Homeಮುಖಪುಟಹೆಚ್ಚುತ್ತಿರುವ ಬೆಂಬಲ - ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ಇದು ರೈತರ ಜೀವನ್ಮರಣದ ಪ್ರಶ್ನೆ, ಯಾರೂ ಚಿಂತಿಸಬೇಡಿ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ, ಐಕ್ಯತೆಯಿಂದ ಇರೋಣ- ಚೌಧರಿ ಸಾಹಿಬ್ ಅಜಿತ್‌ಸಿಂಗ್

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನಡೆದ ಪಿತೂರಿಯಿಂದ ಕೆಲವು ಅಹಿತಕರ ಘಟನೆಗಳು ನಡೆದಿತ್ತು. ಇದರಿಂದ ಹೋರಾಟಕ್ಕೆ ಹಿನ್ನಡೆಯಾಗಿದೆಯೆಂದು ಕೆಲವರು ಭಾವಿಸಿದ್ದರು. ಆದರೆ ಇದು ಸುಳ್ಳು ಎಂಬುದನ್ನು ದೇಶಕ್ಕೆ ತಿಳಿಸಲು ರೈತರಿಗೆ ಹೆಚ್ಚಿನ ಸಮಯ ಬೇಕಾಗಲಿಲ್ಲ.

ಉತ್ತರಪ್ರದೇಶ ಮತ್ತು ದೆಹಲಿ ಗಡಿಗಳಲ್ಲಿರುವ ರೈತರನ್ನು ಖಾಲಿ ಮಾಡಿಸಲು ಸಾವಿರಾರು ಸಂಖ್ಯೆಯಲ್ಲಿ ಪೊಲೀಸರು ಜಮಾವಣೆಗೊಂಡಿದ್ದರು. ಆದರೆ, ರೈತರ ಹೋರಾಟ ದೆಹಲಿ ಗಡಿಗಳಲ್ಲಿ ಇನ್ನೂ ತೀವ್ರಗೊಳ್ಳುತ್ತಿದ್ದು, ಬೆಂಬಲದ ಮಹಾಪೂರವೇ ಹರಿದು ಬರುತ್ತಿದೆ. ಗುರುವಾರ ಮಧ್ಯರಾತ್ರಿಯೇ ಹರಿಯಾಣ ಮತ್ತು ಉತ್ತರಪ್ರದೇಶದ ಹತ್ತಾರು ಹಳ್ಳಿಯ ಜನರು ಗಡಿಗಳಿಗೆ ಆಗಮಿಸಿ ರೈತ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ ಎಂದು ಘೋಷಿಸಿದ್ದಾರೆ.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ…

“ಸುಪ್ರೀಂ ಕೋರ್ಟ್ ಶಾಂತಿಯುತ ಧರಣಿಯನ್ನು ಸಮರ್ಥಿಸಿದೆ. ಗಾಜಿಪುರ ಗಡಿಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಇದರ ಹೊರತಾಗಿಯೂ, ಸರ್ಕಾರವು ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ. ಇದು ಉತ್ತರ ಪ್ರದೇಶ ಸರ್ಕಾರದ ಮುಖ” ಎಂದು ರಾಕೇಶ್ ಟಿಕಾಯತ್‌ ಕಿಡಿಕಾರಿದ್ದಾರೆ.

ಇನ್ನು, ಮಾಜಿ ಕೇಂದ್ರ ಸಚಿವ, ರಾಷ್ಟ್ರೀಯ ಲೋಕದಳ್ ಮುಖ್ಯಸ್ಥ ಅಜಿತ್‌ಸಿಂಗ್ ಚೌಧರಿ ಬಿಕೆಯು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಿತ್‌ಸಿಂಗ್ ಪುತ್ರ ಮತ್ತು ಆರ್‌ಎಲ್‌ಡಿ ಉಪಾಧ್ಯಕ್ಷ ಜಯಂತ್ ಚೌಧರಿ, ಅದರಲ್ಲಿ ಅಜಿತ್‌ಸಿಂಗ್ ಸಂದೇಶವನ್ನು ಹಾಕಿದ್ದಾರೆ. “ಇದು ರೈತರ ಜೀವನ್ಮರಣದ ಪ್ರಶ್ನೆ, ಯಾರೂ ಚಿಂತಿಸಬೇಡಿ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ, ಐಕ್ಯತೆಯಿಂದ ಇರೋಣ- ಇದು ಚೌಧರಿ ಸಾಹಿಬ್ (ಅಜಿತ್‌ಸಿಂಗ್) ಅವರ ಸಂದೇಶ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಅಜಿತ್‌ಸಿಂಗ್ ಅವರು ರಾಕೇಶ್ ಟಿಕಾಯತ್ ಮತ್ತು ಅವರ ಸಹೋದರ ನರೇಶ್ ಟಿಕಾಯತ್ ಅವರೊಂದಿಗೆ ಮಾತನಾಡಿದ್ದು, ಬಿಕೆಯು ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಿನ್ನೆ ಯುಪಿ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಜಮಾವಣೆ ಮಾಡಿ ರೈತರನ್ನು ಸ್ಥಳದಿಂದ ಎತ್ತಂಗಡಿ ಮಾಡಲು ಯುಪಿ ಸರ್ಕಾರ ಯತ್ನಿಸಿದ ನಂತರ ಉತ್ತರ ಭಾತರದ ಪ್ರಮುಖ ರಾಜ್ಯಗಳಲ್ಲಿ ರೈತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಿನ್ನೆ ರಾತ್ರಿಯಿಂದಲೇ ಸಾವಿರಾರು ರೈತರು, ನೂರಾರು ಟ್ರ್ಯಾಕ್ಟರ್‌ಗಳು ಈಗ ಗಾಜಿಪುರ ಮತ್ತು ಸಿಂಘು ಗಡಿ ತಲುಪಿದ್ದಾರೆ.

ಟಿಕಾಯತ್ ಅವರ ರಾತ್ರಿಯ ಭಾವನಾತ್ಮಕ ಭಾಷಣವು ಸಾಕಷ್ಟು ಜನಪ್ರಿಯವಾಗಿದ್ದು, ರೈತ ಹೋರಾಟಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...