HomeಮುಖಪುಟPUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

PUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

ಭಾರತದಲ್ಲಿ ಸುಮಾರು 33 ಮಿಲಿಯನ್ ಸಕ್ರಿಯ PUBG ಆಟಗಾರರಿದ್ದಾರೆ.

- Advertisement -
- Advertisement -

ಲಡಾಖ್‌ನಲ್ಲಿ ಚೀನಾ ಮತ್ತೆ ಪ್ರಚೋದನೆಯಲ್ಲಿ ತೊಡಗಿದೆ ಎಂಬ ಆರೋಪದ ನಡುವೆ ಭಾರತವು ’PUBG’ ಸೇರಿದಂತೆ ಜನಪ್ರಿಯ 118 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಸಿದೆ. ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ರಕ್ಷಣಾ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿದೆ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಸುಮಾರು 33 ಮಿಲಿಯನ್ ಸಕ್ರಿಯ PUBG ಆಟಗಾರರಿದ್ದಾರೆ ಎಂದು ವರದಿಗಳಿವೆ. ದೈನಂದಿನ ಈ ಆಟವನ್ನು ಸುಮಾರು 13 ಮಿಲಿಯನ್ ಬಳಕೆದಾರರು ಬಳಸುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ: 2.44 ಲಕ್ಷ ಅನುಯಾಯಿಗಳಿರುವ ‘ವಿಬೋ ಆ್ಯಪ್’ ಅನ್ನು ಡಿಲೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರಕಾರ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಇತರ ಅಪ್ಲಿಕೇಶನ್‌ಗಳೊಂದಿಗೆ ಮೊಬೈಲ್ ಗೇಮ್ ಅನ್ನು ಕೂಡಾ ನಿಷೇಧಿಸಲಾಗಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರಕಾರ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಇತರ ಅಪ್ಲಿಕೇಶನ್‌ಗಳೊಂದಿಗೆ ಪಬ್‌ಜಿ ಮೊಬೈಲ್ ಗೇಮ್ ಅನ್ನು ಕೂಡಾ ನಿಷೇಧಿಸಲಾಗಿದೆ.

“ಈ ನಿರ್ಧಾರವು ಭಾರತೀಯ ಸೈಬರ್‌ ಸ್ಪೇಸ್‌ನ ಸುರಕ್ಷತೆ, ರಕ್ಷಣೆ ಮತ್ತು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳಲು ಮಾಡಿರುವ ಕ್ರಮವಾಗಿದೆ. ಇದು ಕೋಟ್ಯಾಂತರ ಭಾರತೀಯ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆದಾರರ ಹಿತಾಸಕ್ತಿಗಳನ್ನು ಕಾಪಾಡುತ್ತದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಕೇವಲ ಆ್ಯಪ್‌ಗಳನ್ನು ನಿಷೇಧಿಸಿದರೆ ಸಾಲದು; ಚೀನಾಕ್ಕೆ ತಕ್ಕ ಉತ್ತರ ನೀಡಬೇಕು: ಮಮತಾ ಬ್ಯಾನರ್ಜಿ

ಈ ದುರುದ್ದೇಶಪೂರಿತ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಲು ಗೃಹ ಸಚಿವಾಲಯದ ಸೈಬರ್ ಅಪರಾಧ ಕೇಂದ್ರವು ಶಿಫಾರಸು ಮಾಡಿದೆ ಎಂದು ಸರ್ಕಾರ ತಿಳಿಸಿದೆ.

ಸರ್ಕಾರ ನಿಷೇಧಿಸಿದ ಅಪ್ಲಿಕೇಷನ್‌ ಹೆಸರನ್ನು ಕೆಳಗಿನ ಟ್ವೀಟ್‌ನಲ್ಲಿ ಕಾಣಬಹುದಾಗಿದೆ.


ಇದನ್ನೂ ಓದಿ: ಸ್ವದೇಶಿ ಆಪ್‌ಗಳನ್ನು ತಯಾರಿಸಲು ಐಟಿ ಮಂದಿ ಸವಾಲು ಸ್ವೀಕರಿಸಿ: ಮೋದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...