Homeರಾಷ್ಟ್ರೀಯಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

ಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

- Advertisement -
- Advertisement -

ಆರೆಸ್ಸೆಸ್‌‌‌‌ನ ಅಂಗಸಂಸ್ಥೆಯಾದ ‘ಹಿಂದೂ ಮುನ್ನಣಿ’ಯ ದುಷ್ಕರ್ಮಿಯೊಬ್ಬ ಕೋಮು ಗಲಭೆ ನಡಸುವ ಉದ್ದೇಶದಿಂದ ತನ್ನ ಮನೆಗೆ ತಾನೇ ಬಾಂಬ್ ಎಸೆದು ತಮಿಳುನಾಡು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾನೆ. ಕೋಮು ಗಲಭೆ ನಡೆಸುವುದಕ್ಕಾಗಿ ‘ತನ್ನ ಮನೆಯ ಮೇಲೆ ಬಾಂಬ್ ದಾಳಿ’ ನಡೆದಿದೆ ಎಂದು ದುಷ್ಕರ್ಮಿಯು ಸುಳ್ಳು ದೂರು ನೀಡಿದ್ದನು.

ಘಟನೆಯು ತಮಿಳುನಾಡಿನ ಕುಂಭಕೋಣಂನಲ್ಲಿ ನವೆಂಬರ್ 21 ರ ಸೋಮವಾರ ನಡೆದಿದ್ದು, ಬಂಧನಕ್ಕೊಳಗಾದ ದುಷ್ಕರ್ಮಿಯನ್ನು ಹಿಂದೂ ಮುನ್ನಣಿ ಕುಂಭಕೋಣಂ ನಗರದ ಕಾರ್ಯದರ್ಶಿಯಾದ ಸಕ್ಕರೆಪಾಣಿ (40) ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ಬೆಳಿಗ್ಗೆ ಅಪರಿಚಿತ ದುಷ್ಕರ್ಮಿಗಳು ತಮ್ಮ ಮನೆ ಮುಂದೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ದುಷ್ಕರ್ಮಿ ಕುಂಭಕೋಣಂ ಪೂರ್ವ ಪೊಲೀಸ್ ಠಾಣೆಗೆ ಕರೆ ಮಾಡಿದ್ದನು. ಮನೆಯ ಮುಂದೆ ದೊಡ್ಡ ಶಬ್ದ ಉಂಟಾಗಿದ್ದು, ಮನೆಯ ಹೊರಗೆ ಒಡೆದ ಗಾಜಿನ ತುಂಡುಗಳು ಕಂಡುಬಂದಿವೆ ಎಂದು ದೂರಿದ್ದನು.

ಇದನ್ನೂ ಓದಿ: ಪಕ್ಷದ ಮಹಿಳಾ ನಾಯಕಿಗೆ ಅಶ್ಲೀಲ ನಿಂದನೆ, ಕೊಲೆ ಬೆದರಿಕೆ ಹಾಕಿದ ತಮಿಳುನಾಡು ಬಿಜೆಪಿ ನಾಯಕ

ಘಟನೆಯ ಬಗ್ಗೆ ತಿಳಿದ ಕುಂಭಕೋಣಂ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರವಳಿ ಪ್ರಿಯಾ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಗಳಾದ (ಎಡಿಎಸ್‌ಪಿ) ಜಯಚಂದ್ರನ್ ಮತ್ತು ಸ್ವಾಮಿನಾಥನ್ ಮತ್ತು ವಿಧಿವಿಜ್ಞಾನ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರನ್ ಅವರು ಸಕ್ಕರೆಪಾಣಿ ಮನೆಗೆ ಆಗಮಿಸಿ ತನಿಖೆ ಆರಂಭಿಸಿದ್ದರು

ಇದೇ ವೇಳೆ ಉತ್ತರ ತಂಜಾವೂರಿನ ಬಿಜೆಪಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಇತರ ಹಿಂದೂ ಮುನ್ನಣಿ ಪದಾಧಿಕಾರಿಗಳು ಕೂಡಾ ಸಕ್ಕರೆಪಾಣಿ ಮನೆಗೆ ಭೇಟಿ ನೀಡಿ, ಪೊಲೀಸರೊಂದಿಗೆ ಸಂವಾದ ನಡೆಸಿದ್ದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿದ್ದರು.

ಆದರೆ, ತನಿಖಾಧಿಕಾರಿಗಳು ಸಕ್ಕರೆಪಾಣಿ ಮತ್ತು ಅವನ ಹೇಳಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ವೇಳೆ ಅವನ ಮನೆಯನ್ನೂ ಶೋಧಿಸಿದ್ದರು. ಆತನನ್ನು ಕೂಡಾ ವಿಚಾರಣೆಗೊಳಪಡಿಸಿದ ನಂತರ, ಆತನ ಮನೆಗೆ ಎಸೆದಿದ್ದ ಬಾಟಲಿಯಲ್ಲಿ ಬಳಸಲಾದ ವಿಕ್ಸ್ ಮತ್ತು ಪೊಲೀಸರು ಆತನ ಮನೆಯಿಂದ ವಶಪಡಿಸಿದ ಬಟ್ಟೆಗೆ ಹೊಂದಿಕೆಯಾಗಿರುವುದನ್ನು ಪೊಲೀಸರು ಕಂಡುಕೊಂಡಿದ್ದರು. ಈ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಆತನನ್ನು ಮತ್ತೆ ವಿಚಾರಣೆಗೆ ಒಳಪಡಿಸಿದಾಗ, ಪ್ರಚಾರಕ್ಕಾಗಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ ಎಂದು ಬಿಂಬಿಸಿದ್ದಾಗಿ ಸಕ್ಕರೆರಾಣಿ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಪಡೆಯುವ ಉದ್ದೇಶವು ಈ ಬಾಂಬ್ ದಾಳಿಯಲ್ಲಿ ಇತ್ತು ಎಂದು ವರದಿಗಳು ಉಲ್ಲೇಖಿಸಿವೆ. ಜೀವ ಬೆದರಿಕೆ ಇದೆ ಎಂದು ಈ ಹಿಂದೆ ಹಲವಾರು ಮುಖಂಡರಿಗೆ ಮತ್ತು ಬಲಪಂಥೀಯ ಹಿಂದೂ ಸಂಘಟನೆಗಳ ಸದಸ್ಯರಿಗೆ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಒದಗಿಸಲಾಗಿತ್ತು.

ತಪ್ಪೊಪ್ಪಿಕೊಂಡ ನಂತರ ಮೆಲಕಾವೇರಿ ಗ್ರಾಮ ಆಡಳಿತಾಧಿಕಾರಿ (ವಿಎಒ) ತಿರುಜ್ಞಾನಸಂಬಂಧಮ್ ಅವರು ಸಕ್ಕರೆಪಾಣಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ನಂತರ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್ 436 (ಬೆಂಕಿ ಅಥವಾ ಸ್ಫೋಟಕ ವಸ್ತುವಿನಿಂದ ಕಿಡಿಗೇಡಿತನ), 53 (ಕಠಿಣ ಸೆರೆವಾಸ), 153 (ಗಲಭೆಗೆ ಪ್ರಚೋದನೆ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿರುವುದು), 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶಪೂರ್ವಕ ಕೃತ್ಯ) ಮತ್ತು 505(2) (ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಅವರನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಕ್ಷನ್ ಹತ್ತಿರ ಬರುವಾಗ ಇಂತಹ ಪ್ರಚೋದೀತ ಘಟನೆಗಳು ಸರ್ವೇಸಾಮಾನ್ಯ ಅದು ನಿಗದಿತವಾಗಿ ಇಂತಹ ಸಂಘಟನೆಗಳೇ ಹೆಚ್ಚಾಗಿ ಮಾಡುವುದು ಅಂತ ಸಾಮಾನ್ಯವಾಗಿ ಗೊತ್ತಿದೆ . ಹಾಗಾಗಿ ಮೊದಲು ಮತದಾರರು ಇದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಾರೆ ಅವರಿಗೆ ಇವೆಲ್ಲ ಹೆಚ್ಚಿನ ಕೆಲಸ ಇಂಥವರ ಮೇಲೆ ಮೊದಲೇ ಪೊಲೀಸ್ ನವರು ಒಂದು ಕಣ್ಣು ಇಡುವುದೇ ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....