Homeಮುಖಪುಟಆದಾಯ ಹೆಚ್ಚಿಸುವ ಬದಲು ಭ್ರಷ್ಟಾಚಾರ ಹೆಚ್ಚಿಸುತ್ತಿದೆ - ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಆದಾಯ ಹೆಚ್ಚಿಸುವ ಬದಲು ಭ್ರಷ್ಟಾಚಾರ ಹೆಚ್ಚಿಸುತ್ತಿದೆ – ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ಹಲವಾರು ವಸ್ತುಗಳ ಮೇಲಿನ ಜಿಎಸ್‌ಟಿಯನ್ನು ಹೆಚ್ಚಿಸಲಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಆದಾಯವನ್ನು ಹೆಚ್ಚಿಸುವ ಬದಲು “ಭ್ರಷ್ಟಾಚಾರವನ್ನು ಹೆಚ್ಚಿಸಲು” ಬಿಜೆಪಿ ಯೋಜಿಸುತ್ತಿದೆ ಎಂದು ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಆದಾಯ ಹೆಚ್ಚಿಸುವ ಬದಲು

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು, “ಬಿಜೆಪಿ ‘ಒಂದು ದೇಶ, ಒಂದು ತೆರಿಗೆ’ ಎಂದು ಹೇಳುತ್ತಿದೆ. ಆದರೆ ಅವರ ಈ ಹೇಳಿಕೆಯು ‘ಜುಮ್ಲಾಯಿ ಜೂಟ್’ (ಸುಳ್ಳು) ಆಗಿ ಮಾರ್ಪಟ್ಟಿದೆ. ಏಕೆಂದರೆ ಈಗ ಅವರು ಹೊಸದಾಗಿ ತೆರಿಗೆ ಸ್ಪಾಬ್‌ಗಳನ್ನು ತರುತ್ತಿದ್ದಾರೆ.” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಾಯ ಹೆಚ್ಚಿಸುವ ಬದಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಒಂದು ತೆರಿಗೆ, ಹಲವು ಸ್ಲ್ಯಾಬ್‌ಗಳು’ ಎಂದಾಗ ‘ಒಂದು ತೆರಿಗೆ’ ಎಂಬ ಘೋಷಣೆಯು ನಿಜವಾದ ಅರ್ಥದಲ್ಲಿ ಸುಳ್ಳು ಎಂದು ಸಾಬೀತಾಗಿದೆ. ವಾಸ್ತವವಾಗಿ, ತೆರಿಗೆ ದರಗಳನ್ನು ಹೆಚ್ಚಿಸುವುದರ ಹಿಂದೆ ದೊಡ್ಡ ಆಟವಿದೆ. ಭ್ರಷ್ಟಾಚಾರ ಹೆಚ್ಚಿಸುವ ಬಿಜೆಪಿಯ ಪ್ಲಾನ್ ಇದಾಗಿದ್ದು, ಅಧಿಕಾರಿಗಳ ಮೂಲಕ ಅಂಗಡಿಕಾರರು ಮತ್ತು ವ್ಯಾಪಾರಸ್ಥರ ಮೇಲೆ ಹೆಚ್ಚಿನ ಒತ್ತಡ ಹೇರುವ ಮೂಲಕ ಆದಾಯ ಹೆಚ್ಚಿಸಿ ‘ವಸೂಲಿ’ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಹಾನಿಕಾರಕ ಸರಕುಗಳಾದ ಕಾರ್ಬೋನೇಟೆಡ್ ಪಾನೀಯಗಳು, ಸಿಗರೇಟ್, ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲಿನ ತೆರಿಗೆ ದರವನ್ನು ಪ್ರಸ್ತುತ ಶೇಕಡಾ 28 ರಿಂದ ಶೇಕಡಾ 35 ಕ್ಕೆ ಹೆಚ್ಚಿಸಲಾಗುವುದು ಎಂಬ ಕೇಂದ್ರದ ಸಚಿವಾಲಯಗಳ ವರದಿಗಳ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಆದಾಗ್ಯೂ, ಮಂಗಳವಾರ ಕೇಂದ್ರೀಯ ಪರೋಕ್ಷ ತೆರಿಗೆಗಳ ಮಂಡಳಿಯು ಜಿಎಸ್‌ಟಿ ದರಗಳ ತರ್ಕಬದ್ಧಗೊಳಿಸುವಿಕೆಗೆ ಸಂಬಂಧಿಸಿ ಕೇಂದ್ರದ ಸಚಿವಾಲಯಗಳ ಶಿಫಾರಸುಗಳನ್ನು ಜಿಎಸ್‌ಟಿ ಕೌನ್ಸಿಲ್‌ಗೆ ಸಲ್ಲಿಸಬೇಕಿದೆ. ಜಿಎಸ್‌ಟಿ ಕೌನ್ಸಿಲ್ ತೆರಿಗೆ ದರಗಳನ್ನು ನಿಗದಿಪಡಿಸುವಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ.

ತೆರಿಗೆ ದರ ಹೆಚ್ಚಿದಷ್ಟೂ ತೆರಿಗೆ ವಂಚನೆ ನಡೆಯುತ್ತದೆ ಎಂಬುದು ಜಗತ್ತಿನ ನಿಯಮ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಹೆಚ್ಚು ತೆರಿಗೆ ವಂಚಿಸಿದಾಗ ಭ್ರಷ್ಟ ಆಡಳಿತರೂಢ ಪಕ್ಷ ಹೆಚ್ಚು ಆದಾಯ ಗಳಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ, ತೆರಿಗೆ ವಂಚಿಸಲು ಮತ್ತು ಅದನ್ನು ಸಂಗ್ರಹಿಸಲು ಹಿಂಬಾಗಿಲಿನ ಮಾರ್ಗಗಳನ್ನು ಮೊದಲು ಸಿದ್ಧಪಡಿಸಲಾಗಿದೆ. ಅದರ ನಂತರ ಯಾವುದೇ ಹೊಸ ತೆರಿಗೆ ಯೋಜನೆಯು ಮುಂಭಾಗದ ಬಾಗಿಲಿನಿಂದ ಹೊರಬರುತ್ತದೆ ಎಂದು ಅವರು ಆರೋಪಿಸಿದ್ದಾರೆ. ಕೊನೆಯಲ್ಲಿ ಪ್ರತಿ ತೆರಿಗೆ ಕಟ್ಟುವ ಹೊರೆ ಸಾರ್ವಜನಿಕರ ಮೇಲೆ ಬೀಳುತ್ತದೆ, ಹೀಗಾಗಿಯೇ ತೆರಿಗೆಯ ಗಿರಣಿಯಲ್ಲಿ ನಲುಗಿ ಹೋಗುವುದು ಸಾರ್ವಜನಿಕರೇ ಆಗಿದ್ದು, ಹೊಡೆತ ಬೀಳುವುದು ಸಾರ್ವಜನಿಕರಿಗೆ ಆಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...