Homeಅಂತರಾಷ್ಟ್ರೀಯಭಾರತ ಮತ್ತು ವಿಶ್ವಾಸ ಕಳೆದುಕೊಂಡ ಆರ್ಥಿಕತೆ

ಭಾರತ ಮತ್ತು ವಿಶ್ವಾಸ ಕಳೆದುಕೊಂಡ ಆರ್ಥಿಕತೆ

- Advertisement -
- Advertisement -

ಇದು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟವಾದ ಕೌಶಿಕ್‌ ಬಸು ಅವರ ಲೇಖನದ ಅನುವಾದ.

ಅನುವಾದ: ವೇಣುಗೋಪಾಲ್. ಟಿ. ಎಸ್

ಬಲವಾದ ಸರ್ಕಾರವಿರುವ ದೇಶಗಳಲ್ಲಿ ಅಂತಿಮವಾಗಿ ಆರ್ಥಿಕತೆ ದುರ್ಬಲವಾಗುತ್ತದೆ. ಭಾರತ ಕೂಡ ಅದೇ ಹಾದಿ ಹಿಡಿಯುವ ಅಪಾಯದಲ್ಲಿದೆ. ಈ ಮೊದಲು ಇಲ್ಲಿ ಆರ್ಥಿಕತೆ ತೃಪ್ತಿಕರವಾಗೇ ಇತ್ತು.

ಜಾಗತಿಕ ಬ್ಯಾಂಕ್ ಬೇರೆ ಬೇರೆ ದೇಶಗಳಲ್ಲಿ ಉದ್ದಿಮೆ ನಡೆಸಲು ಇರುವ ವಾತಾವರಣ ಎಷ್ಟು ಅನುಕೂಲಕರವಾಗಿದೆ ಎಂಬುದನ್ನು ತೌಲನಿಕವಾಗಿ ಅಧ್ಯಯನ ಮಾಡಿ ಒಂದು ವರದಿಯನ್ನು ಪ್ರತಿ ವರ್ಷ ಪ್ರಕಟಿಸುತ್ತದೆ. ಈ ವರ್ಷವೂ ಅದು 190 ದೇಶಗಳಲ್ಲಿ ಅಂತಹ ಒಂದು ಅಧ್ಯಯನ ಮಾಡಿ ಒಂದು ವರದಿಯನ್ನು ಪ್ರಕಟಿಸಿದೆ. ಕಳೆದ ವರ್ಷ ಭಾರತ 77ನೇ ಸ್ಥಾನದಲ್ಲಿತ್ತು. ಈಗ ಅದರ ಸ್ಥಿತಿ ಸುಧಾರಿಸಿ ಅದು 63ನೇ ಸ್ಥಾನಕ್ಕೆ ಬಂದಿದೆ. ಭಾರತದ ಹಾಗೆ ಸೌದಿ ಅರೇಬಿಯಾ, ಪಾಕಿಸ್ತಾನ ಮತ್ತು ಚೀನಾ ಮೊದಲಾದ ಹತ್ತು ದೇಶಗಳು ಈ ವರದಿಯಲ್ಲಿ ಪ್ರಗತಿಯನ್ನು ಸಾಧಿಸಿದೆ. ಆದರೆ ಭಾರತದಲ್ಲಿ ಪ್ರಮುಖ ಸೂಚಿಗಳು ಆರ್ಥಿಕತೆ ತೀವ್ರವಾಗಿ ಕುಸಿಯುತ್ತಿವೆ.

2014ರಲ್ಲಿ ಅಧಿಕಾರಕ್ಕೆ ಬಂದರೆ ಭಾರತವನ್ನು ಚೀನಾಕ್ಕೆ ಪ್ರತಿಸ್ಪರ್ಧಿಯಾಗಿ ಪ್ರಬಲವಾದ ಆರ್ಥಿಕ ಶಕ್ತಿಯನ್ನಾಗಿ ಮಾಡುತ್ತೇನೆ ಎಂಬ ಭರವಸೆಯನ್ನು ನರೇಂದ್ರ ಮೋದಿಯವರು ನೀಡಿದ್ದರು. ಆಯ್ಕೆಯೂ ಆದರು. ಈ ವರ್ಷ ಮತ್ತೆ ಚುನಾಯಿತರಾದ ಮೇಲೆ  ಭಾರತವನ್ನು 2014ರವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುತ್ತೇನೆ ಎಂದು ಘೋಷಿಸಿದ್ದಾರೆ. ಅಂದರೆ ಆರ್ಥಿಕತೆಯನ್ನು ಈಗ ಇರುವುದರ ದುಪ್ಪಟ್ಟು ಬೆಳೆಸುವುದಾಗಿ ತಿಳಿಸಿದ್ದಾರೆ.

ಸರ್ಕಾರದ ಅಧಿಕೃತ ಅಂಕಿಅಂಶಗಳ ಪ್ರಕಾರ ಭಾರತದ ವರಮಾನದ ಬೆಳವಣಿಗೆಯ ದರ ಈ ವರ್ಷದ ಎರಡನೆ ಪಾದದಲ್ಲಿ ಕೇವಲ ಶೇಕಡ 5ರಷ್ಟಿದೆ.  ಕಳೆದ ವರ್ಷ ಅದು ಶೇಕಡ 8ರಷ್ಟಿತ್ತು. 2019ರಲ್ಲಿ ಭಾರತದ ಬೆಳವಣಿಗೆಯ ದರ ಶೇಕಡ 7.3ರಷ್ಟು ಇರುತ್ತದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ಏಪ್ರಿಲ್‌ನಲ್ಲಿ ಅಂದಾಜು ಮಾಡಿತ್ತು. ಆದರೆ ಈಗಿನ ಪರಿಸ್ಥಿತಿಯನ್ನು ಗಮನಿಸಿ ತನ್ನ ಅಂದಾಜನ್ನು ಅದು ಶೇಕಡ 6.1ಕ್ಕೆ ಇಳಿಸಿದೆ. 2003ರಿಂದ 2011ರವರೆಗೆ ಬೆಳವಣಿಗೆ ದರ ಸುಮಾರಾಗಿ ಶೇಕಡ 8.5ರಷ್ಟಿತ್ತು. 2005ರಿಂದ 2008ರ ಅವಧಿಯಲ್ಲಿ ಭಾರತದ ಆರ್ಥಿಕತೆಯ ವಾರ್ಷಿಕ ಬೆಳವಣಿಗೆ ಶೇಕಡ 9ಕ್ಕಿಂತ ಹೆಚ್ಚಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅದು ದಿಢೀರನೆ ತೀರಾ ಕಮ್ಮಿಯಾಗಿದೆ. ಇದು ತೀರಾ ಅನಿರೀಕ್ಷಿತ, ಅಷ್ಟೇ ಕಳವಳಕಾರಿಯಾದ ಸಂಗತಿ.

ವಿವರಗಳನ್ನು ಗಮನಿಸಿದರೆ ಈ ಕುಸಿತ ಸ್ಪಷ್ಟವಾಗುತ್ತದೆ. ಪ್ರಯಾಣಿಕರ ಕಾರು ಮಾರಾಟ ಕೆಲ ದಿನಗಳಿಂದ ಇಳಿಯುತ್ತಿದೆ. 2018ಕ್ಕೆ ಹೋಲಿಸಿದರೆ ಏಪ್ರಿಲ್ ಮತ್ತು ಸೆಪ್ಟೆಂಬರ್ ನಡುವೆ ಅದು ಶೇಕಡ 23ರಷ್ಟು ಕುಸಿದಿದೆ. ಇದನ್ನು ಭಾರತೀಯ ಆಟೋಮೊಬೈಲ್ ಉತ್ಪಾದಕರ ಸಂಘವು ತಿಳಿಸಿದೆ. ರಫ್ತು ಹಲವು ದಿನಗಳಿಂದ ಮಂದಗೊಂಡಿದೆ. ಸ್ಟಾಂಡರ್ಡ್ ಅಂಡ್ ಪೂರ್ ಸಂಘಟನೆಯು ಭಾರತೀಯ ಹಣಕಾಸು ವಲಯದ ಹೆಚ್ಚುತ್ತಿರುವ ಅಪಾಯದ ಬಗ್ಗೆ ಎಚ್ಚರಿಸಿದೆ. ಈಗಿನ ನಿರುದ್ಯೋಗ ದರ ಕಳೆದ 45ವರ್ಷಗಳಲ್ಲೇ ಅತಿ ಹೆಚ್ಚಿನ ಮಟ್ಟವನ್ನು ತಲುಪಿದೆ.

ಆರ್ಥಿಕ ಬೆಳವಣಿಗೆ ನಿಧಾನವಾಗುತ್ತಿರುವುದರ ಜತೆಗೆ ಅಸಮಾನತೆಯು ಹೆಚ್ಚುತ್ತಿದೆ. ಆಕ್ಸ್‌ಫಾಮ್ ಪ್ರಕಾರ 2001ರಲ್ಲಿ ಶೇಕಡ 73ರಷ್ಟು ಸಂಪತ್ತು ಶೇಕಡ ಒಂದರಷ್ಟು ಶ್ರೀಮಂತ ಜನಕ್ಕೆ ಹೋಗುತ್ತಿತ್ತು. ಈ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಅಸಮಾನತೆ ಹದಗೆಡುತ್ತಿತ್ತು. ಆದರೆ ಬೆಳವಣೆಗೆ ನಿಧಾನವಾಗುತ್ತಿರುವುದರಿಂದ ಮತ್ತು ನಿರುದ್ಯೋಗ ಹೆಚ್ಚುತ್ತಿರುವುದರಿಂದ ಅದರ ಪರಿಣಾಮ ಹೆಚ್ಚು ನೋವು ಉಂಟುಮಾಡುತ್ತಿದೆ.

ಕೆಲವು ಅಂದಾಜಿನ ಪ್ರಕಾರ ಆರ್ಥಿಕ ಬೆಳವಣಿಗೆ ಋಣಾತ್ಮಕವಾಗುತ್ತಿದೆ. ಪರಿಸ್ಥಿತಿ ಹೀಗಿದ್ದಾಗ ಭಾರತದಲ್ಲಿ ಉದ್ದಿಮೆ ನಡೆಸಲು ಬೇಕಾದ ವಾತಾವರಣ ಸುಧಾರಿಸುವುದಕ್ಕೆ ಹೇಗೆ ಸಾಧ್ಯ?

ಒಂದು ದೇಶದಲ್ಲಿನ ಉದ್ಧಿಮ ನಡೆಸಲು ಇರುವ ಪರಿಸ್ಥಿತಿ ಎಷ್ಟು ಸಲೀಸಾಗಿದೆ ಎಂದು ನಿರ್ಧರಿಸಲು ವಿಶ್ವಬ್ಯಾಂಕ್ ಆಯಾ ದೇಶದಲ್ಲಿ ಲಿಖಿತರೂಪದಲ್ಲಿನ ಕಾನೂನನ್ನು ಗಮನಿಸುತ್ತದೆಯೇ ಹೊರತು ವಿನಃ ಆಚರಣೆಯಲ್ಲಿ ಅದು ಹೇಗೆ ಕೆಲಸ ಮಾಡುತ್ತಿದೆ ಅನ್ನುವುದನ್ನು ಪರಿಗಣಿಸುವುದಿಲ್ಲ. ವಿಶ್ವಬ್ಯಾಂಕಿನ ವರದಿಯೇ ಹೇಳುವಂತೆ “ವ್ಯವಹಾರ ನಡೆಸುವುದಕ್ಕೆ ವಾತಾವರಣ ಎಷ್ಟು ಸುಲಲಿತವಾಗಿದೆ ಎಂದು ಲೆಕ್ಕಹಾಕುವುದಕ್ಕೆ ಬಳಸುವ ಅಂಕಿಅಂಶದಲ್ಲಿ ಸುಮಾರು ಮೂರನೇ ಎರಡು ಭಾಗ ಕಾನೂನಿನ ಪಠ್ಯವನ್ನು ಆಧರಿಸಿರುತ್ತದೆ.” ಅಂದರೆ ಸರ್ಕಾರಗಳು ಬೇಕಾದರೆ ತಮ್ಮ ದೇಶದ ಸೂಚ್ಯಾಂಕವನ್ನು ಉತ್ತಮ ಪಡಿಸಿಕೊಳ್ಳುವುದಕ್ಕೆ ಅದಕ್ಕೆ ಬೇಕಾದ ಹಾಗೆ ನಿಯಮಗಳನ್ನು ಮಾರ್ಪಡಿಸಿಕೊಳ್ಳಬಹುದು. ಆದರೆ ಆ ಬದಲಾವಣೆಗಳು ವಾಸ್ತವದಲ್ಲಿ ಏನೂ ಪರಿಣಾಮ ಬೀರದೆಯೂ ಇರಬಹುದು.

ಆದರೆ ನಿಜವಾದ ಪ್ರಗತಿಯ ವಿಷಯದಲ್ಲಿ ಇದು ಸಾಧ್ಯವಿಲ್ಲ. ಅಲ್ಲಿ ವಾಸ್ತವದಲ್ಲಿ ಕಾನೂನು ಹೇಗೆ ಕೆಲಸ ಮಾಡುತ್ತವೆ ಅನ್ನುವುದು ಮುಖ್ಯವಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಇಡೀ ಸಮಾಜದಲ್ಲಿ ಒಡಕು ಹೆಚ್ಚುತ್ತಿದೆ. ಸರ್ಕಾರದ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಕೊನೆಯ ಪಕ್ಷ ಪ್ರಮುಖ ಆರ್ಥಿಕ ಅಂಶಗಳ ವಿಷಯದಲ್ಲಂತೂ ಈ ವಿಶ್ವಾಸದ ಕೊರತೆಯನ್ನು ಕಾಣಬಹುದು. ಹೂಡಿಕೆಯ ಕುಸಿತ ವಿಶ್ವಾಸದ ಕುಸಿತವನ್ನು ಪರೋಕ್ಷವಾಗಿ ಸೂಚಿಸುತ್ತದೆ. ಅದನ್ನು ಸಾಮಾನ್ಯವಾಗಿ ನಿರ್ಲಕ್ಷಿಸಲಾಗುತ್ತದೆ. ಅರ್ಥಶಾಸ್ತ್ರಜ್ಞರು “ಹೂಡಿಕೆ” ಅನ್ನುವಾಗ ರಾಷ್ಟ್ರೀಯ ಉತ್ಪನ್ನದ ಒಂದು ಭಾಗ ಮಾತ್ರವನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳುತ್ತಾರೆ. ಅದರಲ್ಲಿ ಆಹಾರ, ಬಟ್ಟೆ, ವಸತಿ ಇತ್ಯಾದಿ ಬಳಕೆಯ ವಸ್ತುಗಳು ಸೇರುವುದಿಲ್ಲ. ಕೇವಲ ಮುಂದಿನ ಉತ್ಪಾದಕತೆಯನ್ನು ಹೆಚ್ಚಿಸಬಲ್ಲ ಯಂತ್ರಗಳು, ಫ್ಯಾಕ್ಟರಿಗಳು ಮತ್ತು ಮೂಲಭೂತ ಸೌಕರ್ಯಗಳು ಮಾತ್ರ ಸೇರಿರುತ್ತವೆ.

ದುಡಿಯುವ ಜನ ಹೇರಳವಾಗಿ ಇರುವ ರಾಷ್ಟ್ರಗಳಲ್ಲಿ ಹೂಡಿಕೆ ಹೆಚ್ಚಿದಂತೆ ಒಟ್ಟಾರೆಯಾಗಿ ಬೆಳವಣಿಗೆಯೂ ಹೆಚ್ಚುತ್ತದೆ. ಇದನ್ನು ಆರ್ಥಿಕ ಸಿದ್ಧಾಂತಗಳೂ ಹೇಳುತ್ತವೆ, ವಾಸ್ತವ ಬದುಕಿನಲ್ಲೂ ಇದಕ್ಕೆ ಪುರಾವೆಗಳು ಸಿಗುತ್ತವೆ. ರಾಬರ್ಟ್ ಸೊಲೊ ಅವರ ಪ್ರಖ್ಯಾತ ಸಿದ್ಧಾಂತವೂ ಇದನ್ನೇ ಹೇಳುತ್ತದೆ. ಹಾಗೆಯೇ ಹಲವು ರಾಷ್ಟ್ರಗಳ ಉದಾಹರಣೆಗಳು, ಅದರಲ್ಲೂ ವಿಶೇಷವಾಗಿ 1980ರಲ್ಲಿ ಅತ್ಯಂತ ವೇಗವಾಗಿ ಬೆಳೆದ ಈಸ್ಟ್ ಏಷ್ಯನ್ ಆರ್ಥಿಕತೆಗಳು ಈ ಅಂಶವನ್ನು ಪುಷ್ಠೀಕರಿಸುತ್ತವೆ.

1947ರಲ್ಲಿ ಸ್ವಾಂತಂತ್ರ್ಯ ಬಂದ ಮೇಲೆ ಬಹು ವರ್ಷಗಳ ಕಾಲ ಇಂಡಿಯಾದಲ್ಲಿ ಹೂಡಿಕೆಯ ಪ್ರಮಾಣ ಕಡಿಮೆಯೇ ಇತ್ತು. 1970ರವರೆಗೆ ಭಾರತದ ಹೂಡಿಕೆ ಜಿಡಿಪಿಯ ಶೇಕಡ 20ನ್ನು ಮೀರಿರಲಿಲ್ಲ. 2004-05ರಲ್ಲಿ ಅದು ಮೊಟ್ಟಮೊದಲಿಗೆ ಶೇಕಡ 30ರ ಗಡಿಯನ್ನು ದಾಟಿತು. 2011-12ರಲ್ಲಿ ಶೇಕಡ 39ರಷ್ಟಾಗಿತ್ತು. 1980ರಲ್ಲಿ ಭಾರತ ಬಹುಮಟ್ಟಿಗೆ ಈಸ್ಟ್ ಏಷ್ಯನ್ ಆರ್ಥಿಕತೆಯನ್ನು ಹೋಲುತ್ತಿತ್ತು. ಅವುಗಳ ಹಾಗೆಯೇ ಬೆಳೆಯಿತು. ನಂತರ ಹೂಡಿಕೆ ಇಳಿಮುಖವಾಗತೊಡಗಿತು. 2016-17ರಲ್ಲಿ ಅದು ಮತ್ತೆ ಶೇಕಡ 30ಕ್ಕೆ ಬಂತು.

ಆರ್ಥಿಕ ಪರಿಸ್ಥಿತಿ ಚೆನ್ನಾಗಿದ್ದರೆ ಅದರ ಬಗ್ಗೆ ಉದ್ದಿಮೆದಾರರಿಗೆ ಹೆಚ್ಚಿನ ವಿಶ್ವಾಸ ಹೆಚ್ಚಿರುತ್ತದೆ. ಆರ್ಥಿಕತೆ ಕುಸಿದರೆ ಅದರ ಬಗ್ಗೆ ವಿಶ್ವಾಸವೂ ಕುಸಿಯುತ್ತದೆ. ಇದು ನಿರೀಕ್ಷಿತವೇ. ಸಧ್ಯದ ಪರಿಸ್ಥಿತಿ ಹಾಗೂ ಭವಿಷ್ಯದಲ್ಲಿ ಅದು ಚೆನ್ನಾಗಿರುತ್ತದೆ ಎಂಬ ವಿಶ್ವಾಸ ಇದ್ದರೆ ಉದ್ದಿಮೆ ಹಣ ಹೂಡುತ್ತದೆ. ಇಲ್ಲದೇ ಹೋದರೆ ಬಂಡವಾಳ ಹೂಡುವುದಕ್ಕೆ ಹಿಂದೇಟು ಹಾಕುತ್ತವೆ. ಸರ್ಕಾರ ಮಾರ್ಕೆಟ್ಟಿನಲ್ಲಿ ತೀವ್ರವಾಗಿ ಹಸ್ತಕ್ಷೇಪ ಮಾಡಿದರೆ ವಿಶ್ವಾಸ ಕೆಡುತ್ತದೆ. ಉದಾಹರಣೆಗೆ 2016ರಲ್ಲಿ ಸರ್ಕಾರ ನೋಟನ್ನು ರದ್ದುಗೊಳಿಸಲು ನಿರ್ಧರಿಸಿದಾಗ ವಿಶ್ವಾಸಕ್ಕೆ ಹೊಡೆತ ಬಿತ್ತು. ಹಾಗೆಯೇ ರಾಜಕೀಯದಲ್ಲಿ ಅಥವಾ ಅಧಿಕಾರಶಾಹಿಯಲ್ಲಿ ಅಸಹನೆ ಕಂಡಬಂದಾಗಲೂ ವಿಶ್ವಾಸಕ್ಕೆ ಧಕ್ಕೆಯಾಗುತ್ತದೆ.

ಅರ್ಥಶಾಸ್ತ್ರಜ್ಞರು ಇದನ್ನು ಒಪ್ಪುವುದಕ್ಕೆ ಇಷ್ಟಪಡುವುದಿಲ್ಲ. ಆದರೆ ಒಂದು ದೇಶದ ಆರ್ಥಿಕ ಸ್ಥಿತಿ, ಆ ದೇಶದ ಆರ್ಥಿಕ ನೀತಿಯಷ್ಟೇ ಅದರ ರಾಜಕೀಯವನ್ನು ಆಧರಿಸಿರುತ್ತದೆ. ಸ್ವಾತಂತ್ರ್ಯ ಬಂದ ಪ್ರಾರಂಭದಲ್ಲಿ ಭಾರತ ರಾಜಕೀಯ ಸಂಸ್ಥೆಗಳನ್ನು ಸಂಘಟಿಸಿತು. ಪ್ರಜಾಸತ್ತೆ, ವಾಕ್ ಸ್ವಾತಂತ್ರ್ಯ, ಮುಕ್ತ ಮಾಧ್ಯಮ, ಧರ್ಮ ನಿರಪೇಕ್ಷತೆ, ಹಾಗೂ ಅಲ್ಪ ಸಂಖ್ಯಾತರ ಹಕ್ಕುಗಳ ರಕ್ಷಣೆ ಇವುಗಳಿಗೆ ಒತ್ತು ನೀಡಿತು. ಎರಡನೆಯ ಮಹಾಯುದ್ಧದ ನಂತರ ಎಲ್ಲಾ ದೇಶಗಳು ಸಾಮ್ರಾಜ್ಯಶಾಹಿಯ ಬಂಧನದಿಂದ ಸ್ವತಂತ್ರ್ಯಗೊಳ್ಳುತ್ತಿದ್ದಂತೆ ಇತರ ಕೆಲವು ಪ್ರಗತಿಪರ ನಾಯಕರು – ಉದಾಹರಣೆಗೆ ಇಂಡೋನೇಷಿಯ ಹಾಗೂ ಘಾನ ದೇಶಗಳ ನಾಯಕರು – ಪ್ರಯತ್ನಿಸಿದರು. ಆದರೆ ಅಂತಹ ಪ್ರಯತ್ನಗಳು ಯಶಸ್ವಿಯಾಗಲಿಲ್ಲ. ದಂಗೆ, ಗೊಂದಲ ಅಥವಾ ಘರ್ಷಣೆಗಳು ನಡೆದು ಒಂದಾದ ಮೇಲೆ ಒಂದು ದೇಶದಲ್ಲಿ ಪ್ರಜಾಸತ್ತೆ ನಾಶವಾಗುತ್ತಾ ಹೋಯಿತು. ಅಲ್ಲೆಲ್ಲಾ ಮಿಲಿಟರಿ ಆಡಳಿತ ಅಥವಾ ಧಾರ್ಮಿಕ ಘರ್ಷಣೆಗಳು ಪ್ರಾರಂಭವಾದವು. ಭಾರತ ತನ್ನ ಉದಾರವಾದೀ ಸಂವಿಧಾನ, ಚುನಾವಣೆ ಹಾಗೂ ಬಲವಾದ ಸುಪ್ರಿಂ ಕೋರ್ಟು ಇವುಗಳಿಂದಾಗಿ ಅದಕ್ಕೊಂದು ಅಪವಾದವಾಗಿ ಉಳಿದುಕೊಂಡಿತು.

ಸ್ವಾತಂತ್ರ್ಯ ಬಂದ ಪ್ರಾರಂಭದ ದಶಕಗಳಲ್ಲಿ ಇಂಡಿಯಾದಲ್ಲಿ ಆರ್ಥಿಕ ಬೆಳವಣಿಗೆ ನಿಧಾನವಾಗೇ ಸಾಗಿತ್ತು. ಭಾರತ ಪ್ರಾರಂಭದಲ್ಲಿ ಪ್ರಗತಿಪರ ರಾಜಕೀಯದಲ್ಲಿ ತೊಡಗಿಸಿಕೊಂಡಿತ್ತು. ಅದು ಸರಿಯಾದ ಆಯ್ಕೆಯೇ ಎನ್ನುವುದನ್ನು ಕುರಿತಂತೆ ಚರ್ಚೆ ಸಾಧ್ಯ (ಅದು ಸರಿಯಾದ ಆಯ್ಕೆ ಎಂದು ನನಗೆ ತೋರುತ್ತದೆ). ಆದರೆ ಆ ಆಯ್ಕೆಯನ್ನು ಮಾಡಿಕೊಂಡ ಮೇಲೆ ಅದರಿಂದ ದಕ್ಕಿದ ರಾಜಕೀಯ ಬಂಡವಾಳವನ್ನು, ಅದರಲ್ಲೂ ವಿಶೇಷವಾಗಿ 1990ರ ಮೊದಲ ಭಾಗದಲ್ಲಿ ಮತ್ತು 2003ರಲ್ಲಿ ಅದ್ಭುತವಾಗಿ ಯಶಸ್ಸು ಸಾಧಿಸಿದ ಮೇಲೆ ಈಗ ಕಳೆದುಕೊಳ್ಳುವುದು ಅಪರಾಧವಾಗುತ್ತದೆ. ಭಾರತದ ಆರ್ಥಿಕತೆಯ ಬುನಾದಿ  ಇನ್ನೂ ಬಲವಾಗಿಯೇ ಇದೆ. ನಮ್ಮಲ್ಲಿ ಉದಾರವಾದೀ ಪ್ರವೃತ್ತಿಯು ನಾಶವಾಗಿದ್ದರಿಂದ ವಿಶ್ವಾಸ ಕುಸಿದಿದೆ.  ಆರ್ಥಿಕ ಹಿಂಜರಿಕೆ ಉಂಟಾಗಿದೆ. ಭಾರತ ಮತ್ತೆ ತನ್ನ ಪ್ರಗತಿಪರ ಪರಂಪರೆಯನ್ನು ಕಂಡುಕೊಳ್ಳಬೇಕಾಗಿದೆ. ಅದನ್ನು ಆಧರಿಸಿ ನಮ್ಮ ಆರ್ಥಿಕತೆಯನ್ನು ಕಟ್ಟಬೇಕಾಗಿದೆ. ಹಾಗೆ ಮಾಡುವುದರಿಂದ ನಮ್ಮ ಆರ್ಥಿಕತೆಯನ್ನು ಮತ್ತೆ ಬೆಳೆಸಬಹುದು.

ಕೌಶಿಕ್ ಬಸು ಅವರು ಕಾರ್ನೆಲ್ ವಿಶ್ವವಿದ್ಯಾನಿಲಯದಲ್ಲಿ ಇಂಟರ್ ನ್ಯಾಷನಲ್ ಸ್ಟಡೀಸ್ ಹಾಗು ಎಕಾನಾಮಿಕ್ಸ್ ಪ್ರಾಧ್ಯಾಪಕರು. 2009ರಿಂದ 2012ವರೆಗೆ ಭಾರತ ಸರ್ಕಾರದ ಪ್ರಮುಖ ಸಲಹೆಗಾರರಾಗಿದ್ದರು. 2012ರಿಂದ 2016ರವರೆಗೆ ಜಾಗತಿಕ ಬ್ಯಾಂಕಿನ ಪ್ರಮುಖ ಅರ್ಥಶಾಸ್ತ್ರಜ್ಞರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...