Homeಅಂತರಾಷ್ಟ್ರೀಯಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

- Advertisement -
- Advertisement -

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೋಮವಾರ (ಫೆ.23) ಸಲಹೆ ನೀಡಿದೆ

ಜನವರಿ 5ರಂದು ನೀಡಲಾಗಿದ್ದ ಸಲಹೆಯ ಮುಂದುವರಿಕೆಯಾಗಿ ಈ ಸಲಹೆಯನ್ನು ನೀಡಲಾಗಿದೆ. ಭಾರತೀಯ ನಾಗರಿಕರು ಮತ್ತು ಭಾರತೀಯ ಮೂಲದ ವ್ಯಕ್ತಿಗಳು (ಪಿಐಒ) ಸರಿಯಾದ ಎಚ್ಚರಿಕೆ ವಹಿಸಿ, ಪ್ರತಿಭಟನೆ ಅಥವಾ ಪ್ರತಿರೋಧಗಳು ನಡೆಯುತ್ತಿರುವ ಸ್ಥಳಗಳಿಂದ ದೂರ ಇರಿ ಮತ್ತು ಯಾವುದೇ ಬೆಳವಣಿಗೆಗಳಿಗಾಗಿ ಸ್ಥಳೀಯ ಮಾಧ್ಯಮಗಳನ್ನು ಗಮನಿಸುವಾಗ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ಎಂದು ಭಾರತೀಯ ರಾಯಭಾರ ಕಚೇರಿಯು ಜನವರಿ 14ರಂದು ನೀಡಿದ್ದ ಸಲಹೆಯನ್ನು ಪುನರುಚ್ಚರಿಸಿದೆ.

ಇರಾನ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಪಾಸ್‌ಪೋರ್ಟ್‌, ಐಡಿ ಕಾರ್ಡ್ ಸೇರಿದಂತೆ ತಮ್ಮ ಪ್ರಯಾಣ ಮತ್ತು ವಲಸೆ ದಾಖಲೆಗಳನ್ನು ಯಾವಾಗಲೂ ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಲಾಗಿದೆ.

ಯಾವುದೇ ಸಹಾಯ ಅಗತ್ಯವಿದ್ದರೆ ತುರ್ತು ಸಹಾಯವಾಣಿ ಸಂಖ್ಯೆಗಳಾದ +989128109115, +989128109109, +989128109102, ಮತ್ತು +989932179359 ಅನ್ನು ಸಂಪರ್ಕಿಸುವಂತೆ ರಾಯಭಾರ ಕಚೇರಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...