Homeಮುಖಪುಟಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಳ: ಯುಸಿಎಫ್ ಕಳವಳ

ಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಳ: ಯುಸಿಎಫ್ ಕಳವಳ

- Advertisement -
- Advertisement -

ನವದೆಹಲಿ: ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಸರ್ಕಾರವು ಪ್ರತಿಪಾದಿಸುತ್ತಿರುವ ಬಹುಸಂಖ್ಯಾತ ಮನೋಧರ್ಮವು ದೇಶದ ಅಲ್ಪಸಂಖ್ಯಾತರ ಮೇಲೆ, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿಗಳನ್ನು ಹೆಚ್ಚಿಸಿದೆ ಎಂದು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್) ಕಳವಳ ವ್ಯಕ್ತಪಡಿಸಿದೆ.

ಬಿಜೆಪಿಯ ಹಿಂದೂ ರಾಷ್ಟ್ರೀಯತೆ ಮತ್ತು ಸರ್ಕಾರದ ನಿರಾಸಕ್ತಿಯ ಕಾರಣದಿಂದ ದೇಶದಲ್ಲಿ ವರದಿಯಾದ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆಯಾಗಿದ್ದು, ಅವರ ಜೀವನ ಮತ್ತು ಗೌರವದ ಮೇಲೆ ಭಾರಿ ಹಾನಿಯನ್ನುಂಟುಮಾಡಿದೆ ಎಂದು ಅದು ಹೇಳಿದೆ.

ಕ್ರಿಶ್ಚಿಯನ್ ವಿಷಯಗಳ ಮೇಲೆ ಕೇಂದ್ರೀಕರಿಸಿದ ನವದೆಹಲಿ ಮೂಲದ ನಾಗರಿಕ ಸಮಾಜ ಸಂಘಟನೆಯಾದ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಬಿಡುಗಡೆ ಮಾಡಿದ ಇತ್ತೀಚಿನ ಅಂಕಿಅಂಶಗಳು, 2024ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 834 ಹಿಂಸಾಚಾರ ಘಟನೆಗಳು ನಡೆದಿವೆ ಎಂದು ಹೇಳಿದೆ. ಇದು 2023ರಲ್ಲಿ ಸಂಭವಿಸಿದ 734 ಘಟನೆಗಳಿಗಿಂತ 100 ಹೆಚ್ಚಾಗಿದೆ ಎಂದು ಅದು ತಿಳಿಸಿದೆ.

ಇತ್ತೀಚಿನ ಹೇಳಿಕೆಯಲ್ಲಿ, ಕ್ರಿಶ್ಚಿಯನ್ನರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಘಟನೆಗಳ ಬಗ್ಗೆ ಯುಸಿಎಫ್ ಕಳವಳ ವ್ಯಕ್ತಪಡಿಸಿದೆ. ಅತ್ಯಂತ ಕಳವಳಕಾರಿ ವಿಷಯವೆಂದರೆ ದೇಶದಲ್ಲಿ ಪ್ರತಿದಿನ ಎರಡಕ್ಕಿಂತ ಹೆಚ್ಚು ಕ್ರೈಸ್ತರು ತಮ್ಮ ಧರ್ಮವನ್ನು ಆಚರಿಸುವುದಕ್ಕಾಗಿ ಗುರಿಯಾಗುತ್ತಿದ್ದಾರೆ ಎಂದು ಅದು ಹೇಳಿದೆ.

ಈ ಘಟನೆಗಳು ಹಲವು ರೂಪಗಳನ್ನು ತೆಗೆದುಕೊಳ್ಳುತ್ತಿದೆ. ಅವುಗಳಲ್ಲಿ ಚರ್ಚ್‌ಗಳು ಅಥವಾ ಪ್ರಾರ್ಥನಾ ಸಭೆಗಳ ಮೇಲಿನ ದಾಳಿಗಳು, ತಮ್ಮ ನಂಬಿಕೆಯನ್ನು ಪಾಲಿಸುವವರ ಮೇಲೆ ಕಿರುಕುಳ, ಸಮುದಾಯಕ್ಕೆ ಸಂಬಂಧಿಸಿದ ಸಂಪನ್ಮೂಲಗಳ ಮೇಲಿನ ಬಹಿಷ್ಕಾರಗಳು ಮತ್ತು ನಿರ್ಬಂಧಗಳು, ಸುಳ್ಳು ಆರೋಪಗಳು ಮತ್ತು ಕ್ರಿಮಿನಲ್ ಪ್ರಕರಣಗಳು, ವಿಶೇಷವಾಗಿ ಬಲವಂತದ ಮತಾಂತರಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಹಲವಾರು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಧಾರ್ಮಿಕ ಮತಾಂತರದ ವಿರುದ್ಧದ ವಿವಾದಾತ್ಮಕ ಮತ್ತು ಕಠಿಣ ಕಾನೂನುಗಳು ಹಿಂದುತ್ವ ಕಾರ್ಯಕರ್ತರಿಗೆ ಮತ್ತು ಅಲ್ಲಿನ ಸರಕಾರಗಳಿಗೆ ಅಲ್ಪಸಂಖ್ಯಾತರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಅಸ್ತ್ರವನ್ನು ಒದಗಿಸಿವೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂತಹ ಘಟನೆಗಳು ವೇಗವಾಗಿ ಹೆಚ್ಚಿವೆ ಎಂದು ಅದು ತಿಳಿಸಿದೆ.

2024ರಲ್ಲಿ ಉತ್ತರಪ್ರದೇಶದಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಅತಿ ಹೆಚ್ಚು ಘಟನೆಗಳು (209) ದಾಖಲಾಗಿವೆ. ನಂತರ ಛತ್ತೀಸ್‌ಗಢ (165)ದಲ್ಲಿ ದಾಖಲಾಗಿವೆ. ಪೊಲೀಸರಿಗೆ ದೂರು ನೀಡಿದ ನಂತರವೂ ಈ ಹಲವು ಘಟನೆಗಳಲ್ಲಿ ಎಫ್‌ಐಆರ್‌ಗಳು ದಾಖಲಾಗಿಲ್ಲ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಹೇಳುತ್ತಾರೆ.

ಇದಲ್ಲದೆ, ಪೊಲೀಸರು ವಿಷಯವನ್ನು ತಿರುಚಲು ಮತ್ತು ಬಲಿಪಶುಗಳ ವಿರುದ್ಧವೇ ಸುಳ್ಳು ಆರೋಪಗಳನ್ನು ದಾಖಲಿಸುವ ಮೂಲಕ ಅಪರಾಧಿಗಳನ್ನು ಬೆಂಬಲಿಸಲು ಪ್ರಯತ್ನಿಸುತ್ತಾರೆ ಎಂದು ಬಲಿಬಶು ಕ್ರಿಶ್ಚಿಯನ್ನರು ದೂರುತ್ತಾರೆ ಮತ್ತು ಇದರಿಂದಾಗಿ ಇವರು ಪೊಲೀಸರನ್ನು ಸಂಪರ್ಕಿಸಲು ಹೆದರುತ್ತಾರೆ ಎಂದು ಯುಸಿಎಫ್ ಹೇಳಿಕೆ ತಿಳಿಸಿದೆ.

ಹೆಚ್ಚಿನ ಎಫ್‌ಐಆರ್‌ಗಳು ಬಲಿಪಶುಗಳ ವಿರುದ್ಧ ದಾಖಲಾಗುತ್ತವೆ. ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಿದರೆ, ದಾಳಿಕೋರರು ಹೆಚ್ಚು ಆಕ್ರಮಣಕಾರಿಗಳಾಗಬಹುದು ಮತ್ತು ತಮ್ಮ ಜೀವಕ್ಕೆ ಹೆಚ್ಚಿನ ಅಪಾಯವಿದೆ ಎಂದು ಪೊಲೀಸರು ಸಂತ್ರಸ್ತರಿಗೆ ಹೆದರಿಸುತ್ತಾರೆ ಎಂದು ಯುಸಿಎಫ್ ಹೇಳಿದೆ.

ಡಿಸೆಂಬರ್ 2024ರಲ್ಲಿ ದಾಖಲಾದ 73 ಘಟನೆಗಳಲ್ಲಿ 25 ಬಲಿಪಶುಗಳು ಪರಿಶಿಷ್ಟ ಪಂಗಡದವರು ಮತ್ತು 14 ಮಂದಿ ದಲಿತರು ಆಗಿದ್ದಾರೆ. ಈ ಘಟನೆಗಳಲ್ಲಿ ಒಂಬತ್ತು ಘಟನೆಗಳು ಮಹಿಳೆಯರನ್ನು ಒಳಗೊಂಡಿವೆ.  ಡಿಸೆಂಬರ್ 31ರಂದು, 400 ಕ್ಕೂ ಹೆಚ್ಚು ಹಿರಿಯ ಕ್ರಿಶ್ಚಿಯನ್ ನಾಯಕರು ಮತ್ತು 30 ಚರ್ಚ್ ಗುಂಪುಗಳ ನಿಯೋಗವು ಸಮುದಾಯದ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಸಮಸ್ಯೆಯನ್ನು ಪರಿಹರಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿತು ಎಂದು ಯುಸಿಎಫ್ ತಿಳಿಸಿದೆ.

ಕ್ರಿಸ್‌ಮಸ್ ಸಮಯದಲ್ಲಿ ಇಂತಹ ಹಲವಾರು ಪ್ರಕರಣಗಳು ದಾಖಲಾಗಿರುವುದು ನಂತರ ನಮ್ಮ ಗಮನಕ್ಕೆ ಬಂದಿತು. ಡಿಸೆಂಬರ್ 23, 2024 ರಂದು ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಅಲ್ಲಿ ಮಾತನಾಡುತ್ತಾ ಅವರು ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರವನ್ನು ಉಲ್ಲೇಖಿಸಿದರು ಆದರೆ ಜರ್ಮನಿಯಲ್ಲಿನ ಕ್ರಿಸ್‌ಮಸ್ ಮಾರುಕಟ್ಟೆ ದಾಳಿ ಮತ್ತು ಶ್ರೀಲಂಕಾದಲ್ಲಿ 2019ರ ಈಸ್ಟರ್ ಬಾಂಬ್ ದಾಳಿಯಂತಹ ಪ್ರಪಂಚದ ಇತರ ಭಾಗಗಳಲ್ಲಿ ನಡೆದ ದಾಳಿಗಳನ್ನು ಮಾತ್ರ ಅವರು ಖಂಡಿಸಿದರು ಎಂದು ಅದು ಹೇಳಿದೆ.

ಪ್ರಮುಖ ಪತ್ರಕರ್ತ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಜಾನ್ ದಯಾಳ್ ಅವರು ಭಾಷಣವು ಮೋದಿಯ ದ್ವಂದ್ವತೆಯನ್ನು ಬಹಿರಂಗಪಡಿಸಿದೆ ಎಂದು ಹೇಳಿದರು. “ಹಿಂಸಾಚಾರದ ಘಟನೆಗಳ ಬಗ್ಗೆ ಪ್ರಧಾನಿ ತಮ್ಮ ನೋವನ್ನು ವ್ಯಕ್ತಪಡಿಸಿದ ನಂತರ, 2024ರಲ್ಲಿ ದೇಶದಲ್ಲಿ ದಿನನಿತ್ಯ ನಡೆದ ಎರಡು ದ್ವೇಷ ಹಿಂಸಾಚಾರದ ಘಟನೆಗಳಲ್ಲಿ ಒಂದನ್ನು ಸಹ ಉಲ್ಲೇಖಿಸಲಿಲ್ಲ. ಬದಲಾಗಿ, ಅವರು ಜರ್ಮನ್ ದಾಳಿಯನ್ನು ಉದಾಹರಣೆಯಾಗಿ ಉಲ್ಲೇಖಿಸಿದರು. ಇದು ದ್ವಂದ್ವತೆ ಮತ್ತು ಇದು ಹಿಂದೂ ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತದೆ” ಎಂದು ಅವರು ಹೇಳಿದರು.

ಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...