Homeಕರ್ನಾಟಕಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

ಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಈ ಹಿನ್ನಲೆಯಲ್ಲಿ ಬೆಂಗಳೂರಿಗೂ ಬಂದ್‌ ಬಿಸಿ ತಟ್ಟಿದೆ. ಬೆಳಿಗ್ಗೆಯಿಂದಲೂ ನಗರದ ಟೌನ್‌ಹಾಲ್‌ನಲ್ಲಿ ಜಮಾಯಿಸಿದ್ದ ರೈತ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಟೌನ್‌ಹಾಲ್‌ನಲ್ಲಿ ಸಮಾವೇಶಗೊಂಡ ರೈತರು ಅಲ್ಲಿಂದ ಮೆರವಣಿಗೆಯ ಮೂಲಕ ಮೈಸೂರು ಬ್ಯಾಂಗ್ ವೃತ್ತಕ್ಕೆ ಆಗಮಿಸಿ ಪ್ರತಿಭಟನೆಯನ್ನು ಮುಂದುವರೆಸಿದರು.

ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ಬಯ್ಯಾ ರೆಡ್ಡಿ, “ರೈತರು ಕರೆ ನೀಡಿದ್ದ ಭಾರತ ಬಂದ್‌ಗೆ ಕರ್ನಾಟಕ ರಾಜ್ಯದ ಜನರು ಓಗೊಟ್ಟು ಬಂದ್‌‌ ಅನ್ನು ಯಶಸ್ವಿಗೊಳಿಸಿದ್ದಾರೆ. ರೈತ ಮತ್ತು ಕಾರ್ಮಿಕ ಮುಖಂಡರ ಬಂಧನವನ್ನು ಮಾಡಿದ ನಂತರ ಕೂಡಾ ಬಂದ್‌ ಯಶಸ್ವಿಯಾಗಿದೆ. ಬಂದ್‌ ಯಶಸ್ವಿಯಾಗಬಾರದು ಎಂದು ಸರ್ಕಾರವು ಸಾರಿಗೆಗಳನ್ನು ಖಾಲಿಖಾಲಿಯಾಗಿ ಓಡಿಸುತ್ತಿದೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “ರಾಜ್ಯದಲ್ಲಿ ‘ಭಾರತ್‌ ಬಂದ್’ ಯಶಸ್ವಿಯಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರೈತ ಆಂದೋಲನದಲ್ಲಿ 11 ಲಕ್ಷ ಜನರು ಭಾಷೆ, ಧರ್ಮ, ಗಡಿಗಳನ್ನು ಮೀರಿ ಸೇರಿದ್ದರು. ದೇಶದಲ್ಲಿ ಚಳವಳಿಗಳ ಯುಗ ಪ್ರಾರಂಭವಾಗಿದೆ, ಆದರೆ ಇದಕ್ಕೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಸಿಗುತ್ತಿಲ್ಲ. ಅದಕ್ಕಾಗಿ ರೈತರು ಸಮಾಜಿಕ ಜಾಲತಾಣವನ್ನು ಬಳಸಿಕೊಂಡು ದೇಶದ 130 ಕೋಟಿ ಜನರನ್ನು ತಲುಪುತ್ತಿದ್ದೇವೆ” ಎಂದರು.

“ಸರ್ಕಾರ ಜಾರಿಗೆ ತಂದಿರುವ ಕಾನೂನುಗಳನ್ನು 18 ತಿಂಗಳು ಅಮಾನತ್ತಿನಲ್ಲಿ ಇಟ್ಟಿದೆ. ಅಂದರೆ ಒಂದು ರೀತಿಯಲ್ಲಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಇದೀಗ ಕಾನೂನುಗಳು ನಮ್ಮ ಪಾಲಿಗೆ ಸತ್ತು ಹೋಗಿದೆ. ನಾವೀಗ ಅದರ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ. ನವೆಂಬರ್‌ನಲ್ಲಿ ಇದಕ್ಕಿಂತಲೂ ದೊಡ್ಡ ಹೋರಾಟ ದೆಹಲಿಯಲ್ಲಿ ನಡೆಲಿದೆ. ಮುಂದಿನ ದಿನಗಳಲ್ಲಿ ದೆಹಲಿಯಿಂದ ಬಿಜೆಪಿಯನ್ನು ಓಡಿಸುವಂತಹ ಮತ್ತು ಅಲ್ಲಿನ ಗದ್ದುಗೆಯ ಹತ್ತಿರ ಸುಳಿಯುವಂತಹ ನಿರ್ಣಯವನ್ನು ಕೈಗೊಳ್ಳುತ್ತೇವೆ” ಎಂದು ನಾಗೇಂದ್ರ ಅವರು ಹೇಳಿದರು.

ಇದನ್ನೂ ಓದಿ: ಭಾರತ್ ಬಂದ್: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಚಿತ್ರಗಳು, ವಿಡಿಯೊ ನೋಡಿ…

ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಕಳೆದ ಹತ್ತು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಒಕ್ಕೂಟ ಸರ್ಕಾವು ರೈತರಿಂದ ದಿಗ್ಬಂಧನಕ್ಕೆ ಒಳಗಾಗಿದೆ. ಅನ್ನವನ್ನು ಐಟಿ ಬಿಟಿ ಕಂಪೆನಿಗಳಲ್ಲಿ ಬೆಳೆಯಲು ಸಾಧ್ಯವಿಲ್ಲ. ಅದನ್ನು ಭೂಮಿಯಲ್ಲಷ್ಟೇ ಬೆಳೆಯಲು ಸಾಧ್ಯ. ರೈತರ ಬೆವರು ಹರಿದರೆ ಮಾತ್ರ ಅಂಬಾನಿ ಅದಾನಿಯ ಮಾಲ್‌ಗಳು ತುಂಬುತ್ತದೆ. ಪ್ರಧಾನಿ ಮೋದಿಗೆ ರೈತರನ್ನು ಉದ್ದೇಶಿಸಿ ಮಾತನಾಡುವ ಯೋಗ್ಯತೆ, ಧೈರ್ಯ ಇಲ್ಲ. ಒಕ್ಕೂಟ ಸರ್ಕಾರ ಕ್ಯಾಕರಿಸಿ ಉಗುಳಿದರೆ ಅದನ್ನೇ ಪ್ರಸಾದ ಎಂದು ರಾಜ್ಯದ ಬಿಜೆಪಿ ಸರ್ಕಾರ ತಿಳಿದುಕೊಂಡಿದೆ” ಎಂದು ಹೇಳಿದರು.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್‌ಆರ್‌ ಬೊಮ್ಮಾಯಿ ಅವರು ದೇಶದ ಖ್ಯಾತ ಕಮ್ಯುನಿಷ್ಟ್‌ ಚಿಂತಕ ಎಂಎನ್‌ ರಾಯ್ ಅವರ ವಿಚಾರಧಾರೆಗಳಲ್ಲಿ ನಂಬಿಕೆ ಇಟ್ಟವರು. ಆದರೆ ಅವರ ಮಗ ಮುಖ್ಯಮಂತ್ರಿ ಬಸವರಾಜ್ ಅವರು ಕೇಶವಕೃಪಾದ ಗುಲಾಮರಾಗಿದ್ದಾರೆ. ರೈತರ ಹೋರಾಟವು ‘ಪ್ರಾಯೋಜಿತ’ ಎಂದು ಅವರು ಹೇಳುತ್ತಾರೆ. ಹಾಗಾದರೆ ನಿಮ್ಮನ್ನು ಅಧಿಕಾರಕ್ಕೆ ತಂದವರು ಯಾರು? ನಿಮ್ಮನ್ನು ಪ್ರಾಯೋಜಿಸಿದವರು ಯಾರು? ಕರ್ನಾಟಕದಲ್ಲಿ ಬಿಜೆಪಿ ಸರ್ಕಾರಕ್ಕೆ ದುಡ್ಡು ಕೊಟ್ಟವರು ಯಾರು? ಒಕ್ಕೂಟ ಸರ್ಕಾರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಹಣ ನೀಡಿದವರು ಯಾರು? ಎಂದು ನಾವು ಪ್ರಶ್ನಿಸುತ್ತೇವೆ. ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವುದು ಮತ್ತೊಂದು ಸ್ವಾತಂತ್ಯ್ರ ಹೋರಾಟ” ಎಂದು ಮಾವಳ್ಳಿ ಶಂಕರ್‌ ಅವರು ತಿಳಿಸಿದರು.

ಇದನ್ನೂ ಓದಿ: ಭಾರತ್‌ ಬಂದ್‌: ಅನ್ನದಾತನ ಹೋರಾಟಕ್ಕೆ ದನಿಗೂಡಿಸಿದ ಮಹಾನಗರ ಬೆಂಗಳೂರು

ನಂತರ ಮಾತನಾಡಿದ ಸಿಐಟಿಯು ಅಧ್ಯಕ್ಷರಾದ ಎಸ್‌. ವರಲಕ್ಷ್ಮಿ ಅವರು,“ದೇಶಕ್ಕೆ ಅನ್ನ ನೀಡುವ ರೈತರು, ಸುಮಾರು ಒಂದು ವರ್ಷದಿಂದ ದೆಹಲಿಯ ಹೆದ್ದಾರಿಗಳಲ್ಲೇ ತಮ್ಮ ಮನೆಯನ್ನಾಗಿ ಮಾಡಿಕೊಂಡು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿದ್ದಾರೆ. ಅದಕ್ಕಾಗಿ ದೇಶದ ಭಾಗಶಃ ಎಲ್ಲಾ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿದೆ. ದೇಶದಲ್ಲಿ ನಡೆಯುತ್ತಿರುವ ಹೋರಾಟವು ದೇಶದ ಚರಿತ್ರೆಯಲ್ಲಿ ದಾಖಲು ಮಾಡಬೇಕಾದ ಹೋರಾಟವಾಗಿದೆ. ಇದು ರೈತನ ಸ್ವಾಭಿಮಾನ ಮತ್ತು ಸ್ವಾತಂತ್ಯ್ರವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟ. ಹಾಗಾಗಿಯೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವಂತಹ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ” ಎಂದು ಹೇಳಿದರು.

“ಸರ್ಕಾರ ಜಾರಿಗೆ ತಂದಿರುವ ನೀತಿಗಳನ್ನು ವಾಪಾಸು ಪಡೆಯುವ ತನಕವು, ನಮ್ಮ ಹೋರಾಟ ಮುಂದುವರೆಯಲಿದೆ. ಇದು ಯಾವುದೆ ಕಾರಣಕ್ಕೂ ನಿಲ್ಲಲ್ಲ ಎಂಬುವುದನ್ನು ಸಾರಿ ಸಾರಿ ಹೇಳುತ್ತೇವೆ. ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ. ಬದಲಾಗಿ ಖಾಸಗಿ ಬಂಡವಾಳಶಾಹಿಗಳ, ಕಾರ್ಪೋರೇಟ್‌ಗಳ ಮತ್ತ ವಿದೇಶಿ ಬಂಡವಾಳಗಾರರ ಪರವಾಗಿ ನಿಲ್ಲುತ್ತಿದೆ” ಎಂದು ವರಲಕ್ಷ್ಮಿ ಆಕ್ರೋಶ ವ್ಯಕ್ತಪಡಿಸಿದರು.

ಜೊತೆಗೆ ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌, ಭೂಮಿ ಮತ್ತು ವಸತಿ ವಂಚಿತ ಹಕ್ಕುಗಳ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್‌ ಕೆರೆಗೊಡು, ಜನವಾದಿ ಮಹಿಳಾ ಸಂಘನೆಯ ಗೌರಮ್ಮ, ಇಂಟಕ್‌ ಮುಖಂಡರು, ಚಾಲಕರ ಸಂಘಟನೆಗಳ ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯ ಮತ್ತು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುಖ್ಯಮಂತ್ರಿಯವರೇ, ರೈತ ಹೋರಾಟ ಪ್ರಾಯೋಜಿತವಾದರೆ ತಪ್ಪೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...