HomeಮುಖಪುಟED,IT, CBI ಅಧಿಕಾರ ಮೊಟಕುಗೊಳಿಸಿ: ಚುನಾವಣಾ ಆಯೋಗದ ಮೊರೆ ಹೋದ ಪ್ರತಿಪಕ್ಷಗಳ ನಿಯೋಗ

ED,IT, CBI ಅಧಿಕಾರ ಮೊಟಕುಗೊಳಿಸಿ: ಚುನಾವಣಾ ಆಯೋಗದ ಮೊರೆ ಹೋದ ಪ್ರತಿಪಕ್ಷಗಳ ನಿಯೋಗ

- Advertisement -
- Advertisement -

ಲೋಕಸಭೆ ಚುನಾವಣೆ ಮುಗಿಯುವವರೆಗೆ ಕೇಂದ್ರೀಯ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ (ಇಡಿ), ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರ ಮೊಟಕುಗೊಳಿಸುವಂತೆ ಇಂಡಿಯಾ ಮೈತ್ರಿ ಕೂಟದ ನಾಯಕರು ಭಾರತೀಯ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

2021-22 ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ಸಂವಿಧಾನದ 324ನೇ ವಿಧಿಯು ಚುನವಣಾ ಆಯೋಗಕ್ಕೆ ಎಲ್ಲಾ ಅಧಿಕಾರಗಳನ್ನು ನೀಡುತ್ತದೆ. ಚುನಾವಣೆಗಳು ಮುಗಿಯುವವರೆಗೆ ಇಡಿ, ಸಿಬಿಐ ಮತ್ತು ಐಟಿ ಕ್ರಮವನ್ನು ಮೊಟಕುಗೊಳಿಸಲು ಚುನಾವಣಾ ಆಯೋಗ ತನ್ನ ಅಧಿಕಾರವನ್ನು ಬಳಸಬೇಕೆಂದು ಇಂಡಿಯ ಒಕ್ಕೂಟದ ನಾಯಕರು ಆಗ್ರಹಿಸಿದ್ದಾರೆ ಎಂದು ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಇಂಡಿಯಾ ಮೈತ್ರಿ ಬಣದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್, ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ, ಟಿಎಂಸಿ ಸಂಸದ ಡೆರೆಕ್ ಒ ಬ್ರಿಯಾನ್ ಮತ್ತು ಹಲವು ನಾಯಕರ ನಿಯೋಗ ಚುನಾವಣಾ ಆಯೋಗವನ್ನು ಭೇಟಿ ಮಾಡಿದೆ.

ಚುನಾವಣಾ ಆಯೋಗವನ್ನು ಭೇಟಿಯಾದ ನಂತರ, ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಮಾಧ್ಯಮಗಳೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ಇರುವಂತೆ ಚುನಾವಣಾ ಆಯೋಗವು ಖಾತರಿಪಡಿಸಬೇಕು. ಇದು ಓರ್ವ ವ್ಯಕ್ತಿ ಅಥವಾ ಒಂದು ಪಕ್ಷದ ಬಗ್ಗೆ ಅಲ್ಲ. ಇದು ಸಂವಿಧಾನದ ಮೂಲ ರಚನೆಗೆ ಸಂಬಂಧಿಸಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಸಮಾನ ಅವಕಾಶಗಳ ಅಗತ್ಯವಿದೆ. ಆದರೆ, ನೀವು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸಮಾನ ಅವಕಾಶವನ್ನು ನೀಡುವುದಿಲ್ಲ. ಅದು ಮಕ್ತ ಮತ್ತು ನ್ಯಾಯೋಚಿತ ಚುನಾವಣೆಯ ಮೇಲೆ ಮತ್ತು ಕೊನೆಗೆ ಪ್ರಜಾಪ್ರಭುತ್ವದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಹುಕೋಟಿ ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜವಳಿ ಸಚಿವ ಚಂದ್ರನಾಥ್ ಸಿನ್ಹಾ ಅವರನ್ನು ನಿನ್ನೆ ಪ್ರಶ್ನಿಸಿದೆ ಮತ್ತು ಬಿರ್‌ಭೂಮ್ ಜಿಲ್ಲೆಯ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿದೆ. ಎನ್‌ಸಿಪಿ-ಎಸ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಅವರು ಕೂಡ ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ವಿರುದ್ಧ ಚುನಾವಣಾ ಆಯೋಗ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ.

ಸರಕಾರಿ ತನಿಖಾ ಸಂಸ್ಥೆಗಳು ನಿಧಾನವಾಗಿ ಮತ್ತು ಖಚಿತವಾಗಿ ನಂಬಿಕೆಯನ್ನು ಕಳೆದುಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವದ ಸಾವು ಎಂದು ಹೇಳಿದ್ದು, ಚುನಾವಣೆ ಸಂದರ್ಭದಲ್ಲಿ ಅತ್ಯುನ್ನತ ಸಂಸ್ಥೆಯಾಗಿರುವ ಚುನಾವಣಾ ಆಯೋಗ ಮಧ್ಯಸ್ಥಿಕೆ ವಹಿಸುವಂತೆ ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...