Homeಕರ್ನಾಟಕಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ - ಯುವ ಕಾಂಗ್ರೆಸ್ ಪ್ರತಿಭಟನೆ

ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ಬೆಲೆ ಇಳಿಕೆ ಮಾಡದಿದ್ದರೆ ಬಿಜೆಪಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ಎಲ್ಲರನ್ನೂ ಘೇರಾವ್ ಮಾಡಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಯುವ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್ ಬಿ.ವಿ. ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಅಡುಗೆ ಅನಿಲ, ಪೆಟ್ರೋಲಿಯಂ ಉತ್ಪನ್ನಗಳು ಸೇರಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರದೇಶ ಯುವ ಕಾಂಗ್ರೆಸ್ ಬೆಂಗಳೂರಿನ ಆನಂದ್ ರಾವ್ ವೃತ್ತದಲ್ಲಿ ಗುರುವಾರದಂದು ಬೃಹತ್ ಪ್ರತಿಭಟನಾ ಜಾಥ ನಡೆಸಿದೆ. ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ರಾಜ್ಯಾಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ 100 ಅಡಿ ಉದ್ದದ ಸಿಲಿಂಡರ್‌‌ನ ಬಾವುಟ ಹಿಡಿದು ಹೊರಟ ಜಾಥ ಆನಂದ್ ರಾವ್ ವೃತ್ತದ ಮೇಲ್ಸೇತುವೆಯಿಂದ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಮೂಲಕ ಸಾಗಿ ವಿನೂತನವಾಗಿ ಪ್ರತಿಭಟನೆ ನಡೆಸಿತು.

ಅಡುಗೆ ಅನಿಲ ಸಿಲಿಂಡರ್ ಗಳನ್ನು ಹಿಡಿದು ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಒಕ್ಕೂಟ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ಜನ ಸಾಮಾನ್ಯರ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡಿ ಅನ್ಯಾಯ ಮಾಡುತ್ತಿದೆ. ಈ ಸರ್ಕಾರವನ್ನು ಕಿತ್ತೊಗೆಯುವವರೆಗೆ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಇದನ್ನೂ ಓದಿ: ‘ಬೆಲೆ ಏರಿಕೆಗೆ ಕಾಂಗ್ರೆಸ್‌ ಕಾರಣ’ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ!

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, “ಒಂದೆಡೆ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್‌ಗಳನ್ನು ನೀಡಿ, ಮತ್ತೊಂದೆಡೆ ಅಡುಗೆ ಸಿಲಿಂಡರ್ ಬೆಲೆಯನ್ನು ಗಣನೀಯವಾಗಿ ಏರಿಕೆ ಮಾಡಲಾಗುತ್ತಿದೆ. ಡಾ. ಮನಮೋಹನ್ ಸಿಂಗ್ ಕಾಲದಲ್ಲಿ 400 ರೂ ಇದ್ದ ಸಿಲಿಂಡರ್ ಬೆಲೆ ಇದೀಗ 900 ರೂಗೆ ತಲುಪಿದೆ. ಗೃಹಿಣಿಯರು ರಕ್ತ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಅಡುಗೆ ಮಾಡುವ ಪ್ರತಿಯೊಂದು ಪದಾರ್ಥದ ಬೆಲೆಯಲ್ಲಿಯೂ ವಿಪರೀತ ಏರಿಕೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ ಎಂದರೆ ಬೆಲೆ ಏರಿಕೆ, ನರೇಂದ್ರ ಮೋದಿ ಎಂದರೆ ಬೆಲೆ ಏರಿಕೆಯಾಗಿದೆ. ಇವರಿಗೆ ಬಡವರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಇಲ್ಲವಾಗಿದ್ದರೆ ಇಷ್ಟೊಂದು ಪ್ರಮಾಣದಲ್ಲಿ ಜನರಿಗೆ ಕಷ್ಟ ನೀಡುತ್ತಿರಲಿಲ್ಲ. ಬೆಲೆ ಇಳಿಕೆ ಮಾಡದಿದ್ದರೆ ಬಿಜೆಪಿ ಸಚಿವರು, ಸಂಸದರು, ಶಾಸಕರು ಹೀಗೆ ಎಲ್ಲರನ್ನೂ ಘೇರಾವ್ ಮಾಡಿ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಶ್ರೀನಿವಾಸ್ ಬಿ.ವಿ. ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಮಾತನಾಡಿ, “ಬಿಜೆಪಿ ನಾಯಕರು ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದು, ಅವರು ಬೆಲೆ ಏರಿಕೆ ಕುರಿತು ಮಾತನಾಡಬೇಕು. ಆದರೆ ವಿಚಿತ್ರವೆಂದರೆ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಬಿಜೆಪಿ ನಾಯಕರು ಜನತೆ ಸಂಕಷ್ಟದಲ್ಲಿದ್ದಾಗ ಯಾವತ್ತೂ ಅಂತಹ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ರಾಜ್ಯಕ್ಕೂ ಭೇಟಿ ನೀಡುವುದಿಲ್ಲ. ಯಾರದೋ ಮದುವೆ, ಇಲ್ಲವೆ ಪಕ್ಷದ ಸಭೆಗಳಿಗೆ ಆಗಮಿಸುತ್ತಾರೆ. ಬಿಜೆಪಿ ನಾಯಕರು ಮನೆಯಲ್ಲಿ ಕುಳಿತಿದ್ದಾರೆ. ನಮ್ಮ ಹೋರಾಟ ದೆಹಲಿವರೆಗೆ ಕೊಂಡೊಯ್ಯುತ್ತೇವೆ” ಎಂದು ಹೇಳಿದರು.

“ರಾಜ್ಯ ಮತ್ತು ಒಕ್ಕೂಟ ಸರ್ಕಾರದ ಬಲೆ ಏರಿಕೆ ನೀತಿಯಿಂದಾಗಿ ಜನ ಸಾಮಾನ್ಯರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜನರಿಗೆ ಉದ್ಯೋಗ ಸೃಷ್ಟಿಯಾಗಿಲ್ಲ. ಇರುವ ಉದ್ಯೋಗವೂ ನಷ್ಟವಾಗಿದೆ. ಜನರಲ್ಲಿ ಹಣ ಇಲ್ಲ. ಮುಂದಿನ 15 ದಿನಗಳ ಒಳಗಾಗಿ ಬೆಲೆ ಇಳಿಕೆಯಾಗದಿದ್ದರೆ ಬೇಡಿಕೆ ಈಡೇರುವ ತನಕ ರಾಜ್ಯದ ಮೂಲೆ ಮೂಲೆಗಳಲ್ಲಿ ಯುವ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದೆ” ಎಂದು ಎಚ್ಚರಿಕೆ ನೀಡಿದರು.

ತಮಿಳುನಾಡಿನಲ್ಲಿ ರಾಜ್ಯದ ಪಾಲಿನ 3 ರೂ ಸೆಸ್ ಕಡಿಮೆ ಮಾಡಿದ್ದು, ರಾಜ್ಯದಲ್ಲಿ ಬೆಲೆ ಇಳಿಕೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು. ರಾಜ್ಯ ಹಾಗೂ ಒಕ್ಕೂಟ ಸರ್ಕಾರದಲ್ಲಿ ಒಂದೇ ಪಕ್ಷದ ಆಡಳಿತ ಇದ್ದರೆ ಅನುಕೂಲವಾಗುತ್ತದೆ ಎನ್ನುವ ನಂಬಿಕೆ ಹುಸಿಯಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಿಂದ ಈವರೆಗೆ ಇಂತಹ ಜನ ವಿರೋಧಿ, ರೈತ, ವಿದ್ಯಾರ್ಥಿ ವಿರೋಧಿ ಸರ್ಕಾರವನ್ನು ಜನತೆ ಕಂಡಿರಲಿಲ್ಲ ಎಂದು ರಕ್ಷಾ ರಾಮಯ್ಯ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ‘ಸಾಮೂಹಿಕ ಸಭೆಗಳನ್ನು ಕಡಿಮೆಗೊಳಿಸಿ’- ಹಬ್ಬಗಳ ಆಚರಣೆ ಬಗ್ಗೆ ಒಕ್ಕೂಟ ಸರ್ಕಾರ

ವಿಡಿಯೊ ನೋಡಿ: ಮತ್ತೆ ಹೆಚ್ಚಾದ LPG ಗ್ಯಾಸ್ ಬೆಲೆ: ಜನಸಾಮಾನ್ಯರ ರಿಯಾಕ್ಷನ್ ಹೀಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...