Homeಮುಖಪುಟಇಂಡಿಯಾ ಒಕ್ಕೂಟದಿಂದ ಚು.ಆಯೋಗದ ಮುಖ್ಯ ಆಯುಕ್ತರ ವಜಾ ನಿರ್ಣಯಕ್ಕೆ ಚಿಂತನೆ: ವಿಪಕ್ಷಗಳ ತೀವ್ರ ವಾಗ್ದಾಳಿ

ಇಂಡಿಯಾ ಒಕ್ಕೂಟದಿಂದ ಚು.ಆಯೋಗದ ಮುಖ್ಯ ಆಯುಕ್ತರ ವಜಾ ನಿರ್ಣಯಕ್ಕೆ ಚಿಂತನೆ: ವಿಪಕ್ಷಗಳ ತೀವ್ರ ವಾಗ್ದಾಳಿ

- Advertisement -
- Advertisement -

ನವದೆಹಲಿ: ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾ ಮಾಡಲು ಸಂಸತ್ತಿನಲ್ಲಿ ನಿರ್ಣಯ ಮಂಡಿಸಲು ಗಂಭೀರವಾಗಿ ಚಿಂತನೆ ನಡೆಸಿದೆ. ಸೋಮವಾರ (ಆಗಸ್ಟ್ 18, 2025) ನಡೆದ ವಿರೋಧ ಪಕ್ಷಗಳ ಸಂಸದೀಯ ನಾಯಕರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಆಯೋಗವು ‘ತಪ್ಪು ಮಾಹಿತಿ’ ಹರಡುತ್ತಿದೆ ಎಂಬ ಸಿಇಸಿ ಆರೋಪಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯಲ್ಲಿ 65 ಲಕ್ಷ ಮತದಾರರನ್ನು ಕೈಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿವೆ. ಸುಪ್ರೀಂ ಕೋರ್ಟ್ ಕೂಡ ಈ ಕುರಿತು ವಿವರಗಳನ್ನು ಪ್ರಕಟಿಸುವಂತೆ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಆದರೂ, ಭಾನುವಾರ (ಆಗಸ್ಟ್ 17, 2025) ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರು “ವಿರೋಧ ಪಕ್ಷಗಳು ತಪ್ಪು ಮಾಹಿತಿಯನ್ನು ಹರಡುತ್ತಿವೆ” ಎಂದು ಆರೋಪಿಸಿದ್ದು, ಇದು ವಿಪಕ್ಷ ನಾಯಕರನ್ನು ಕೆರಳಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, “ಸಿಇಸಿ ಜ್ಞಾನೇಶ್ ಕುಮಾರ್ ಅವರು ಒಬ್ಬ ಮುಖ್ಯ ಚುನಾವಣಾ ಆಯುಕ್ತರಂತೆ ಮಾತನಾಡದೆ, ಬಿಜೆಪಿಯ ರಾಜಕಾರಣಿಯಂತೆ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷಗಳು ಎತ್ತಿದ ಯಾವುದೇ ಪ್ರಶ್ನೆಗಳಿಗೆ ಅವರು ಉತ್ತರಿಸಿಲ್ಲ. ಬದಲಿಗೆ, ಪ್ರಶ್ನೆ ಕೇಳಿದವರನ್ನೇ ಗೇಲಿ ಮಾಡಿದ್ದಾರೆ. ರಾಜಕೀಯದಲ್ಲಿ ಭಾಗಿಯಾಗುವುದು ಸಿಇಸಿ ಕೆಲಸವೇ?” ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂಡಿಯಾ ಒಕ್ಕೂಟ ಈ ನಿರ್ಣಯ ಮಂಡಿಸಲು ಸಾಕಷ್ಟು ಸದಸ್ಯರನ್ನು ಹೊಂದಿದೆ ಎಂದು ಅವರು ಹೇಳಿದರು.

2023ರ ‘ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ನಿಯಮಗಳು ಮತ್ತು ಅವಧಿಯ) ಕಾಯಿದೆ’ಯನ್ನು ಉಲ್ಲೇಖಿಸಿದ ವೇಣುಗೋಪಾಲ್, “ಈ ಕಾಯಿದೆಯು ಸಿಇಸಿ ಮತ್ತು ಚುನಾವಣಾ ಆಯುಕ್ತರಿಗೆ ಅವರ ಹಿಂದಿನ ಮತ್ತು ಈಗಿನ ಎಲ್ಲಾ ನಿರ್ಧಾರಗಳಿಗೆ ರಕ್ಷಣೆ ನೀಡುತ್ತದೆ. ಈ ರೀತಿಯ ರಕ್ಷಣೆ ಏಕೆ ನೀಡಲಾಗಿದೆ ಎಂಬುದನ್ನು ‘ಸೂಕ್ಷ್ಮವಾಗಿ ಗಮನಿಸಬೇಕು’ ಎಂದು ಅವರು ಸೂಚ್ಯವಾಗಿ ಹೇಳಿದರು. ಈ ಕಾಯಿದೆಯ ಪ್ರಕಾರ, ಸಿಇಸಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ತೆಗೆದುಹಾಕುವ ರೀತಿಯಲ್ಲಿಯೇ ಪದಚ್ಯುತಗೊಳಿಸಬಹುದು. ಇದಕ್ಕಾಗಿ ಸಂಸತ್ತಿನ ಎರಡೂ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದ ನಿರ್ಣಯ ಅಗತ್ಯವಿದ್ದು, ಕನಿಷ್ಠ 50 ಸದಸ್ಯರು ಈ ನಿರ್ಣಯಕ್ಕೆ ಸಹಿ ಹಾಕಬೇಕಾಗುತ್ತದೆ.

ಸಿಇಸಿ ಪತ್ರಿಕಾಗೋಷ್ಠಿಗೆ ಪ್ರತಿಕ್ರಿಯೆ ನೀಡಲು, ಇಂಡಿಯಾ ಒಕ್ಕೂಟದ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ, ಮುಂಬರುವ ರಾಜ್ಯ ಚುನಾವಣೆಗಳು ಇನ್ನೂ ಮೂರು ತಿಂಗಳಿರುವಾಗ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು “ಇಷ್ಟು ಅವಸರದಲ್ಲಿ” ಏಕೆ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಸಿಇಸಿ ಉತ್ತರಿಸಿಲ್ಲ ಎಂದು ಅವರು ಆರೋಪಿಸಿದರು.

ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ರಾಮ್‌ಗೋಪಾಲ್ ಯಾದವ್ ಮಾತನಾಡಿ, “ಚುನಾವಣಾ ಆಯೋಗವು ರಾಹುಲ್ ಗಾಂಧಿಗೆ ಅಫಿಡವಿಟ್ ನೀಡುವಂತೆ ಕೇಳಿದೆ. ಆದರೆ, ನಾವು 2022ರಲ್ಲಿ ಉತ್ತರ ಪ್ರದೇಶ ಚುನಾವಣೆಯಲ್ಲಿ 18,000 ಎಸ್ಪಿ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ ಬಗ್ಗೆ ಅಫಿಡವಿಟ್‌ಗಳನ್ನು ನೀಡಿದ್ದೇವೆ. ಆದರೆ, ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದರು.

ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ, “ಕಳೆದ ಲೋಕಸಭೆ ಚುನಾವಣೆ ನಡೆದ ಮತದಾರರ ಪಟ್ಟಿ ತಪ್ಪಾಗಿದ್ದರೆ, ಪ್ರಸ್ತುತ ಲೋಕಸಭೆಯನ್ನು ವಿಸರ್ಜಿಸಬೇಕು. ಅದು ನಿಜವಾಗಿದ್ದರೆ, ಈಗಿನ ಮತ್ತು ಹಿಂದಿನ ಚುನಾವಣಾ ಆಯುಕ್ತರ ವಿರುದ್ಧ ಮೊಕದ್ದಮೆ ಹೂಡಬೇಕು” ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಜನತಾ ದಳದ ನಾಯಕ ಮನೋಜ್ ಝಾ ಅವರು ಸಿಇಸಿ ಕುಮಾರ್ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, “ನಿನ್ನೆ ನಾವು ನಮ್ಮ ಸಿಇಸಿಯನ್ನು ಹುಡುಕುತ್ತಿದ್ದೆವು, ಆದರೆ ನಮಗೆ ಹೊಸ ಬಿಜೆಪಿ ವಕ್ತಾರರು ಸಿಕ್ಕರು” ಎಂದು ಟೀಕಿಸಿದರು.

ಇಂಡಿಯಾ ಒಕ್ಕೂಟದ ಈ ನಿಲುವು, ಮುಂಬರುವ ದಿನಗಳಲ್ಲಿ ಸಂಸತ್ತಿನಲ್ಲಿ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

‘ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಪಕ್ಷ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...