Homeಕರ್ನಾಟಕಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

- Advertisement -
- Advertisement -

ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪ್ರಿಯತಮೆಯ ಸಾವಿನ ಸುದ್ದಿ ತಿಳಿದು ಆಘಾತಕ್ಕೆ ಒಳಗಾದ ಯುವಕ ತಾನೂ ರೈಲಿಗೆ ತಲೆ ಕೊಟ್ಟು ಅತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ.

ಬೋಡಗುರ್ಕಿ ಗ್ರಾಮದ ಪರಿಶಿಷ್ಟ ಜಾತಿಯ ಗಂಗಾಧರ (23) ಮತ್ತು ಗೊಲ್ಲ ಸಮುದಾಯದ ಕೀರ್ತಿ (20) ಪರಸ್ಪರ ಪ್ರೀತಿಸುತ್ತಿದ್ದರು. ಇದು ಗೊತ್ತಾಗಿ ಕೀರ್ತಿಯ ತಂದೆ ಕೃಷ್ಣಮೂರ್ತಿ ಮಂಗಳವಾರ ಬೆಳಗ್ಗೆ ತಮ್ಮ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಈ ವಿಷಯ ಕೇಳದ ಯುವಕ ಮೈಸೂರು-ಚೆನ್ನೈ, ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೆಜಿಎಫ್‌ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದ ಕೀರ್ತಿ ಮತ್ತು ಆ ಯುವಕನ ಮನೆಗಳು ಒಂದೇ ಕಡೆ ಇವೆ. ದ್ವಿತೀಯ ಪಿಯುಸಿ ಅನುತ್ತೀರ್ಣನಾಗಿದ್ದ ಗಂಗಾದಧರ ಗಾರೆ ಕೆಲಸ ಮಾಡುತ್ತಿದ್ದನು. ಇವರಿಬ್ಬರೂ ಸಹ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಪ್ರೀತಿಯ ವಿಚಾರವನ್ನು ಗಂಗಾಧರ ಕೀರ್ತಿಯ ತಂದೆ – ಕೃಷ್ಣಮೂರ್ತಿಗೆ ತಿಳಿಸಿ ಮದುವೆ ಮಾಡಿಕೊಡಲು ಕೇಳಿದ್ದಾರೆ. ಆದರೆ ಜಾತಿಯ ಕಾರಣದಿಂದ ಕೀರ್ತಿಯ ಮನೆಯವರು ಮದುವೆಗೆ ಒಪ್ಪಿರಲಿಲ್ಲ ಗಂಗಾಧರ್‌ನನ್ನು ಮರೆತುಬಿಡು ಎಂದು ಕೀರ್ತಿಯ ಪೋಷಕರು ಆಕೆಗೆ ಹಲವು ಬಾರಿ ಹೇಳಿದ್ದಾರೆ.

ಆದರೆ ಈ ಪ್ರೇಮಿಗಳಿಬ್ಬರು ತಮ್ಮ ಪ್ರೀತಿಯನ್ನು ಮುಂದುವರೆಸಿದ್ದಾರೆ ಈ ವಿಚಾರವಾಗಿ ಮಂಗಳವಾರ ಬೆಳಿಗ್ಗೆ ಕೀರ್ತಿ ಹಾಗೂ ಆಕೆಯ ತಂದೆ ಕೃಷ್ಣಮೂರ್ತಿ ನಡುವೆ ವಾಗ್ವಾದ ಬೆಳೆದು, ಕೋಪಗೊಂಡ ಕೃಷ್ಣಮೂರ್ತಿ (42) ಮಗಳನ್ನು ಹತ್ತು ಹಿಸುಕಿ ಸಾಯಿಸಿದ್ದಾನೆ ಗಾಢವಾಗಿ ಪ್ರೀತಿಸುತ್ತಿದ್ದ ಕೀರ್ತಿ ಸತ್ತಿರುವುದನ್ನು ನೋಡಿದ ಗಂಗಾಧ‌ರ ಅದೇ ಗ್ರಾಮದ ಬಳಿ ಚಲಿಸುತ್ತಿದ್ದ ಪ್ರೆಸ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಕಾಮಸಮುದ್ರ ಪೊಲೀಸ್‌ ಠಾಣೆಯಲ್ಲಿ ಕೃಷ್ಣಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಕೋಲಾರ ಎಸ್‌ಪಿ ಧರಣಿದೇವಿ ಮಾಲಗತ್ತಿ ಮಾಹಿತಿ ನೀಡಿದ್ದು, ”ಪ್ರೀತಿಸಿದ ಯುವಕನನ್ನೇ ಮದುವೆಯಾಗುವುದಾಗಿ ಕೀರ್ತಿ ಹಟ ಹಿಡಿದಿದ್ದಳು. ಈ ಸಂಬಂಧ ಯುವತಿಯ ಮನೆಯಲ್ಲಿ ಸೋಮವಾರ ರಾತ್ರಿ ಜಗಳ ನಡೆದಿತ್ತು. ಮಂಗಳವಾರ ಬೆಳಿಗ್ಗೆ ಕೃಷ್ಣಮೂರ್ತಿ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಇದು ಗೊತ್ತಾಗಿ ಯುವಕ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...