Homeಕರ್ನಾಟಕಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

- Advertisement -
- Advertisement -

ಇತ್ತೀಚೆಗೆ ರಾಜ್ಯದ ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಕೋಮು ಸೌಹಾರ್ದ ಕದಡುತ್ತಿರುವ ಹಿನ್ನಲೆಯಲ್ಲಿ, ಸಮಾಜದಲ್ಲಿ ಶಾಂತಿ ಸೌಹಾರ್ದತೆ ಎತ್ತಿ ಹಿಡಿಯುವ ಉದ್ದೇಶದಿಂದ ಮೇ ತಿಂಗಳ 7 ರಂದು ‘ಸಾಮರಸ್ಯ ನಡಿಗೆ’ ಮತ್ತು ‘ರಾಜ್ಯ ಮಟ್ಟದ ಸೌಹಾರ್ದತಾ ಸಮಾವೇಶ’ ನಡೆಯಲಿದೆ ಎಂದು ವರದಿಯಾಗಿದೆ.

ಉಡುಪಿಯಲ್ಲಿ ಇತ್ತೀಚೆಗೆ ಹಿಜಾಬ್ ವಿಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿ ಮತ್ತು ಸಂಘಪರಿವಾರ ಗಲಭೆಯನ್ನು ಹುಟ್ಟು ಹಾಕಲು ಪ್ರಯತ್ನಿಸಿತ್ತು. ಶಾಲಾ ಮಟ್ಟದಲ್ಲಿ ಮುಗಿಯಬಹುದಾಗಿದ್ದ ಹಿಜಾಬ್ ವಿಚಾರವನ್ನು ಬಿಜೆಪಿ ಶಾಸಕ ಮತ್ತು ನಾಯಕರುಗಳು ವಿಶ್ವ ಮಟ್ಟದಲ್ಲಿ ಸುದ್ದಿಯಾಗುವಂತೆ ವಿವಾದವನ್ನಾಗಿ ಮಾಡಿ, ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದ್ದರು ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಇದರ ನಂತರ ಕೂಡಾ ಕರಾವಳಿ ಜಿಲ್ಲೆಯಲ್ಲಿ ಕೋಮು ಸೌಹಾರ್ದ ಹಾಳುಗೆಡವುವಂತಹ ಘಟನೆಗಳು ನಡೆಯುತ್ತಿದ್ದು, ನಾಗರೀಕರನ್ನು ಕಂಗೆಡಿಸಿದೆ. ಹಿಜಾಬ್ ವಿಚಾರವನ್ನೇ ಮುಂದುವರೆಸಿರುವ ಬಿಜೆಪಿ ಬೆಂಬಲಿತ ಸಂಘಟನೆಗಳು ಇತ್ತೀಚೆಗೆ ಜಾತ್ರೆಗಳಿಗೂ ಮುಸ್ಲಿಂ ವ್ಯಾಪಾರಿಗಳು ಬರಬಾರದು ಎಂದು ಬ್ಯಾನರ್‌ಗಳನ್ನು ಕಟ್ಟಿ ಮತ್ತಷ್ಟು ಕೋಮು ಧ್ರುವೀಕರಣ ಮಾಡಿ ಇಸ್ಲಾಮೊಫೊಬಿಯಾವನ್ನು ಹರಡುತ್ತಿವೆ. ಇದನ್ನು ‘ಸಹಬಾಳ್ವೆ ಉಡುಪಿ’ ತಂಡವು ಇತ್ತೀಚೆಗೆ ವಿರೋಧಿಸಿತ್ತು.

ಸೌಹಾರ್ದ ಸಮಾವೇಶದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ‘ಸಹಬಾಳ್ವೆ ಉಡುಪಿ’ ತಂಡದ ಸಂಚಾಲಕ ಅಮೃತ ಶೆಣೈ, “ಉಡುಪಿಯಿಂದ ಹಲವಾರು ವಿವಾದಗಳು ಪ್ರಾರಂಭವಾಗಿದೆ. ಇದು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಅವುಗಳೆಲ್ಲವೂ ಬಹುತೇಕ ಸಾಮರಸ್ಯ ಕೆಡಿಸುವಂತ ವಿವಾದ ಹಾಗೂ ವಿಚಾರಗಳಾಗಿವೆ. ಹಾಗಾಗಿ ಶಾಂತಿ, ಸಾಮರಸ್ಯದ ಸಂದೇಶವನ್ನು ಉಡುಪಿಯಿಂದಲೇ ಸಾರಬೇಕು ಎಂಬ ಕಾರಣದಿಂದ ಇದನ್ನು ಹಮ್ಮಿಕೊಳ್ಳುತ್ತಿದ್ದೇವೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮವನ್ನು ಸಹಬಾಳ್ವೆ ಉಡುಪಿ ಮತ್ತು ಸಮಾನ ಮನಸ್ಕ ಸಂಘಟನೆಗಳ ಅಡಿಯಲ್ಲಿ ಇದನ್ನು ನಡೆಸಲಿದ್ದೇವೆ ಎಂದು ಅಮೃತ್‌ ಶೆಣೈ ಹೇಳಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಸೌಹಾರ್ಧ ಪಾದಯಾತ್ರೆ ಮತ್ತು ಬಹಿರಂಗ ಸಭೆ ನಡೆಯಲಿದೆ. ಮುಖ್ಯವಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಹಾಗೂ ರಾಜಕೀಯೇತರ ನಾಯಕರುಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಅಮೃತ್‌ ಶೆಣೈ ಹೇಳಿದ್ದಾರೆ.

ಇದನ್ನೂ ಓದಿ: ನಾಲ್ಕು ತಿಂಗಳ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ; ಗುಲ್ಬರ್ಗಾದಲ್ಲಿ 1.45, ಮೈಸೂರಿನಲ್ಲಿ 1 ರೂ. ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...