Homeಅಂತರಾಷ್ಟ್ರೀಯಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ 'ಸ್ಟಾಪ್ ಅದಾನಿ' ಎಂದ ಪ್ರತಿಭಟನೆಗಾರ!

ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ಶುಕ್ರವಾರ, ಸ್ಟಾಪ್ ಅದಾನಿ ಗುಂಪು ಪತ್ರಿಕಾ ಪ್ರಕಟಣೆ ಹೊರಡಿಸಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅದಾನಿಗೆ 1 ಬಿಲಿಯನ್ ಆಸ್ಟ್ರೇಲಿಯಾದ ಡಾಲರ್ ಸಾಲ ನೀಡಬಾರದು ಎಂದು ಒತ್ತಾಯಿಸಿದೆ.

- Advertisement -
- Advertisement -

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಇಂದು ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಕ್ರಿಕೆಟ್ ಪಂದ್ಯ ಆರಂಭವಾಗಿದೆ. ಪಂದ್ಯ ವೀಕ್ಷೀಸಲು ಕ್ರೀಡಾಂಗಣಕ್ಕೆ ಪ್ರೇಕ್ಷಕರಿಗೂ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಇಬ್ಬರು ಪ್ರತಿಭಟನಾಕಾರರು ಪಂದ್ಯ ನಡೆಯುತ್ತಿರುವ ಸಮಯದಲ್ಲಿಯೇ ಮೈದಾನದೊಳಕ್ಕೆ ನುಗ್ಗಿ ಅದಾನಿಗೆ ವಿವಾದಿತ ಕಲ್ಲಿದ್ದಲು ಯೋಜನೆ ನೀಡುವುದರ ವಿರುದ್ಧ ಪ್ರತಿಭಟಿಸಿ ಗಮನಸೆಳೆದಿದ್ದಾರೆ.

ಪಂದ್ಯದ ಏಳನೇ ಓವರ್‌ನಲ್ಲಿ ಭಾರತದ ನವದೀಪ್ ಸೈನಿ ಬೌಲ್ ಮಾಡುವ ಮೊದಲೆ ಈ ಇಬ್ಬರೂ ಮೈದಾನದೊಳಕ್ಕೆ ನುಗ್ಗಿದ್ದಾರೆ. ಒಬ್ಬನಂತೂ ಬ್ಯಾಟ್ಸ್‌ಮನ್‌ಗಳಿಗೆ ತೀರಾ ಹತ್ತಿರ ತೆರಳಿ “ನೋ ಒನ್ ಬಿಲಿಯನ್ ಡಾಲರ್ ಟು ಅದಾನಿ (ಅದಾನಿಗೆ ಒಂದು ಬಿಲಿಯನ್ ಡಾಲರ್ ನೀಡಬೇಡಿ)” ಎಂಬ ಪ್ಲೆಕಾರ್ಡ್ ಪ್ರದರ್ಶಿಸಿದ್ದಾನೆ. ಆತನ ಟೀಶರ್ಟ್ ಮೇಲೆ ಕಲ್ಲಿದ್ದಲು ಯೋಜನೆ ನಿಲ್ಲಿಸಿ, ಅದಾನಿ ನಿಲ್ಲಿಸಿ, ಆತನ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಬರೆಯಲಾಗಿತ್ತು.

ಕೂಡಲೇ ಮೈದಾನದ ಸೆಕ್ಯುರಿಟಿಗಳು ಧಾವಿಸಿ ಇಬ್ಬರನ್ನು ಕ್ರೀಡಾಂಗಣದಿಂದ ಹೊರಗೆ ಕಳಿಸಿದ್ದಾರೆ. ಆದರ ಹೊರಗಡೆಯು ಸಹ 50ಕ್ಕೂ ಹೆಚ್ಚು ಪ್ರತಿಭಟನಾಕಾರರು ಅದಾನಿ ಕಂಪನಿಗೆ ಕಲ್ಲಿದ್ದಲು ಯೋಜನೆ ನೀಡುವುದರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಕಾರ್ಮೈಕಲ್ ಕಲ್ಲಿದ್ದಲು ಗಣಿ ಹಲವಾರು ವರ್ಷಗಳಿಂದ ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ, ಸ್ಟಾಪ್ ಅದಾನಿ ಸಮೂಹವು ಪರಿಸರದ ಮೇಲೆ ಬೀರಬಹುದಾದ ಋಣಾತ್ಮಕ ಪ್ರಭಾವದಿಂದಾಗಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದೆ.

ಇದಕ್ಕೂ ಮುನ್ನ ಸೆಪ್ಟೆಂಬರ್‌ನಲ್ಲಿ ಅದಾನಿ ಕಲ್ಲಿದ್ದಲು ಗಣಿಯು ಪರಿಸರ ಕಾರ್ಯಕರ್ತರ ವಿರುದ್ಧ ಜಯಗಳಿಸಿತ್ತು. ಈ ಯೋಜನೆಯು ಕ್ವೀನ್ಸ್‌ಲ್ಯಾಂಡ್ ರಾಜ್ಯದ ಜನರಿಗೆ 1,500 ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡುತ್ತದೆ ಎಂದು ಅದಾನಿ ಕಂಪನಿ ಘೋಷಿಸಿತ್ತು.

ಶುಕ್ರವಾರ, ಸ್ಟಾಪ್ ಅದಾನಿ ಗುಂಪು ಪತ್ರಿಕಾ ಪ್ರಕಟಣೆ ಹೊರಡಿಸಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅದಾನಿಗೆ 1 ಬಿಲಿಯನ್ ಆಸ್ಟ್ರೇಲಿಯಾದ ಡಾಲರ್ ಸಾಲ ನೀಡಬಾರದು ಎಂದು ಒತ್ತಾಯಿಸಿದೆ.


ಇದನ್ನೂ ಓದಿ; ಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR  

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...