Homeಕರ್ನಾಟಕರಾಜ್ಯದಲ್ಲಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಈ ಬಾರಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಸಕರ ಭವನದ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ 225 ವಾರ್ಡ್‌ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಕ್ಯಾಂಟೀನ್‌ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ಕನಕದಾಸರು ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದವರು. ಜಾತ್ಯಾತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮ ಸಮಾಜ ನಿರ್ಮಿಸಲು ಶ್ರಮಿಸಿದ್ದಾರೆ. ಸಾಹಿತ್ಯದ ಮೂಲಕ ತಮ್ಮ ಆದರ್ಶಗಳನ್ನು ಜನರಿಗೆ ತಿಳಿಹೇಳಿ ಜಾಗೃತಿ ಮೂಡಿಸಿದ್ದರು. ಜನರಿಗೆ ಅರ್ಥವಾಗುವ ಸರಳ ಭಾಷೆಯಲ್ಲಿ ತಮ್ಮ ದಾಸಸಾಹಿತ್ಯವನ್ನು ರಚಿಸಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ. ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನು ಕೂಡ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಿ ಎಂದು ಹೇಳಿದ್ದಾರೆ.

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳಬಾರದು ಎನ್ನುವ ಕಾರಣಕ್ಕೆ ತುರ್ತು 108 ಆ್ಯಂಬುಲೆನ್ಸ್‌ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840ಕ್ಕೂ ಹೆಚ್ಚು ಆ್ಯಂಬುಲೆನ್ಸ್‌ಗಳ ಅಗತ್ಯವಿದೆ. ಪ್ರತಿ ತಾಲೂಕಿನಲ್ಲಿ 4 ಆ್ಯಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಾ ಪ್ರತಿ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಹೇಳಿದ್ದಾರೆ.

ಪ್ರತಿ ಜಿಲ್ಲೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನಸ್ಟಿಕ್ ಸೆಂಟರ್‌ಗಳಲ್ಲಿ ಸೇವಾ ವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ‌ಗುಣಮಟ್ಟದ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಇದನ್ನು ಓದಿ: ಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...