Homeಕರ್ನಾಟಕಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಆಗಸ್ಟ್ 11 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದೆ.

ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಳೆಗಾಲದ ಅಧಿವೇಶನದಲ್ಲಿಯೇ ಈ ಕುರಿತು ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದೆ. ಒಳಮೀಸಲಾತಿ ಹೋರಾಟವು ಒಂದು ನಿರ್ದಿಷ್ಟ ಜಾತಿಗೆ ಸೀಮಿತವಾಗಿಲ್ಲ, ಬದಲಿಗೆ 101 ಜಾತಿಗಳು ತಮ್ಮ ಹಕ್ಕುಗಳಿಗಾಗಿ ನಡೆಸುತ್ತಿರುವ ಹೋರಾಟ ಎಂದು ಸಮಿತಿ ಸ್ಪಷ್ಟಪಡಿಸಿದೆ.

ಕಳೆದ 30 ವರ್ಷಗಳಿಂದ ನಡೆಯುತ್ತಿರುವ ಈ ಹೋರಾಟದಿಂದಾಗಿ ಅವಕಾಶ ವಂಚಿತ ಸಮುದಾಯಗಳ ಹಲವು ತಲೆಮಾರುಗಳು ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಸ್ಥಾನಮಾನಗಳನ್ನು ಕಳೆದುಕೊಂಡಿವೆ ಎಂದು ಸಮಿತಿಯ ಮುಖಂಡರು ತಿಳಿಸಿದ್ದಾರೆ. ಈ ಎಲ್ಲಾ ನಷ್ಟಗಳಿಗೆ ಆಡಳಿತಾರೂಢ ಎಲ್ಲ ಪಕ್ಷಗಳ ನಿರ್ಲಕ್ಷ್ಯವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

 

ಸುಪ್ರೀಂ ಕೋರ್ಟ್ ತೀರ್ಪು ಮತ್ತು ಸರ್ಕಾರದ ನಿಲುವು

ಆಗಸ್ಟ್ 1, 2024ರಂದು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಪೀಠವು ಒಳಮೀಸಲಾತಿ ಪರವಾಗಿ ನೀಡಿದ ತೀರ್ಪು ಸಂವಿಧಾನಬದ್ಧ ಮತ್ತು ಸಾಮಾಜಿಕ ನ್ಯಾಯದ ಗೆಲುವು ಎಂದು ಹೋರಾಟಗಾರರು ಬಣ್ಣಿಸಿದ್ದಾರೆ. ಈ ತೀರ್ಪು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಆಶಯವನ್ನು ಎತ್ತಿಹಿಡಿದಿದೆ. ಆದರೆ, ತೀರ್ಪು ಬಂದು ಒಂದು ವರ್ಷ ಗತಿಸಿದ್ದರೂ ಸರ್ಕಾರ ಮೀಸಲಾತಿ ಜಾರಿಗೊಳಿಸಲು ವಿಳಂಬ ಮಾಡುತ್ತಿರುವುದಕ್ಕೆ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹಿರಿಯ ಹೋರಾಟಗಾರರು ಹೇಳುವಂತೆ, ಈ ಹೋರಾಟ ಯಾವುದೇ ರಾಜಕೀಯ ಪಕ್ಷದ ಹಿತಾಸಕ್ತಿಗೆ ಒಳಪಟ್ಟಿಲ್ಲ. ಇದು ಸಾಮಾಜಿಕ ಮತ್ತು ಸಾಂವಿಧಾನಿಕ ನ್ಯಾಯಕ್ಕಾಗಿ ನಡೆಯುತ್ತಿರುವ ದೀರ್ಘ ಹೋರಾಟವಾಗಿದೆ. ದವಿಂದರ್ ಸಿಂಗ್ V/s ಪಂಜಾಬ್ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ನ್ಯಾಯದ ಪರ ಅಭಿಪ್ರಾಯವು ಒಳಮೀಸಲಾತಿ ಪರವಾದ ತೀರ್ಪಿಗೆ ಮೂಲ ಪ್ರೇರಣೆಯಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಈ ತೀರ್ಪಿನ ನಂತರವೂ ಕೆಲವರು ತೆರೆಮರೆಯಲ್ಲಿ ನಡೆಸಿದ ಕುಟಿಲ ಪ್ರಯತ್ನಗಳು ವಿಫಲವಾಗಿವೆ. ಈಗ ಜಾರಿ ಮಾಡದೆ ಬೇರೆ ದಾರಿಯಿಲ್ಲ ಎಂದು ಸಮಿತಿ ಪ್ರತಿಪಾದಿಸಿದೆ.

ನಾಗಮೋಹನ್ ದಾಸ್ ಆಯೋಗದ ವರದಿ ಮತ್ತು ಸರ್ಕಾರದ ಮುಂದಿರುವ ಅವಕಾಶಗಳು

ನ್ಯಾಯಾಲಯದ ನಿರ್ದೇಶನದಂತೆ ಸರ್ಕಾರವೇ ನೇಮಿಸಿದ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗವು ವೈಜ್ಞಾನಿಕ ಮತ್ತು ವಸ್ತುನಿಷ್ಠ ದತ್ತಾಂಶಗಳನ್ನು ಸಂಗ್ರಹಿಸುವ ಗಡುವು ಜುಲೈ 31ಕ್ಕೆ ಮುಕ್ತಾಯಗೊಂಡಿದೆ. ಆಗಸ್ಟ್ 11 ರಿಂದ ಪ್ರಾರಂಭವಾಗುವ ಮಳೆಗಾಲದ ಅಧಿವೇಶನದಲ್ಲಿ ಈ ವರದಿಯನ್ನು ಮಂಡಿಸಿ, ಒಳಮೀಸಲಾತಿಯನ್ನು ಸರ್ವಾನುಮತದಿಂದ ಅಂಗೀಕರಿಸಬೇಕು ಎಂದು ಸಮಿತಿ ಆಗ್ರಹಿಸಿದೆ.

ಇದು ಸರ್ಕಾರದ ಮುಂದಿರುವ ಸದಾವಕಾಶವಾಗಿದೆ. ಇದರ ಬದಲಾಗಿ, ಮತ್ತೊಂದು ಸಂಪುಟ ಉಪಸಮಿತಿ ರಚಿಸುವ ಅಥವಾ ತಜ್ಞರ ಸಲಹೆಯ ನೆಪದಲ್ಲಿ ಹೋರಾಟವನ್ನು ವಿಳಂಬಗೊಳಿಸುವ ಪ್ರಯತ್ನ ಮಾಡಿದರೆ ಅದನ್ನು ಸಹಿಸುವುದಿಲ್ಲ ಎಂದು ಸಮಿತಿ ಎಚ್ಚರಿಕೆ ನೀಡಿದೆ. ತಡಮಾಡಿದಷ್ಟು ಎಡವಟ್ಟುಗಳು ಹೆಚ್ಚುತ್ತವೆ ಎಂಬ ಗತಕಾಲದ ಹೋರಾಟಗಳ ಗುಣಪಾಠವನ್ನು ಮುಖ್ಯಮಂತ್ರಿಯವರು ನೆನಪಿಸಿಕೊಳ್ಳಬೇಕು ಎಂದು ಸಮಿತಿ ಹೇಳಿದೆ.

ಸರ್ಕಾರದ ನಿರ್ಲಕ್ಷ್ಯದ ಕುರಿತು ಎಚ್ಚರಿಕೆ

ಒಳಮೀಸಲಾತಿ ಜಾರಿ ವಿಳಂಬದಿಂದಾಗಿ ಮೀಸಲಾತಿ ವಿರೋಧಿಗಳು ಸಮಾಜದಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಭಾಷಣಗಳನ್ನು ಮಾಡುವ ಸಿದ್ದರಾಮಯ್ಯನವರಂತಹ ನಾಯಕರು ಈ ವಿಷಯದಲ್ಲಿ ನಿಧಾನಗತಿ ತೋರುತ್ತಿರುವುದು ನೊಂದ ಸಮುದಾಯಗಳಲ್ಲಿ ಆತಂಕ ಮೂಡಿಸಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ. “ನಿಮ್ಮ ನಿರ್ಲಕ್ಷ್ಯದಿಂದ ಮತ ವಿಭಜನೆಯಾದರೆ ಅದಕ್ಕೆ ನಿಮ್ಮ ಸರ್ಕಾರದ ಧೋರಣೆಯೇ ಕಾರಣ,” ಎಂದು ಸಮಿತಿ ನೇರವಾಗಿ ಮುಖ್ಯಮಂತ್ರಿಯವರಿಗೆ ತಿಳಿಸಿದೆ.

ಒಳಮೀಸಲಾತಿಯನ್ನು ಕೂಡಲೇ ಜಾರಿಗೆ ತಂದು ಸಾವಿರಾರು ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕೆಂದು ಸಮಿತಿ ಒತ್ತಾಯಿಸಿದೆ. ಆಗಸ್ಟ್ 1, 2025ರಂದು ಒಳಮೀಸಲಾತಿ ಜಾರಿಗೊಂಡಿದ್ದರೆ, ಸಾವಿರಾರು ಕುಟುಂಬಗಳು ಒಂದು ವರ್ಷದ ವಿಜಯೋತ್ಸವವನ್ನು ಆಚರಿಸಬಹುದಿತ್ತು ಎಂದು ಸಮಿತಿ ವಿಷಾದಿಸಿದೆ.

ಹೋರಾಟದಲ್ಲಿ ಭಾಗವಹಿಸುವಂತೆ ಕರೆ

“ಸಮಪಾಲು! ಸಮಬಾಳು!! ಸಾಮಾಜಿಕ ಪರಿವರ್ತನೆ!!!” ಎಂಬ ಘೋಷಣೆಯೊಂದಿಗೆ, “ಮನೆಗೊಬ್ಬ ವ್ಯಕ್ತಿ… ಜೊತೆಗಿರಲಿ ಬುತ್ತಿ… ಒಗ್ಗೂಡಿ ಹೋರಾಡಿ, ಹಂಚಿ ತಿನ್ನೋಣ ಒಳಮೀಸಲಾತಿ…” ಎಂದು ಸಮಿತಿಯ ವಕ್ತಾರರು ಕರೆ ನೀಡಿದ್ದಾರೆ. 30 ವರ್ಷಗಳ ಹೋರಾಟದ ಮುಂಚೂಣಿಯಲ್ಲಿದ್ದ ಎಲ್ಲಾ ಮುಖಂಡರುಗಳ ಸಾಮೂಹಿಕ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ.

ಈ ಹೋರಾಟದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: 9448059406, 9448695537, 9449491213, ಮತ್ತು 9448667163. ಈ ಹೋರಾಟವು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ, ಬದಲಿಗೆ ಅಲೆಮಾರಿ ಸಮುದಾಯಗಳು ಸೇರಿದಂತೆ ಎಲ್ಲಾ ಅವಕಾಶ ವಂಚಿತ ಸಮುದಾಯಗಳ ಸೌಹಾರ್ದತೆಯ ಸಂಗಮವಾಗಿದೆ ಎಂದು ಸಮಿತಿ ತಿಳಿಸಿದೆ.

ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಯುದ್ದ ನಿಲ್ಲಿಸಿ: ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...