Homeಮುಖಪುಟ"ಆದಾಯ ನಿಂತು ಹೋಗಿದೆ": ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್...

“ಆದಾಯ ನಿಂತು ಹೋಗಿದೆ”: ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್ ಗೋಪಿ

- Advertisement -
- Advertisement -

ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಹಾಗೂ ಮಲಯಾಳಂ ಚಲನಚಿತ್ರ ನಟ, ಕೇರಳದಿಂದ ಆಯ್ಕೆಯಾದ ಮೊದಲ ಬಿಜೆಪಿ ಲೋಕಸಭಾ ಸಂಸದ ಸುರೇಶ್ ಗೋಪಿ ಅವರು ಪೂರ್ಣಾವಧಿ ನಟನೆಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಸಚಿವ ಸ್ಥಾನದಿಂದ ಕೆಳಗಿಳಿಯಲು ಬಯಸಿರುವುದಾಗಿ ಹೇಳಿದ್ದಾರೆ.

ಅಕ್ಟೋಬರ್ 12, ಭಾನುವಾರ ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತ್ರಿಶೂರ್ ಸಂಸದ ಸುರೇಶ್ ಗೋಪಿ, ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ತನ್ನ ಆದಾಯ ಗಮನಾರ್ಹವಾಗಿ ಕುಸಿದಿದೆ ಮತ್ತು ತಮ್ಮ ಕುಟುಂಬವನ್ನು ಪೋಷಿಸಲು ಚಲನಚಿತ್ರ ವೃತ್ತಿಜೀವನವನ್ನು ಪುನರಾರಂಭಿಸಲು ಬಯಸುವುದಾಗಿ ತಿಳಿಸಿದ್ದಾರೆ.

“ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಇನ್ನಷ್ಟು ಸಂಪಾದಿಸಬೇಕಾಗಿದೆ; ನನ್ನ ಆದಾಯವು ಈಗ ಸಂಪೂರ್ಣವಾಗಿ ನಿಂತುಹೋಗಿದೆ. ಲೋಕಸಭಾ ಚುನಾವಣೆಗೆ ಮೊದಲೇ ಸಚಿವ ಸ್ಥಾನದ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಇಷ್ಟವಿಲ್ಲದಿರುವುದನ್ನು ತಿಳಿಸಿದ್ದೆ. ನಟನೆಯು ನನಗೆ ಆದಾಯವನ್ನು ತರುತ್ತದೆ, ಆ ಆದಾಯದಿಂದ ನನ್ನ ಕುಟುಂಬ ಮತ್ತು ಇತರ ಕೆಲವರನ್ನು ಬೆಂಬಲಿಸಲು ನಾನು ಬಯಸುತ್ತೇನೆ. ಆದರೆ ಈಗ, ನನ್ನ ಆದಾಯದ ಮೇಲೆ ಪರಿಣಾಮ ಬೀರಿದೆ” ಎಂದು ಸುರೇಶ್ ಗೋಪಿ ಹೇಳಿದ್ದಾರೆ.

2016ರ ಅಕ್ಟೋಬರ್‌ನಲ್ಲಿ ಬಿಜೆಪಿ ಸೇರಿದ ಸುರೇಶ್ ಗೋಪಿ, 2024ರಲ್ಲಿ ಕೇರಳದಿಂದ ಲೋಕಸಭೆಗೆ ಆಯ್ಕೆಯಾದ ಮೊದಲ ಬಿಜೆಪಿ ಸಂಸದ ಎನಿಸಿಕೊಂಡರು. “ಸಚಿವನಾಗಿ ನೇಮಕಗೊಂಡಿರುವುದು ಗೆಲುವನ್ನು ಗೌರವಿಸುವ ಪಕ್ಷದ ಕ್ರಮವಾಗಿದೆ. ನಾನು ಪಕ್ಷದಲ್ಲಿ ಅತ್ಯಂತ ಕಿರಿಯ ಸದಸ್ಯನಾಗಿದ್ದರೂ, ನನ್ನನ್ನು ಸಚಿವನನ್ನಾಗಿ ಮಾಡಲಾಯಿತು. ಬಹುಶಃ ಕೇರಳದಿಂದ ಮೊದಲ ಬಿಜೆಪಿ ಸಂಸದನಾಗಲು ನನಗೆ ಸಹಾಯ ಮಾಡಿದ ಜನರಿಗಾಗಿ ನನಗೆ ಸ್ಥಾನ ಕೊಟ್ಟಿರುಬಹುದು” ಎಂದು ಸುರೇಶ್ ಗೋಪಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸುರೇಶ್ ಗೋಪಿ ಅವರು, ಆರ್‌ಎಸ್‌ಎಸ್ ಹಿರಿಯ ನಾಯಕ ಮತ್ತು ಕೇರಳದಿಂದ ಹೊಸದಾಗಿ ನಾಮನಿರ್ದೇಶನಗೊಂಡ ರಾಜ್ಯಸಭಾ ಸಂಸದ ಸಿ ಸದಾನಂದನ ಮಾಸ್ಟರ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಬೇಕೆಂದು ಸೂಚಿಸಿದ್ದಾರೆ. “ನಾನು ನಿಜವಾಗಿ ಹೇಳುತ್ತಿದ್ದೇನೆ: ಸದಾನಂದನ ಮಾಸ್ಟರ್ ಅವರನ್ನು ನನ್ನ ಸ್ಥಾನಕ್ಕೆ ಕೇಂದ್ರ ಸಚಿವರನ್ನಾಗಿ ಮಾಡಬೇಕು. ಹಾಗೇನಾದರು ಆದರೆ ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದ್ದಾರೆ.

ತಾನು ಸಚಿವ ಸ್ಥಾನದ ಆಕಾಂಕ್ಷೆಯನ್ನು ಎಂದಿಗೂ ಹೊಂದಿರಲಿಲ್ಲ ಎಂದು ಸುರೇಶ್ ಗೋಪಿ ಹೇಳಿದ್ದಾರೆ. ಚುನಾವಣೆಗೆ ಒಂದು ದಿನ ಮೊದಲು, ನಾನು ಸಚಿವನಾಗಲು ಬಯಸುವುದಿಲ್ಲ ಎಂದು ವರದಿಗಾರರಿಗೆ ಹೇಳಿದ್ದೆ. ನಾನು ನನ್ನ ಸಿನಿಮಾದಲ್ಲಿ ಮುಂದುವರಿಯಲು ಬಯಸುತ್ತೇನೆ ಎಂದಿದ್ದೆ ಎಂದು ನೆನಪಿಸಿಕೊಂಡಿದ್ದಾರೆ. ಕಣ್ಣೂರಿನ ಸಿಪಿಐಎಂ ನಾಯಕರು ಸದಾನಂದನ ಮಾಸ್ಟರ್ ರಾಜ್ಯಸಭೆಗೆ ಬಡ್ತಿ ಪಡೆದ ಬಗ್ಗೆ ಆತಂಕಗೊಂಡಿದ್ದಾರೆ. ಏಕೆಂದರೆ, ಈ ನೇಮಕಾತಿ ಸಿಪಿಐಎಂ ಭದ್ರಕೋಟೆಯಲ್ಲಿ ಬಿಜೆಪಿಯ ನಿರೀಕ್ಷೆಗಳನ್ನು ಬಲಪಡಿಸಬಹುದು ಎಂಬ ಭಯ ಅವರಿಗೆ ಇದೆ ಎಂದು ಸುರೇಶ್ ಗೋಪಿ ಇದೇ ವೇಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...