲಾ ಸಾಹಿತಿಗಳು ಪ್ರಗತಿಪರ ನಿಲುವುಳ್ಳವರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರ ನಿಲುವುಗಳಿಗೆ ವಿರುದ್ಧ ಚಿಂತನೆಗಳನ್ನು ಬೆಳೆಸಿಕೊಂಡವರು. ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ಟೀಕೆಗೆ ಒಳಪಡಿಸುವವರು ಎಂಬ ಕಾರಣಕ್ಕೆ ಉದ್ದೇಶಪೂರಕವಾಗಿಯೇ ದೂರ ಇಡಲಾಯಿತು. ಅಷ್ಟೇ ಅಲ್ಲ ಜಿಲ್ಲಾ ಉಸ್ತುವಾರಿ ಸಚಿವರು ‘ತುಮಕೂರು ಮೋದಿ’  ಇದ್ದಂತೆ. ಸರ್ವಾಧಿಕಾರಿ ಧೋರಣೆಗೆ ಮತ್ತೊಂದು ಹೆಸರು ಜೆ.ಸಿ.ಮಾಧುಸ್ವಾಮಿ. ಅವರು ಹೇಳಿದ್ದೇ ವೇದವಾಕ್ಯ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಿ.ಟಿ. ರವಿಯವರ ಚಿಂತನೆಗೆ ವಿರುದ್ಧವಾಗಿ ನಡೆದುಕೊಳ್ಳಬಾರದೆಂಬ ಕಾರಣಕ್ಕಾಗಿ ಎಲ್ಲರನ್ನೂ ದೂರವಿಟ್ಟರು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, “ತೀನಂಶ್ರೀ ಪ್ರಸಿದ್ದ ವಿದ್ವಾಂಸರು. ಕನ್ನಡ ಸಾರಸ್ವತ ಲೋಕಕ್ಕೆ ಇವರ ಕೊಡುಗೆ ಅಪಾರವಾದುದು. ಇಂತಹವರ ಹೆಸರಿನಲ್ಲಿ ಸಾಹಿತ್ಯ ಭವನ ನಿರ್ಮಾಣವಾಗತೊಡಗಿದ್ದು ಸಾಹಿತ್ಯ ವಲಯದಲ್ಲಿ ಹೆಮ್ಮೆಯ ಸಂಗತಿಯಾಗಿತ್ತು. ಆದರೆ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆಯಾಗಿದ್ದು ಸಾಹಿತ್ಯಾಸಕ್ತರಿಗೆ ನಿರಾಸೆ ತಂದಿದೆ” ಎಂದಿದ್ದಾರೆ.

“ತೀನಂಶ್ರೀ ಅವರಿಗೆ ಘನತೆ-ಗೌರವ ತರುವ ರೀತಿಯಲ್ಲಿ ಎಲ್ಲರೂ ಒಟ್ಟಾಗಿ ಸೇರಿ ವಿಚಾರ ಸಂಕಿರಣ ಏರ್ಪಡಿಸುವ ಮೂಲಕ ಒಂದು ಸಾಹಿತ್ಯ-ಸಂಸ್ಕಂತಿಯ ಹಬ್ಬದಂತೆ ಮಾಡಬಹುದಿತ್ತು. ಇದ್ಯಾವುದೂ ಆಗಲಿಲ್ಲ ಎಂಬ ನೋವು ಇದೆ. ಸಾಹಿತಿ, ಲೇಖಕ, ಶಿಷ್ಯವೃಂದ, ಸಾಹಿತ್ಯಾಸಕ್ತರ ಅನುಪಸ್ಥಿತಿಯಲ್ಲಿ ತೀನಂಶ್ರೀ ಭವನ ಅನಾಥವಾಗಿ ಲೋಕಾರ್ಪಣೆಗೊಂಡಿದ್ದು ನೋವಿನ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಒಂದೇ ಧೋರಣೆಯವರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈಗಿನ ಸರ್ಕಾರ ಭಿನ್ನ ನಿಲುವುಗಳನ್ನು ವ್ಯಕ್ತಪಡಿಸುವ ಸಾಹಿತಿ-ಕಲಾವಿದರನ್ನು ತೀನಂಶ್ರೀ ಭವನ ಉದ್ಘಾಟನೆಯಂಥ ಸಾಂಸ್ಕೃತಿಕ ಕಾರ್ಯಕ್ರಮದಿಂದ ಹೊರಗಿಟ್ಟಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ವೇದಿಕೆಯಲ್ಲಿ ಟಿ.ಎಸ್.ನಾಗರಾಜರಾವ್ ಅವರೊಬ್ಬರನ್ನು ಬಿಟ್ಟರೆ ಬೇರೆ ಯಾವುದೇ ಸಾಹಿತಿ ಇರಲಿಲ್ಲ. ಬಿಜೆಪಿ ಸರ್ಕಾರದ ಚಿಂತನೆಗಳು ಮತ್ತು ಧೋರಣೆಗಳಿಗೆ ಹತ್ತಿರವಾಗಿರುವ ನಾಗರಾಜ್ ರಾವ್ ಅವರ ಹೆಸರನ್ನು ಹಾಕದಿದ್ದರೂ ಸ್ವಾಗತ ಮಾಡಿದ್ದು ಅವರೇ ಎಂದು ಕಾರ್ಯಕ್ರಮಕ್ಕೆ ಭಾಗಿಯಾಗಿದ್ದವರು ತಿಳಿಸಿದರು.

ತೀನಂಶ್ರೀ ಭನವ ಉದ್ಘಾಟನೆಗೆ ಅವರ ಶಿಷ್ಯ ವೃಂದವನ್ನೂ ಆಹ್ವಾನಿಸಿಲ್ಲ. ಜಿಲ್ಲೆಯ ಸಾಹಿತಿ-ಚಿಂತಕರನ್ನು ಕರೆದಿಲ್ಲ. ಇದು ಸಾಹಿತ್ಯ ವಲಯದಲ್ಲಿ, ಕನ್ನಡಪರ ಸಂಘಟನೆಗಳ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿದೆ.

ಸಿ.ಟಿ.ರವಿ ಮತ್ತು ಜೆ.ಸಿ.ಮಾಧುಸ್ವಾಮಿ ಸಚಿವದ್ವಯರಿಗೆ ಸಾಹಿತಿಗಳನ್ನು ಕಂಡರೆ ಆಗುವುದಿಲ್ಲ. ಸಾಹಿತಿಗಳ ಭಿನ್ನ ನಿಲುವುಗಳನ್ನು ಸಹಿಕೊಳ್ಳದ ಉಸ್ತುವಾರಿ ಸಚಿವರು ಏಕಪಕ್ಷೀಯ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...