Homeಮುಖಪುಟದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

- Advertisement -
- Advertisement -

ಕೊರೊನಾ ಪ್ರಕರಣಗಳ ಏರಿಕೆ, ಸಾವುಗಳು, ಆರೋಗ್ಯ ಸೌಕರ್ಯಗಳ ಅಲಭ್ಯತೆ ನಡುವೆ ದೇಶವೇ ಜರ್ಜರಿತವಾಗಿದೆ. ಇದರ ನಡುವೆ ಬ್ಲಾಕ್ ಫಂಗಸ್ ಸೋಂಕು ಜನರಲ್ಲಿ ಮತ್ತಷ್ಟು ಆತಂಕ ಉಂಟುಮಾಡುತ್ತಿದೆ. ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು ಇದ್ದಾರೆ ಎಂದು ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಬ್ಲಾಕ್ ಫಂಗಸ್ ಸೋಂಕಿನಿಂದ ಹೆಚ್ಚಿನ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದ್ದು, ರಾಜ್ಯದಲ್ಲಿ 2,000 ಪ್ರಕರಣಗಳು ಇರಬಹುದು. ಕೊರೊನಾ ಪ್ರಕರಣಗಳ ಏರಿಕೆ ಜೊತೆಗೆ ಬ್ಲಾಕ್ ಫಂಗಸ್ ಸೋಂಕಿತರು ಏರಿಕೆಯಾಗಬಹುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

ವೈದ್ಯಕೀಯ ಕಾಲೇಜುಗಳೊಂದಿಗಿರುವ ಆಸ್ಪತ್ರೆಗಳನ್ನು ಬ್ಲಾಕ್ ಫಂಗಸ್ ಸೋಂಕು ಚಿಕಿತ್ಸಾ ಕೇಂದ್ರಗಳಾಗಿ ಬಳಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ಬುಧವಾರ (ಮೇ 12) ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ಥಾಣೆಯಲ್ಲಿ ಇತರ ಆರು ರೋಗಿಗಳು ಈ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಎರಡು ದಿನಗಳ ಹಿಂದೆ ಒಡಿಶಾ ರಾಜ್ಯದಲ್ಲಿ ಮೊದಲ ಬ್ಲಾಕ್ ಫಂಗಸ್ ಪ್ರಕರಣವನ್ನು ವರದಿಯಾಗಿದೆ. ಒಡಿಶಾದ ಜಜ್ಪುರ್ ಜಿಲ್ಲೆಯ 71 ವರ್ಷದ ಕೊರೊನಾ ರೋಗಿಯಲ್ಲಿ ಸೋಂಕು ಕಂಡು ಬಂದಿದ್ದು, ಅವರು ಅನಿಯಂತ್ರಿತ ಮಧುಮೇಹವನ್ನು ಸಹ ಹೊಂದಿದ್ದಾರೆ.

ಇತ್ತ ದೆಹಲಿ, ಗುಜರಾತ್ ಮತ್ತು ಇತರ ಕೆಲವು ರಾಜ್ಯಗಳಲ್ಲಿ ಈ ಸೋಂಕಿನ ಈಗಾಗಲೇ ಆತಂಕ ಉಂಟುಮಾಡುತ್ತಿದೆ.

ಕಳೆದ 12 ಗಂಟೆಗಳಲ್ಲಿ ಜೈಪುರದಲ್ಲಿ ಬ್ಲಾಕ್ ಫಂಗಸ್ ಸೋಂಕಿನ 14 ರೋಗಿಗಳು ಕಂಡು ಬಂದಿದ್ದಾರೆ.  ರಾಂಚಿಯಿಂದ ಇಬ್ಬರು, ರಾಜಸ್ಥಾನದಿಂದ ನಾಲ್ಕು ಮಂದಿ, ಉತ್ತರ ಪ್ರದೇಶದ ಐವರು ಮತ್ತು ದೆಹಲಿ-ಎನ್‌ಸಿಆರ್‌ನಿಂದ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ. ಈ ಸೋಂಕಿತರಲ್ಲಿ ಹಲವರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ ಗುಜರಾತ್‌ನಲ್ಲಿ ಅತಿ ಹೆಚ್ಚು ಬ್ಲಾಕ್ ಫಂಗಸ್ ಪ್ರಕರಣಗಳು ವರದಿಯಾಗಿವೆ. ಗುಜರಾತ್ ಸರ್ಕಾರವು ಅಂತಹ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ಸ್ಥಾಪಿಸಲು ಪ್ರಾರಂಭಿಸಿದೆ ಮತ್ತು ಅದರ ಚಿಕಿತ್ಸೆಯಲ್ಲಿ ಬಳಸುವ 5,000 ಔಷಧದ ಬಾಟಲುಗಳನ್ನು ಸಂಗ್ರಹಿಸಿದೆ. ಗುಜರಾತ್ ಇದುವರೆಗೆ 100 ಕ್ಕೂ ಹೆಚ್ಚು  ಪ್ರಕರಣಗಳನ್ನು ವರದಿ ಮಾಡಿದ್ದು, ಇದು ಅನೇಕ ರೋಗಿಗಳನ್ನು ಕುರುಡನನ್ನಾಗಿ ಮಾಡಿದೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಈ ಸೋಂಕಿನಿಂದ ಬಳಲುತ್ತಿರುವ ರೋಗಿಗಳ ಮೇಲೆ ಬಳಸಲಾಗುತ್ತಿರುವ ಆಂಫೊಟೆರಿಸಿನ್ ಬಿ (Amphotericin B) ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೆಚ್ಚುವರಿ ಆಮದು ಮತ್ತು ದೇಶೀಯ ಉತ್ಪಾದನೆಯಲ್ಲಿ ಹೆಚ್ಚಳದೊಂದಿಗೆ ಔಷಧಿ ಪೂರೈಕೆ ಸುಧಾರಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ತಿಳಿಸಿದೆ.

ಬ್ಲಾಕ್ ಫಂಗಸ್ ಸೋಂಕಿನ ಲಕ್ಷಣಗಳು ತಲೆನೋವು, ಜ್ವರ, ಕಣ್ಣುಗಳ ಕೆಳಗೆ ನೋವು, ಮೂಗಿನ ಅಥವಾ ಸೈನಸ್ ದಟ್ಟಣೆ ಮತ್ತು ದೃಷ್ಟಿ ಭಾಗಶಃ ನಷ್ಟ. ಕೆಲವರು ಕೆಮ್ಮು, ಉಸಿರಾಟದ ತೊಂದರೆ, ರಕ್ತಸಿಕ್ತ ವಾಂತಿ ಮತ್ತು ಬದಲಾದ ಮಾನಸಿಕ ಸ್ಥಿತಿ ಕಂಡುಬರುತ್ತದೆ.

ಕೊರೊನಾ ರೋಗಿಗಳಲ್ಲಿ ಅನಿಯಂತ್ರಿತ ಮಧುಮೇಹ ಮತ್ತು ದೀರ್ಘಕಾಲದ ತೀವ್ರ ನಿಗಾ ಘಟಕ (ಐಸಿಯು) ವಾಸ್ತವ್ಯದಲ್ಲಿ ಈ ಸೋಂಕು ಕಂಡುಬಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಬ್ಲಾಕ್ ಫಂಗಸ್ ಸೋಂಕು ಹೊಸದಲ್ಲ ಆದರೆ ಕೊರೊನಾ ಸೋಂಕಿತ ರೋಗಿಗಳಲ್ಲಿ ಹೆಚ್ಚುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಏಕೆಂದರೆ ಸ್ಟೀರಾಯಡ್‌ಗಳ ಬಳಕೆಯು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಕೆಲವು ಔಷಧಿಗಳು ರೋಗಿಗಳ ರೋಗನಿರೋಧಕ ಶಕ್ತಿಯನ್ನು ಕಡಿಮೆಗೊಳಿಸುತ್ತವೆ ಎಂದು ತಜ್ಞರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...