ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ವಿರೋಧ, ನ.26ರಂದು ಅನಿರ್ದಿಷ್ಟಾವಧಿ ಸತ್ಯಾಗ್ರಹ

ರಾಜ್ಯ ಸರ್ಕಾರವು ಸರ್ಕಾರಿ ಕನ್ನಡ ಶಾಲೆಗಳನ್ನು ಖಾಸಗಿಯವರಿಗೆ ದತ್ತು (ಮೆಂಟರಿಂಗ್) ನೀಡಲು ಮುಂದಾಗಿರುವ ಕ್ರಮವನ್ನು ವಿರೋಧಿಸಿ ಮತ್ತು 2009ರ ಶಿಕ್ಷಣ ಹಕ್ಕು ಕಾಯ್ದೆಯನ್ನು (ಆರ್‌ಟಿಇ) ರಾಜ್ಯವ್ಯಾಪಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ನಾಳೆ (ನ.26) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ತಿಳಿಸಿದೆ. ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರನ್ನು ಒಳಗೊಂಡಂತೆ 20ಕ್ಕೂ ಅಧಿಕ ಸಂಘಟನೆಗಳು ಪಾಲ್ಗೊಳ್ಳುತ್ತಿವೆ ಎಂದು ತಿಳಿಸಿದೆ. ಪ್ರತಿಭಟನೆ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ … Continue reading ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ವಿರೋಧ, ನ.26ರಂದು ಅನಿರ್ದಿಷ್ಟಾವಧಿ ಸತ್ಯಾಗ್ರಹ