Homeಕರ್ನಾಟಕಮುಸ್ಲಿಮರನ್ನು ಕೊಲ್ಲಲು ಪ್ರಚೋದನೆ; ಕಾಳಿ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

ಮುಸ್ಲಿಮರನ್ನು ಕೊಲ್ಲಲು ಪ್ರಚೋದನೆ; ಕಾಳಿ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬೇಕಾದರೆ ಕೊಲ್ಲಿ. ಒಂದು ತಲೆ ಉರುಳಿದೆ, ಇನ್ನೂ 9 ಮುಸ್ಲಿಮರ ತಲೆ ಉರುಳಬೇಕಾಗಿದೆ” ಎಂದು ಹೇಳಿಕೆ ನೀಡಿದ್ದ ಋಷಿಕುಮಾರ ಅಲಿಯಾಸ್ ಕಾಳಿ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗಿದೆ.

ತುಮಕೂರಿನ ತಿಲಕ್‌‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನಗರದ ಪಿಯುಸಿಎಲ್ ಮುಖಂಡರಾದ ಕೆಂಪರಾಜು ಅವರು ನೀಡಿದ ದೂರಿನ ಅನ್ವಯ ಕ್ರಮ ಜರುಗಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶನಿವಾರ ತುಮಕೂರಿನ ಪ್ರಗತಿಪರ ವೇದಿಕೆ ಸಹ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಸ್ವಾಮೀಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದೆ. ಕೆಂಪರಾಜುರವರು ನೀಡಿದ ದೂರಿನ ಹಿನ್ನಲೆಯಲ್ಲಿ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯಕ್ಕೆ ಅಡ್ಡಿಪಡಿಸುವುದು) ಅಡಿಯಲ್ಲಿ ಎಫ್‌ಐಆರ್‌‌ ದಾಖಲಾಗಿದೆ.

“ತುಮಕೂರಿನ ಟೌನ್‌ ಹಾಲ್‌ ಮುಂದೆ ದಿನಾಂಕ 29-7-2022ರಂದು ನಡೆದ ಪ್ರತಿಭಟನೆ ವೇಳೆ ಕಾಳಿ ಸ್ವಾಮಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ. ಒಂಬತ್ತು ಮುಸ್ಲಿಮರ ತಲೆ ಕಡಿಯಬೇಕು ಎಂದಿದ್ದಾರೆ. ಮುಖ್ಯಮಂತ್ರಿ ಹಾಗೂ ಗೃಹಸಚಿವರ ಹತ್ಯೆ ಮಾಡುವಂತೆ ಹೇಳಿಕೆ ನೀಡಿದ್ದಾರೆ. ತುಮಕೂರಿನ ಹಿಂದೂ ಮುಸ್ಲಿಂ ಬಾಂಧವರಲ್ಲಿ ಅಶಾಂತಿ ಉಂಟು ಮಾಡಿ ನಾಗರಿಕ ದಂಗೆಗಳು ನಡೆಯುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ತುಮಕೂರಿನ ಶಾಂತಿಗೆ ಧಕ್ಕೆ ತಂದಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾಳಿ ಸ್ವಾಮೀಜಿ ಹೇಳಿದ್ದೇನು?

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ‍ ಕಾಳಿ ಸ್ವಾಮೀಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೆ ಪ್ರಚೋದನೆ ನೀಡಿದ್ದರು.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿದ್ದ ಕಾಳಿ ಸ್ವಾಮೀಜಿ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ವ್ಯಕ್ತಿಯನ್ನು ಕೊಂದಿರುವ ಕುರಿತು ಮಾತನಾಡಿದ್ದ ಕಾಳಿ ಸ್ವಾಮೀಜಿ, “ನಮ್ಮವರೇ ಏನಾದರೂ ಹೊಡೆದಿದ್ದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುವೆ. ಇನ್ನು ಒಬ್ಬರನ್ನೇ ಕೊಂದಿರುವುದೆಂದು ಹೇಳುತ್ತಿದ್ದೀರಿ. ಇನ್ನು 9 ತಲೆ ಬೇಕು. ಅವರವರೇ ಹೊಡೆದುಕೊಂಡು ಸತ್ತು ಹೋಗಿದ್ದರೆ ನಮ್ಮವರಿಗೆ ಇನ್ನೂ ಮನಸ್ಥಿತಿ ಗಟ್ಟಿಯಾಗಿಲ್ಲ ಎಂದಷ್ಟೇ. ತುರುಕರೇ ನಿಮ್ಮ ಒಂದೊಂದು ಕತ್ತು ತಗಿಯಲಿಲ್ಲ ಎಂದರೆ ದೇವರಾಣೆಯೂ ಸುಧಾರಿಸಿಕೊಳ್ಳುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

“ನೀವು ನನ್ನನ್ನು ಎತ್ತಿ. ಎಸ್‌ಡಿಪಿಐ, ಪಿಎಫ್‌ಐ ………. ನನ್ನನ್ನು ಎತ್ತಿ. ನಿಮ್ಮ ಕೈಲಾದ್ರೆ ನಳಿನ್‌ ಕುಮಾರ್‌ ಕಟೀಲ್‌ರನ್ನು ಎತ್ತಿ. ನಿಮ್ಮ ಕೈಲಾದರೆ ಬೊಮ್ಮಾಯಿ, ಹೋಮ್‌ಮಿನಿಸ್ಟರ್‌ರನ್ನು ಎತ್ತಿ….” ಎಂದಿದ್ದರು.

ಇದನ್ನೂ ಓದಿರಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಅತ್ಯಂತ ಕೆಟ್ಟ ಪದಗಳನ್ನು ಮುಸ್ಲಿಂ ಸಮುದಾಯದ ವಿರುದ್ಧ ಕಾಳಿ ಸ್ವಾಮೀಜಿ ಬಳಸಿದ್ದರು. “ನೀವು ನನ್ನನ್ನು ಹೊಡೆದ ತಕ್ಷಣ ಗೋದ್ರಾ ಹತ್ಯಾಕಾಂಡ ಶುರುವಾಗುತ್ತದೆ. ಗೋರಿಪಾಳ್ಯ, ಕಲಾಸಿಪಾಳ್ಯಕ್ಕೆ ನುಗ್ಗಿ ಬೆಂಕಿ ಹಚ್ಚಲಾಗುತ್ತದೆ. ನಮ್ಮ ತಾಕತ್ತು ಏನೆಂಬುದು ತೋರಿಸುತ್ತೇವೆ. ಹೊಡೆಯುವುದಾದರೆ ದೊಡ್ಡದನ್ನು ಹೊಡೆಯಿರಿ…. ಯಾವ ಶಾಂತಿ ಕಾಪಾಡಬೇಕು ಮುಖ್ಯಮಂತ್ರಿಗಳೇ…” ಎಂದು ಬಾಯಿಗೆ ಬಂದಂತೆ ಮಾತನಾಡಿರುವ ಅವರು ಮುಸ್ಲಿಮರನ್ನು ಗುಂಡಿಕ್ಕಿ ಕೊಲ್ಲಲು ಪ್ರಚೋದಿಸಿದ್ದರು.

“ಮೂರು ದಿನದೊಳಗೆ ಎನ್‌ಕೌಂಟರ್‌ ಮಾಡಿ. ಇಲ್ಲವಾದರೆ ಪಾದಯಾತ್ರೆ ಮಾಡ್ತೀವಿ. ಒಂದು ಕತ್ತಿಗೆ ಹತ್ತು ಕತ್ತು ಉದುರಿಸಬೇಕು” ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...