Homeಮುಖಪುಟ5 ದಿನದಲ್ಲಿ 4 ಬಾರಿ ಬೆಲೆ ಏರಿಕೆ: ಮತ್ತೆ ಗಗನಕ್ಕೇರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ

5 ದಿನದಲ್ಲಿ 4 ಬಾರಿ ಬೆಲೆ ಏರಿಕೆ: ಮತ್ತೆ ಗಗನಕ್ಕೇರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ

ಇಂದು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 103.93 ರೂ ಇದ್ದರೆ, ಡೀಸೆಲ್ ಬೆಲೆ 88.14 ರೂ ಆಗಿದೆ.

- Advertisement -
- Advertisement -

ಇಂದು ಕೂಡ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದ್ದು, ಆ ಮೂಲಕ ಕಳೆದ 5 ದಿನಗಳಲ್ಲಿ 4 ಬಾರಿ ಬೆಲೆ ಏರಿಕೆ ಕಂಡಿದೆ. ಮಂಗಳವಾರ ಅಡುಗೆ ಅನಿಲದ ಬೆಲೆ ಸಹ ಹೆಚ್ಚಳವಾಗಿದ್ದು, ಪ್ರತಿ ಸಿಲಿಂಡರ್‌ಗೆ 50 ರೂ.ಗಳಷ್ಟು ಹೆಚ್ಚಿಸಲಾಗಿದೆ. 14.2 ಕೆಜಿಯ ಸಬ್ಸಿಡಿ ರಹಿತ LPG ಸಿಲಿಂಡರ್ ಈಗ ದೆಹಲಿಯಲ್ಲಿ 949.50 ರೂ.ಗೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 103.93 ರೂ ಇದ್ದರೆ, ಡೀಸೆಲ್ ಬೆಲೆ 88.14 ರೂ ಆಗಿದೆ.

ಚುನಾವಣೆಗಳ ಕಾರಣಕ್ಕಾಗಿ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ಮಾಡಿ ಯಥಾಸ್ಥಿತಿ ಕಾಯ್ದುಕೊಂಡಿದ್ದ ಸರ್ಕಾರ ಈ ಚುನಾವಣೆಗಳು ಮುಗಿದ ನಂತರ ಬೆಲೆ ಏರಿಕೆಗೆ ಮುಂದಾಗಿದೆ. ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂಬ ಸಮರ್ಥನೆ ನೀಡುತ್ತಿದೆ.

2021ರ ನವೆಂಬರ್ 4 ರಿಂದ 2022ರ ಮಾರ್ಚ್ 22ರವರೆಗೂ ಪೆಟ್ರೋಲ್ ದರ ಲೀಟರ್‌ಗೆ 100.58 ರೂ ಇತ್ತು. ಆದರೆ ಚುನಾವಣೆ ಮುಗಿದ 15 ದಿನದ ನಂತರ ಬೆಲೆ ಏರಿಕೆ ಆರಂಭವಾಗಿದೆ. 2021ರ ನವೆಂಬರ್ 3 ರಂದು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 112 ರೂ ವರೆಗೆ ತಲುಪಿತ್ತು. ಈಗ ಪ್ರತಿ ದಿನ ಹೆಚ್ಚಳವಾಗುವುದು ನೋಡಿದರೆ ಕೆಲವೇ ತಿಂಗಳಲ್ಲಿ ಮತ್ತೆ ಅದು 120 ರೂಗಳ ಗಡಿ ದಾಟುವಂತೆ ಕಾಣುತ್ತಿದೆ.

ಇಂಧನ ಬೆಲೆ ಏರಿಕೆಯಿಂದಾಗುವ ದುಷ್ಪರಿಣಾಮಗಳು

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲೀಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ.

ಇನ್ನು ಇಂಧನ ಬೆಲೆ ಏರಿಕೆಯಿಂದಾಗಿ ಬಸ್, ರೈಲು, ಆಟೋ, ಟ್ಯಾಕ್ಸಿ ದರಗಳು ಹೆಚ್ಚಾಗುತ್ತವೆ. ಜನ ಸಾಮಾನ್ಯರ ಮೇಲೆ ಹೊರೆ ಉಂಟಾಗುತ್ತದೆ.

ಡೀಸೆಲ್ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತದೆ.

ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತದೆ.

ಇಂಧನ ಬೆಲೆ ಇಳಿಸಲು ಇರುವ ಮಾರ್ಗಗಳು

ಮೂಲ ಇಂಧನದ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ಹೆಚ್ಚಿನ ತೆರಿಗೆಯೇ ಬೆಲೆ ಹೆಚ್ಚಳಕ್ಕೆ ಮೊದಲ ಕಾರಣವಾಗಿದೆ. ಇನ್ನು ಇತ್ತೀಚೆಗೆ ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿಯೂ ಕಚ್ಚಾ ತೈಲದ ಬೆಲೆ ಹೆಚ್ಚುತ್ತಿರುವುದು ಎರಡನೇ ಕಾರಣವಾಗಿದೆ. ಆದರೆ ನರೇಂದ್ರ ಮೋದಿಯವರ ಅಧಿಕಾರಕ್ಕೆ ಬಂದ ಈ ಎಂಟು ವರ್ಷಗಳಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದ್ದರೂ ಸಹ ತೆರಿಗೆ ಹೆಚ್ಚು ಮಾಡಿ ಸುಮಾರು 15 ಲಕ್ಷ ಕೋಟಿ ರೂಗಳಷ್ಟ ಲಾಭ ಗಳಿಸಿದೆ. ಹಾಗಾಗಿ ಈಗ ಕೋವಿಡ್ ಕಾರಣದಿಂದ ಜನ ಹೈರಣಾಗಿರುವ ಸಂದರ್ಭದಲ್ಲಿ ಇಂಧನಗಳ ಮೇಲಿನ ದುಬಾರಿ ತೆರಿಗೆಯನ್ನು ಅರ್ಧ ಕಡಿಮೆ ಮಾಡಿದರೂ ಜನ ನಿಟ್ಟುಸಿರು ಬಿಡಲಿದ್ದಾರೆ.


ಇದನ್ನೂ ಓದಿ: ಗೃಹಬಳಕೆಯ ಅಡುಗೆ ಅನಿಲ (LPG) ದರ 50 ರೂ. ಏರಿಕೆ; ಸಿಲಿಂಡರ್‌‌ಗೆ 950 ರೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...