Homeಮುಖಪುಟ100ಕ್ಕೆ ತಲುಪಿದ ಕಾಂಗ್ರೆಸ್ ಸಂಸದರ ಸಂಖ್ಯೆ; ಪಕ್ಷಕ್ಕೆ ಮರಳಿದ ಮಹಾರಾಷ್ಟ್ರದ ಸ್ವತಂತ್ರ ಸಂಸದ

100ಕ್ಕೆ ತಲುಪಿದ ಕಾಂಗ್ರೆಸ್ ಸಂಸದರ ಸಂಖ್ಯೆ; ಪಕ್ಷಕ್ಕೆ ಮರಳಿದ ಮಹಾರಾಷ್ಟ್ರದ ಸ್ವತಂತ್ರ ಸಂಸದ

- Advertisement -
- Advertisement -

ಮಂಗಳವಾರ ಪ್ರಕಟವಾದ ಲೋಕಸಭೆಯ ಫಲಿತಾಂಶದಲ್ಲಿ ಕಾಂಗ್ರೆಸ್  ತನ್ನ ಸಾಧನೆಯನ್ನು ಅಗಾಧವಾಗಿ ಸುಧಾರಿಸಿದೆ. 99 ಇದ್ದ ಸಂಸದರ ಸಂಖ್ಯೆಯು ಇದೀಗ ನೂರು ತಲುಪಿದ್ದು, ತನ್ನ ಖಾತೆಗೆ ಮತ್ತೊಬ್ಬ ಸಂಸದರನ್ನು ಸೇರಿಸಿಕೊಂಡಿದೆ.

ಮಹಾರಾಷ್ಟ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ವಿಶಾಲ್ ಪಾಟೀಲ್ ಗುರುವಾರ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿತ್ತು. ವಿಶಾಲ್ ಪಾಟೀಲ್ ಅವರ ಬೆಂಬಲದೊಂದಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಬಲ 100ಕ್ಕೆ ಏರಲಿದೆ ಎಂದು ಪಕ್ಷದೊಳಗೆ ಹೋರಾಟ ನಡೆಸಿದ್ದ ಕಾಂಗ್ರೆಸ್ ಶಾಸಕ ವಿಶ್ವಜಿತ್ ಕದಂ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಸಂತದಾದಾ ಪಾಟೀಲ್ ಅವರ ಮೊಮ್ಮಗ ವಿಶಾಲ್ ಪಾಟೀಲ್ ಅವರು ಸಾಂಗ್ಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಜಯ್ಕಾಕ ಪಾಟೀಲ್ ಅವರನ್ನು ಸೋಲಿಸಿದರು.

ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಪಾಲುದಾರರ ನಡುವೆ ಸೀಟು ಹಂಚಿಕೆ ವ್ಯವಸ್ಥೆಯಲ್ಲಿ ಸಾಂಗ್ಲಿ ಸಂಸದೀಯ ಸ್ಥಾನವನ್ನು ಶಿವಸೇನೆ-ಯುಬಿಟಿಗೆ ಬಿಟ್ಟುಕೊಂಟ್ಟ ನಂತರ ಅವರು ಬಂಡಾಯವೆದ್ದು ಸ್ವತಂತ್ರವಾಗಿ ಸ್ಪರ್ಧಿಸಿದ್ದರು.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, “ಸಾಂಗ್ಲಿಯಿಂದ ಚುನಾಯಿತ ಸಂಸದ ವಿಶಾಲ್ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಸೇನಾ ಬಣದ ಸೀಟು ಒಪ್ಪಂದಕ್ಕೆ ಮುಂಚೆಯೇ ತನ್ನದೇ ಅಭ್ಯರ್ಥಿಯನ್ನು ಘೋಷಿಸಿದ ಕ್ರಮವು ಮಹಾರಾಷ್ಟ್ರ ವಿರೋಧ ಪಕ್ಷದ ಮೈತ್ರಿಯಲ್ಲಿ ಸ್ವಲ್ಪ ಘರ್ಷಣೆಯನ್ನು ಉಂಟುಮಾಡಿದೆ. ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕಾಂಗ್ರೆಸ್ ಪದೇಪದೆ ಶಿವಸೇನೆಗೆ ಮನವಿ ಮಾಡಿತ್ತು.

ವಿಶಾಲ್ ಪಾಟೀಲ್ ಮತ್ತು ವಿಶ್ವಜಿತ್ ಕದಂ ನಿನ್ನೆ ಖರ್ಗೆ ಮತ್ತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಸ್ವತಂತ್ರ ಸಂಸದರು ಪಕ್ಷಕ್ಕೆ ತಮ್ಮ ಬೆಂಬಲ ಪತ್ರವನ್ನು ನೀಡಿದರು.

ಲೋಕಸಭೆಯ ಸೆಕ್ರೆಟರಿಯೇಟ್ ಒಪ್ಪಿಗೆ ನೀಡಿದರೆ, ವಿಶಾಲ್ ಪಾಟೀಲ್ ಅವರನ್ನು ಕಾಂಗ್ರೆಸ್‌ನ ಸಹ ಸಂಸದ ಎಂದು ಕರೆಯಬಹುದು ಮತ್ತು ಲೋಕಸಭೆಯಲ್ಲಿ ಪಕ್ಷದ ಬಲ 100 ಆಗಲಿದೆ ಎಂದು ಮುಖಂಡರು ಹೇಳಿದರು.

ಬಿಹಾರದ ಪೂರ್ಣೆಯಾದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿರುವ ಮತ್ತೊಬ್ಬ ನಾಯಕ ಪಪ್ಪು ಯಾದವ್ ಕೂಡ ಕಾಂಗ್ರೆಸ್‌ಗೆ ಬೆಂಬಲ ನೀಡುವ ನಿರೀಕ್ಷೆಯಿದೆ. ಚುನಾವಣೆಗೂ ಮುನ್ನ ತಮ್ಮದೇ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಿದ್ದರು. ಬಿಹಾರದ ಪ್ರತಿಪಕ್ಷ ಸ್ಥಾನದ ಒಪ್ಪಂದದಲ್ಲಿ ಪೂರ್ಣೆಯಾ ಸ್ಥಾನವು ಆರ್‌ಜೆಡಿ ಪಾಲು ಹೋದಾಗ, ಪಪ್ಪು ಯಾದವ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರು.

ಇದನ್ನೂ ಓದಿ; ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಹೈಕೋರ್ಟಿನಿಂದ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...