Homeಕರ್ನಾಟಕಒಳಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ: ಕರಿಯಪ್ಪ ಗುಡಿಮನಿ 

ಒಳಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ: ಕರಿಯಪ್ಪ ಗುಡಿಮನಿ 

- Advertisement -
- Advertisement -

ಕಂಪ್ಲಿ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ, ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ವರದಿಯನ್ನು ಕೂಡಲೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಆಗಸ್ಟ್ 11ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾದಿಗ ಮುಖಂಡ ಕರಿಯಪ್ಪ ಗುಡಿಮನೆ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಈ ಅನಿರ್ದಿಷ್ಟಾವಧಿ ಅಹೋರಾತ್ರಿ ಸತ್ಯಾಗ್ರಹಕ್ಕೆ ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿಯ ಸದಸ್ಯ ವಸಂತರಾಜ ಕಹಳೆ ಮತ್ತು ದಲಿತ ಮುಖಂಡ ಅಂಬಣ್ಣ ಆರೋಲಿ ಅವರು ಕೂಡ ಕರೆ ನೀಡಿದ್ದು, ಸುಮಾರು ಮೂವತ್ತು ವರ್ಷಗಳ ಹೋರಾಟ ಅಂತಿಮ ಹಂತಕ್ಕೆ ತಲುಪಿದೆ ಎಂದು ಹೇಳಿದ್ದಾರೆ.

ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಒಳ ಮೀಸಲಾತಿ ಹೋರಾಟ ಅಂಗವಾಗಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೂವತ್ತು ವರ್ಷಗಳ ಹೋರಾಟದ ಫಲ, ಲಾಭ ಮತ್ತು ನಷ್ಟದ ಬಗ್ಗೆ ಚರ್ಚೆಗಳಿದ್ದು, ಭಾಗವಹಿಸಬೇಕು ಎಂದರು

ನಾಗಮೋಹನ್‌ದಾಸ್ ವರದಿ ಅನುಷ್ಠಾನಕ್ಕೆ ಒತ್ತಾಯ

ಒಳಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಅಂಬಣ್ಣ ಆರೋಲಿ ಆರೋಪಿಸಿದ್ದಾರೆ.  ಸುಪ್ರೀಂ ಕೋರ್ಟ್ ಆದೇಶದ ನಂತರವೂ ಸರ್ಕಾರಗಳು ಈ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳುತ್ತಿಲ್ಲ. ಒಳಮೀಸಲಾತಿ ವಿಚಾರದಲ್ಲಿ ಹಲವು ಸಂಘಟನೆಗಳ ಗೊಂದಲಗಳಿದ್ದರೂ, ನಾಗಮೋಹನ್‌ದಾಸ್ ವರದಿ ಸ್ಪಷ್ಟ ಮತ್ತು ನಿಖರವಾಗಿದೆ ಎಂದು ಅವರು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಒಳಮೀಸಲಾತಿ ಹೋರಾಟ ಇನ್ನೂ ಜೀವಂತವಾಗಿದೆ ಎಂದು ಅಂಬಣ್ಣ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿಯಾಗಿದ್ದರೂ, ಕರ್ನಾಟಕದಲ್ಲಿ ರಾಜಕೀಯ ಪಕ್ಷಗಳ ಇಚ್ಛಾಶಕ್ತಿ ಕೊರತೆಯಿಂದ ಈ ಹೋರಾಟ ನನೆಗುದಿಗೆ ಬಿದ್ದಿದೆ ಎಂದು ಅಂಬಣ್ಣ ಆರೋಲಿ ದೂರಿದ್ದಾರೆ. ಈವರೆಗೂ ಯಾವುದೇ ರಾಜಕೀಯ ಪಕ್ಷಗಳು ಅಥವಾ ಮುಖಂಡರು ಈ ಹೋರಾಟಕ್ಕೆ ಬೆಂಬಲ ನೀಡಿಲ್ಲ ಎಂದೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪಂಜಾಬ್ ಸರ್ಕಾರ ಈ ವಿಷಯವನ್ನು ಮೊದಲು ಸುಪ್ರೀಂ ಕೋರ್ಟ್‌ಗೆ ಒಯ್ದಿತ್ತು. ಅದರ ನಂತರ ಕರ್ನಾಟಕದಿಂದ ನಾವು ಸಹ ಸುಪ್ರೀಂ ಕೋರ್ಟ್‌ಗೆ ಹೋಗಿದ್ದು, ನ್ಯಾಯಾಲಯದ ಆದೇಶದಿಂದಾಗಿ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಅವರು ವಿವರಿಸಿದರು. ಕಳೆದ ಚುನಾವಣೆಗಳ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೆ ಭರವಸೆ ನೀಡಿದ್ದವು. ಹಾಗಾಗಿ, ಜುಲೈ 30ರೊಳಗೆ ವರದಿಯನ್ನು ಪಡೆಯಬೇಕು ಮತ್ತು ಅಧಿವೇಶನದಲ್ಲಿ ಇದರ ಬಗ್ಗೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಈ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾದಿಗ ಸಮುದಾಯದ ಮುಖಂಡರಾದ ಕರಿಯಪ್ಪ ಗುಡಿಮನೆ, ಹನುಮಂತಪ್ಪ ಮ್ಯಾಗಳಮನಿ, ಯಲ್ಲಪ್ಪ, ಮಲ್ಲಿಕಾರ್ಜುನ ಪುಜಾರ್, ಪ್ರಕಾಶ ಎಚ್. ಹೊಳೆಯಪ್ಪನವರ್, ದೇವರಾಜ್ ನಡುವಲಮನಿ, ಲಿಂಗಪ್ಪ ಮೈನಳ್ಳಿ, ಮುದಕಪ್ಪ ಹೊಸಮನಿ, ದೇವರಾಜ್ ಕಿನ್ನಾಳ, ಗುರುಮೂರ್ತಿ ನೆರೆಗಲ್, ಶಂಕರ ನೆರೆಗಲ್ ಮತ್ತು ನಾಗರಾಜ ನೆರೆಗಲ್ ಭಾಗವಹಿಸಿದ್ದರು.

ಹರಿಯಾಣದಲ್ಲಿ ಪ್ರದೇಶ ಸಮಿತಿ ಉಸ್ತುವಾರಿ ನಕ್ಸಲ್ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...