Homeಚಳವಳಿರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್‌, ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿ ಜನಸಾಮಾನ್ಯರ ಜೀವನದ ಮೇಲೆ ಬರೆ ಬಿದ್ದಿದೆ. ಮೂರು ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಬೀದಿಗಿಳಿದಿದ್ದಾರೆ. ಈ ನಡುವೆಯೇ ರಸಗೊಬ್ಬರ ಬೆಲೆ ಹೆಚ್ಚಿಸಿ ಮತ್ತಷ್ಟು ಹೊರೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೊ) ಇತ್ತೀಚೆಗೆ ನೀಡಿರುವ ನೋಟಿಸ್ ಪ್ರಕಾರ, ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) 1.200 ರೂ.ಗಳು ಇದದ್ದು, 1,900 ರೂಗಳಿಗೆ ಏರಿಕೆಯಾಗಿದೆ. ಏಕಾಏಕಿ 700 ರೂಪಾಯಿಗಳನ್ನು ಏರಿಕೆ ಮಾಡಿರುವ ಕ್ರಮಕ್ಕೆ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಇದರ ಜೊತೆಗೆ, ಇತರ ಉತ್ಪನ್ನಗಳ ಬೆಲೆಯೂ ಹೆಚ್ಚಾಗಿದೆ.

ರಸಗೊಬ್ಬರದ ಬೆಲೆ ಹೆಚ್ಚಳವನ್ನು ವಿರೋಧಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, “ಈ ಹೆಚ್ಚಳವು ರೈತರ ಮೇಲೆ ನೇರ ದಾಳಿಯಾಗಿದ್ದು, ದುಬಾರಿ ಬೆಲೆಯಲ್ಲಿ ಡಿಎಪಿ ಖರೀದಿಸಲು ರೈತರ ಮೇಲೆ ಒತ್ತಡ ಹೇರಲಾಗುತ್ತಿದೆ. ಸರ್ಕಾರದ ಈ ಕ್ರಮವನ್ನು ಯೂನಿಯನ್ ತೀವ್ರವಾಗಿ ಖಂಡಿಸುತ್ತದೆ. ಬೆಲೆ ಕಡಿಮೆಯಾಗದಿದ್ದರೆ ಹೋರಾಟ ತೀವ್ರಗೊಳ್ಳುತ್ತದೆ’ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

1,200 ರೂ ಇದ್ದ ಡಿಎಪಿ ಗೊಬ್ಬರ ಈಗ 1900 ಅಂದರೆ 700 ರೂ. ಏರಿಕೆ. ಇಫ್ಕೋ ಗೊಬ್ಬರ 1,185 ರೂ. ಇದದ್ದು 1,800 ರೂಪಾಯಿಯಾಗಿದೆ.ಅಂದರೆ 615 ರೂ. ಏರಿಕೆಯಾಗಿದೆ. 20-20 ಗೊಬ್ಬರವನ್ನು 425 ರೂಪಾಯಿ ಹೆಚ್ಚಳ ಮಾಡಲಾಗಿದ್ದು, 925 ರಿಂದ 1350 ರೂ.ಏರಿಕೆಯಾಗಿದೆ.

ರಸಗೊಬ್ಬರವನ್ನು ಒಂದೇ ಬಾರಿ ಈ ಪ್ರಮಾಣದಲ್ಲಿ ಬೆಲೆ ಏರಿಸಿದ ಇತಿಹಾಸವಿಲ್ಲ. ಇದು ರೈತರಿಗೆ ಬಹು ದೊಡ್ಡ ಹೊಡೆತ. ಬೆಲೆ ಏರಿಕೆಗಳ ನಡುವೆ ಜನಸಾಮಾನ್ಯರ ಮೇಲೆ ಸವಾರಿ ಮಾಡುತ್ತಿದೆ ಕೇಂದ್ರ ಸರ್ಕಾರ. ಬೆನ್ನೆಲುಬು ಅಂತಲೇ ರೈತನ ಬೆನ್ನೆಲುಬು ಮುರಿದಿದೆ. ಇವೆಲ್ಲಾ ಬೆಳವಣಿಗೆಗಳು ನಿರೀಕ್ಷಿತ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾಸ್ತಾನಿರುವ ಗೊಬ್ಬರವನ್ನು ಹಳೆಯ ದರಕ್ಕೆ ಮಾರಾಟ ಮಾಡಲಾಗುವುದು. ಹೊಸ ರಸಗೊಬ್ಬರ ಉತ್ಪನ್ನಕ್ಕೆ ಹೊಸ ದರ ಅನ್ವಯವಾಗಲಿದೆ ಎಂದು ಕೇಂದ್ರದ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಗಳ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಇಫ್ಕೊ ಭಾರತದ ಅತಿದೊಡ್ಡ ಸಹಕಾರಿ ಸಂಘಗಳಲ್ಲಿ ಒಂದಾಗಿದ್ದು, ಇದು ಸಂಪೂರ್ಣವಾಗಿ ಭಾರತೀಯ ಸಹಕಾರಿ ಸಂಸ್ಥೆಗಳ ಒಡೆತನದಲ್ಲಿದೆ. ಇಫ್ಕೋ ವೆಬ್‌ಸೈಟ್‌ನ ಪ್ರಕಾರ ದಕ್ಷ ರಸಗೊಬ್ಬರಗಳ ಸಮತೋಲನ ಬಳಕೆಯ ಮೂಲಕ ರೈತರ ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡಿ, ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಹೇಳುತ್ತದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ’ಇಫ್ಕೋ ಮಾಡಿರುವ ಬೆಲೆಗಳ ಹೆಚ್ಚಳವು ರೈತರಿಗೆ ಯಾವುದೇ ರೀತಿಯಲ್ಲಿ ಸಹಾಯವಾಗುವುದಿಲ್ಲ. ಎಲ್ಲಾ ಉತ್ಪನ್ನಗಳ ಬೆಲೆಗಳನ್ನು ಕಡಿಮೆ ಮಾಡದಿದ್ದರೆ ಚಳುವಳಿ ಮತ್ತಷ್ಟು ತೀವ್ರಗೊಳ್ಳುತ್ತದೆ’ ಎಂದು ಇಫ್ಕೊ ಮತ್ತು ಸರ್ಕಾರಕ್ಕೆ ಎಸ್‌ಕೆಎಂ ಎಚ್ಚರಿಕೆ ನೀಡಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 134ನೇ ದಿನಕ್ಕೆ ಕಾಲಿಟ್ಟಿದೆ. ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಲಕ್ಷಾಂತರ ರೈತರು ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...