Homeಚಳವಳಿವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಇಡೀ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಸ್ವರಾಜ್ ಇಂಡಿಯಾ ಪಕ್ಷ ಮತ್ತು ಹಲವು ರೈತರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ “ಜೈ ಕಿಸಾನ್ ಆಂದೋಲನ್” ಭಾಗವಾಗಿ ಸಾವಿರಾರು ರೈತರು ಹರಿಯಾಣದ ಸಿರ್ಸಾ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ಪ್ರಮುಖ ಪಕ್ಷವಾದ ಸ್ವರಾಜ್ ಇಂಡಿಯಾ ಪಕ್ಷ ಮತ್ತು ಅದರ ಮುಖಂಡರಾದ ಯೋಗೇಂದ್ರ ಯಾದವ್ ಅವರ ಮುಂದಾಳತ್ವದಲ್ಲಿ ಸಿರ್ಸಾದ ದಸರಾ ಮೈದಾನದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸ್ವರಾಜ್ ಅಭಿಯಾನ ಟ್ವೀಟ್ ಮಾಡಿದ್ದು, “ನೀವು ರೈತರನ್ನು ಪ್ರೀತಿಸುತ್ತೀರಾ ಅಥವಾ ನಿಮ್ಮ ಕುರ್ಚಿಯನ್ನು ಪ್ರೀತಿಸುತ್ತೀರಾ? ನೀವು ರೈತಸ್ನೇಹಿಯೋ ಅಥವಾ ಕುರ್ಚಿಯ ಬಗ್ಗೆ ದುರಾಸೆಯಿದೆಯೋ? ಈ ದೇಶದ ರೈತರು ಪ್ರಶ್ನೆಗಳನ್ನು ಕೇಳಲು ಬರುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ರಮಣ್‌ದೀಪ್ ಸಿಂಗ್ ರೈತರ ಪ್ರತಿಭಟನೆಯ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಕೋವಿಡ್-19 ಮತ್ತು ಸುಗ್ಗಿಯ ಸಮಯದಲ್ಲಿ ರೈತರು ಸಮುದ್ರದಂತೆ ಸೇರಿ ಸಿರ್ಸಾದ ದಸರಾ ಮೈದಾನದಲ್ಲಿ ರೈತ ವಿರೋಧಿ ಮಸೂದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಇಂದು ರೈತರು ಹರಿಯಾಣದ ಉಪಮುಖ್ಯಮಂತ್ರಿ ಮತ್ತು ವಿದ್ಯಚ್ಚಕ್ತಿ ಸಚಿವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ” ಎಂದು ಬರದುಕೊಂಡಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಿದ್ದರು. ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಿದ್ದ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಿದ್ದರು. ಜೊತೆಗೆ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನಿಡಿದ್ದರು.

ಕಳೆದ ವಾರ ದೇಶಾದ್ಯಂತ ರೈತರು, ರೈತ ಸಂಘಟನೆಗಳು, ವಿರೋಧ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಈ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ನಡೆಸಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದವು. ಇದರ ನಡುವೆ ಕೆಂದ್ರ ಸರ್ಕಾರದ ಸಚಿವರಾದ ಹರ್ಸಿಮ್ರತ್ ಕೌರ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಕೇಂದ್ರ ಸರ್ಕಾರದ ಈ ಮಸೂದೆಗಳನ್ನು ವಿರೋಧಿಸಿದ್ದರು.

ಇದನ್ನೂ ಓದಿ: ದೇಶದ ಆರ್ಥಿಕ ಬಿಕ್ಕಟ್ಟು ನಿಜವೇ? ಹೇಗೆ?

ಕರ್ನಾಟಕದಲ್ಲಿ ಕಳೆದ ತಿಂಗಳಿನಿಂದ ವಿಧಾನ ಸಭಾ ಅಧಿವೇಶನ ಆರಂಭವಾಗಿದ್ದಾಗ, ರಾಜ್ಯದಲ್ಲಿ ಭೂ ಸುಧಾರಣಾ ಕಾನೂನುಗಳನ್ನು ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತಂದಿರುವುದನ್ನು ವಿರೋಧಿಸಿ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಸೇರಿ ಐಕ್ಯ ಹೊರಾಟವನ್ನು ನಡೆಸಿದ್ದವು. ಸೆ.28 ರಂದು ಕರ್ನಾಟಕ ಬಂದ್ ಮಾಡಲಾಗಿತ್ತು. ರಾಜ್ಯದಲ್ಲಿ ತಿದ್ದುಪಡಿ ತಂದಿರುವ ಭೂಸುಧಾರಣಾ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ತೆಗೆದುಹಾಕುತ್ತದೆ. ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಸಗಟು ವ್ಯಾಪಾರಗಳು ದೇಶದ ಮೂರು ಸ್ತಂಭಗಳಿದ್ದಂತೆ. ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ” ಎಂದು ಪಂಜಾಬ್ ರೈತರು ನಡೆಸುತ್ತಿರುವ 3 ದಿನಗಳ ಟ್ರ್ಯಾಕ್ಟರ್‌ ರ್‍ಯಾಲಿಯನ್ನು ಉದ್ಘಾಟಿಸಿದ ರಾಹುಲ್ ಗಾಂಧಿ ಹೇಳಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...