Homeಕರೋನಾ ತಲ್ಲಣಕೊರೊನಾ ಪ್ರಕರಣದಲ್ಲಿ ಹೆಚ್ಚಳ: ಆಸ್ಪತ್ರೆಗಳು, ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ರಾಜ್ಯಗಳಿಗೆ ಒಕ್ಕೂಟ ಸರ್ಕಾರ ನಿರ್ದೇಶನ

ಕೊರೊನಾ ಪ್ರಕರಣದಲ್ಲಿ ಹೆಚ್ಚಳ: ಆಸ್ಪತ್ರೆಗಳು, ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ರಾಜ್ಯಗಳಿಗೆ ಒಕ್ಕೂಟ ಸರ್ಕಾರ ನಿರ್ದೇಶನ

ಡಿಸೆಂಬರ್ 31 ರಂದು, ದೇಶದಲ್ಲಿ 16,764 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇದು ಕಳೆದ 70 ದಿನಗಳಲ್ಲೇ ವರದಿಯಾದ ಅತಿ ಹೆಚ್ಚು ಪ್ರಕರಣವಾಗಿದೆ.

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕು ಹರಡುವುದನ್ನು ಪರಿಶೀಲಿಸಲು ಒಕ್ಕೂಟ ಸರ್ಕಾರವು ಶನಿವಾರ ರಾಜ್ಯಗಳಿಗೆ ಸಲಹೆಯನ್ನು ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಹೆಚ್ಚಳವನ್ನು ಎದುರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮತ್ತು ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಲು ನಿಯಂತ್ರಣ ಕೊಠಡಿಗಳನ್ನು ರಚಿಸುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ:‘3ನೇ ಅಲೆ’ಯಲ್ಲಿ 80 ಲಕ್ಷ ಪ್ರಕರಣಗಳು, 80 ಸಾವಿರ ಸಾವುಗಳು!’

ಜಿಲ್ಲೆ/ಉಪ-ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ಮತ್ತು ಕೋವಿಡ್ ಮೀಸಲಾದ ಆರೋಗ್ಯ ಮೂಲಸೌಕರ್ಯವನ್ನು ಮರುಪರಿಶೀಲಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಲಾಗಿದೆ.

“ಪ್ರಕರಣಗಳ ಹಠಾತ್ ಹೆಚ್ಚಳದಿಂದಾಗಿ ಆರೋಗ್ಯ ಮೂಲಸೌಕರ್ಯಗಳ ಒತ್ತಡದ ಉಂಟಾಗುತ್ತವೆ. ಕ್ಷೇತ್ರ ಮಟ್ಟದಲ್ಲಿ ಮೇಕ್-ಶಿಫ್ಟ್ ಆಸ್ಪತ್ರೆಗಳನ್ನು ಮಾಡಬೇಕು, ಜಿಲ್ಲಾ ಮಟ್ಟದ ಕಣ್ಗಾವಲು ಸಕ್ರಿಯಗೊಳಿಸಬೇಕು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಡಿಸೆಂಬರ್ 31 ರಂದು, ಭಾರತದಲ್ಲಿ 16,764 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದು ಕಳೆದ 70 ದಿನಗಳಲ್ಲೇ ವರದಿಯಾದ ಅತಿ ಹೆಚ್ಚು ಪ್ರಕರಣವಾಗಿದೆ.

ಶುಕ್ರವಾರದಂದು ರಾಜೇಶ್ ಭೂಷಣ್ ಮತ್ತು ಐಸಿಎಂಆರ್ ಮುಖ್ಯಸ್ಥ ಬಲರಾಮ್ ಭಾರ್ಗವ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಪಿಡ್ ಆಂಟಿಜೆನ್ ಟೆಸ್ಟ್ ಬೂತ್‌ಗಳನ್ನು ವಿವಿಧ ಸ್ಥಳಗಳಲ್ಲಿ ಸ್ಥಾಪಿಸಲು, ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ತೊಡಗಿಸಿಕೊಳ್ಳಲು ಮತ್ತು ರೋಗಲಕ್ಷಣದ ವ್ಯಕ್ತಿಗಳಿಗೆ ಹೋಮ್ ಟೆಸ್ಟ್ ಕಿಟ್‌ಗಳ ಬಳಕೆಯನ್ನು ಪ್ರೋತ್ಸಾಹಿಸಲು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ:ಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್...

0
ರಾಮ ಮಂದಿರ ನಿರ್ಮಾಣ, ಸಿಖ್‌ ತೀರ್ಥಯಾತ್ರೆಯ ಹಾದಿಯಾದ ಕರ್ತಾರ್‌ಪುರ್‌ ಸಾಹಿಬ್‌ ಕಾರಿಡಾರ್‌ ಅಭಿವೃದ್ಧಿ, ಸಿಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ ಪ್ರತಿಗಳನ್ನು ಅಫ್ಗಾನಿಸ್ತಾನದಿಂದ ವಾಪಸ್‌ ತರಲು ಸರ್ಕಾರದ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿ...