Homeಮುಖಪುಟಇಂಡಿಯಾ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ: ಮೈತ್ರಿ ಪಕ್ಷಗಳ ಸಭೆ ಬಳಿಕ ವಿಶ್ವಾಸ...

ಇಂಡಿಯಾ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ: ಮೈತ್ರಿ ಪಕ್ಷಗಳ ಸಭೆ ಬಳಿಕ ವಿಶ್ವಾಸ ವ್ಯಕ್ತಪಡಿಸಿದ ಖರ್ಗೆ, ಕೇಜ್ರಿವಾಲ್‌

- Advertisement -
- Advertisement -

2024ರ ಸಾರ್ವತ್ರಿಕ ಚುನಾವಣೆಗೆ ಏಳು ಹಂತಗಳ ಮತದಾನ ಕೊನೆಗೊಂಡಿದೆ. ಇಂಡಿಯಾ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಜ್ರಿವಾಲ್‌, ಅಖಿಲೇಶ್‌ ಯಾದವ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಮೈತ್ರಿ ಪಕ್ಷಗಳ ನಾಯಕರ ಸಭೆಯ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ್ದು, ತಮ್ಮ ಲೆಕ್ಕಾಚಾರದ ಪ್ರಕಾರ ಪ್ರತಿಪಕ್ಷಗಳು 295 ಸ್ಥಾನಗಳನ್ನು ಗೆಲ್ಲಲಿವೆ ಎಂದು ಹೇಳಿದ್ದಾರೆ.

ಕೊನೆಯ ಹಂತದ ಮತದಾನದ ನಂತರ ಚುನಾವಣೆಯ ಕುರಿತು ಪರಾಮರ್ಶೆ ನಡೆಸಲು ಹಾಗೂ ಭವಿಷ್ಯದಲ್ಲಿನ ಕಾರ್ಯತಂತ್ರದ ಕುರಿತು ಚರ್ಚಿಸಲು ಇಂಡಿಯಾ ಮೈತ್ರಿಕೂಟದ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಮತದಾನೋತ್ತರ ಸಮೀಕ್ಷೆಯ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ ಈ ಮೊದಲು ಘೋಷಿಸಿತ್ತು. ಇದೀಗ ನಿರ್ಣಯವನ್ನು ಬದಲಿಸಿದ್ದು, ಮತದಾನೋತ್ತರ ಸಮೀಕ್ಷೆಯ ಚರ್ಚೆಗಳಲ್ಲಿ ಭಾಗವಹಿಸುವುದಾಗಿ ಇಂಡಿಯಾ ಮೈತ್ರಿಕೂಟದ ನಾಯಕರು ಹೇಳಿದ್ದಾರೆ.

2024ರ ಲೋಕಸಭೆ ಚುನವಾಣೆಯ ಎಕ್ಸಿಟ್‌ ಪೋಲ್‌ ಫಲಿತಾಂಶಗಳು ಇಂದು ಹೊರಬರಲಿದೆ.  ಆದರೆ ನೈಜ ಫಲಿತಾಂಶ ಜೂನ್ 4ರಂದು ಮತ ಎಣಿಕೆ ಬಳಿಕ ಬಹಿರಂಗವಾಗಲಿದೆ. ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆದಿತ್ತು. ಏಳು ಹಂತಗಳಲ್ಲಿ ಒಟ್ಟು 543 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ 295ಕ್ಕೂ ಅಧಿಕ ಸ್ಥಾನಗಳಲ್ಲಿ ಜಯ ಗಳಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೂಡ ಹೇಳಿದ್ದಾರೆ. ಎಲ್ಲೆಡೆಯಿಂದ ಬಂದ ಪ್ರತಿಕ್ರಿಯೆ ಆಧಾರದಲ್ಲಿ ‘ಇಂಡಿಯಾ’ ಮೈತ್ರಿಕೂಟ 295ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಲಿದೆ ಎಂದು ನಾವು ನಂಬಿದ್ದೇವೆ. ಬಿಜೆಪಿ ಸುಮಾರು 220 ಸ್ಥಾನಗಳನ್ನು ಪಡೆಯಬಹುದು. ಎನ್‌ಡಿಎ ಒಟ್ಟಾರೆಯಾಗಿ 235 ಸ್ಥಾನಗಳನ್ನು ಗಳಿಸಬಹುದು. ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ರಚಿಸಲು ‘ಇಂಡಿಯಾ’ ಮೈತ್ರಿಕೂಟ ಒಗ್ಗಟ್ಟಾಗಿ ಮುನ್ನಡೆಯುತ್ತಿದೆ’ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಬಿಜೆಪಿಯ ಎಲ್ಲಾ ಸ್ಥಾನಗಳನ್ನು ಕಳೆದುಕೊಳ್ಳುತ್ತದೆ ಮತ್ತು ‘ಇಂಡಿಯಾ’ ಮೈತ್ರಿಕೂಟವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂದು ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. THIS DAY DREAMING OF MALLIKARJUN KHARGE OF FORMING GOVERNMENT WITH 295 SEATS FOR I.N.N.D.I.A GANG BOUND TO FAIL AS IT CAN HARDLY GARNER 98 SEATS CONGRESS CONTRIBUTION OF 47 . SO KHARGE CAN BE AWARDED THE CROWN OF MODERN DAY SHAIK MOHAMMED.

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...