Homeಅಂತರಾಷ್ಟ್ರೀಯಹೆಚ್ಚುತ್ತಿರುವ ಅತ್ಯಾಚಾರ: ಪಾಕಿಸ್ತಾನದ ಪಂಜಾಬ್‌ನಲ್ಲಿ ‘ತುರ್ತು ಪರಿಸ್ಥಿತಿ’ ಘೋಷಣೆ

ಹೆಚ್ಚುತ್ತಿರುವ ಅತ್ಯಾಚಾರ: ಪಾಕಿಸ್ತಾನದ ಪಂಜಾಬ್‌ನಲ್ಲಿ ‘ತುರ್ತು ಪರಿಸ್ಥಿತಿ’ ಘೋಷಣೆ

- Advertisement -
- Advertisement -

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳು ತೀವ್ರ ಹೆಚ್ಚಳವಾಗಿರುವುದರಿಂದ ಅಲ್ಲಿ ‘ತುರ್ತು ಪರಿಸ್ಥಿತಿ’ ಘೋಷಿಸಲು ಸರ್ಕಾರ ನಿರ್ಧರಿಸಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಂಜಾಬ್ ಗೃಹ ಸಚಿವ ಅಟ್ಟ ತರಾರ್, ಇಂತಹ ಘಟನೆಗಳು ಹೆಚ್ಚಾಗುತ್ತಿರುವುದು ಸಮಾಜ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಪಂಜಾಬ್‌ನಲ್ಲಿ ಪ್ರತಿದಿನ ನಾಲ್ಕೈದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಲೈಂಗಿಕ ಕಿರುಕುಳ, ನಿಂದನೆ ಮತ್ತು ಪೀಡನೆ ಪ್ರಕರಣಗಳನ್ನು ಎದುರಿಸಲು ಸರ್ಕಾರ ವಿಶೇಷ ಕ್ರಮಗಳನ್ನು ಪರಿಗಣಿಸುತ್ತಿದೆ ಎಂದು ಅವರು ಹೇಳಿದ್ದಾರೆ ಎಂದು ಜಿಯೋ ನ್ಯೂಸ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅತ್ಯಾಚಾರ ಪ್ರಕರಣಗಳನ್ನು ಎದುರಿಸಲು, ಆಡಳಿತವು ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ” ಎಂದು ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ನಾಗರಿಕ ಸಮಾಜ, ಮಹಿಳಾ ಹಕ್ಕುಗಳ ಸಂಘಟನೆಗಳು, ಶಿಕ್ಷಕರು ಮತ್ತು ವಕೀಲರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇದಲ್ಲದೆ, ಪೋಷಕರು ತಮ್ಮ ಮಕ್ಕಳಿಗೆ ಸುರಕ್ಷತೆಯ ಮಹತ್ವವನ್ನು ಕಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹೈದ್ರಾಬಾದ್ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ತೆಲಂಗಾಣ ಪೊಲೀಸರ ಚಿಂತನೆ

ಹಲವಾರು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ, ಸರ್ಕಾರವು ಅತ್ಯಾಚಾರ ವಿರೋಧಿ ಅಭಿಯಾನವನ್ನು ಪ್ರಾರಂಭಿಸಿದೆ ಮತ್ತು ಶಾಲೆಗಳಲ್ಲಿ ಕಿರುಕುಳದ ಬಗ್ಗೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಲಾಗುವುದು ಎಂದು ತರಾರ್ ಹೇಳಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ಹೇಗೆ ರಕ್ಷಿಸಬೇಕು ಎಂಬುದನ್ನು ಕಲಿಯುವ ಸಮಯ ಇದೀಗ ಬಂದಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ಸರ್ಕಾರವು ಡಿಎನ್‌ಎ ಮಾದರಿಗಳ ಸಂಖ್ಯೆಯನ್ನು ತ್ವರಿತ ಆಧಾರದ ಮೇಲೆ ಹೆಚ್ಚಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನದಾದ್ಯಂತ ಲಿಂಗ ಹಿಂಸೆಯು ತೀವ್ರವಾಗಿ ಹರಡುತ್ತಿದ್ದು, ಅದರ ವಿರುದ್ಧ ಹೋರಾಟವನ್ನೂ ನಡೆಸಲಾಗುತ್ತಿದೆ. ಈ ಸಾಂಕ್ರಾಮಿಕದಿಂದ ದೇಶದಲ್ಲಿ ಹೆಣ್ಣು ಮಕ್ಕಳು ತರಗತಿಳಿಗೆ ಹೋಗುತ್ತಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಾಜಸ್ಥಾನ: ಸಚಿವರ ಮಗನ ಮೇಲೆ ಅತ್ಯಾಚಾರ ಆರೋಪ, ಯುವತಿ ಮೇಲೆ ಮಸಿ ದಾಳಿ

ಗ್ಲೋಬಲ್ ಜೆಂಡರ್ ಗ್ಯಾಪ್ ಇಂಡೆಕ್ಸ್ 2021 ರ ಶ್ರೇಯಾಂಕದ ಪ್ರಕಾರ ಪಾಕಿಸ್ತಾನವು 156 ದೇಶಗಳಲ್ಲಿ 153 ನೇ ಸ್ಥಾನದಲ್ಲಿದೆ. ಇದರ ನಂತರದ ಸ್ಥಾನದಲ್ಲಿ ಇರಾಕ್, ಯೆಮೆನ್ ಮತ್ತು ಅಫ್ಘಾನಿಸ್ತಾನವಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ | ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ್ : ವರದಿ

0
ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌...