Homeಮುಖಪುಟ'ಮೋದಿ ಅದಾನಿ ಒಂದೆ..' ಎಂಬ ವಿಶೇಷ ಜಾಕೆಟ್ ಧರಿಸಿದ ಇಂಡಿಯಾ ಬ್ಲಾಕ್ ಸದಸ್ಯರು; ಸಂಸತ್ತಿನಲ್ಲಿ ಪ್ರತಿಭಟನೆ

‘ಮೋದಿ ಅದಾನಿ ಒಂದೆ..’ ಎಂಬ ವಿಶೇಷ ಜಾಕೆಟ್ ಧರಿಸಿದ ಇಂಡಿಯಾ ಬ್ಲಾಕ್ ಸದಸ್ಯರು; ಸಂಸತ್ತಿನಲ್ಲಿ ಪ್ರತಿಭಟನೆ

- Advertisement -
- Advertisement -

ಸಂಸತ್ತಿನಲ್ಲಿ ಇಂದು ಹಲವಾರು ‘ಇಂಡಿಯಾ’ ಬ್ಲಾಕ್ ಪಕ್ಷಗಳ ನಾಯಕರು, ‘ಮೋದಿ ಅದಾನಿ ಏಕ್ ಹೈ’ ಮತ್ತು ‘ಅದಾನಿ ಸೇಫ್ ಹೈ’ ಎಂಬ ಸ್ಟಿಕ್ಕರ್‌ಗಳುಳ್ಳ ಕಪ್ಪು ಜಾಕೆಟ್‌ಗಳನ್ನು ಧರಿಸಿದ್ದರು. ಅದಾನಿ ಸಮಸ್ಯೆಯ ಬಗ್ಗೆ ಜಂಟಿ ಸಂಸದೀಯ ತನಿಖೆಗೆ ಒತ್ತಾಯಿಸಲು ಸಂಸತ್ತಿನ ಆವರಣದಲ್ಲಿ ಘೋಷಣೆಗಳನ್ನು ಕೂಗಿದರು.

ತಮ್ಮ ಟ್ರೇಡ್ ಮಾರ್ಕ್ ಆಗಿರುವ ಬಿಳಿ ಟೀ ಶರ್ಟ್ ಮೇಲೆ ಸ್ಟಿಕ್ಕರ್ ಅಂಟಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ತನಿಖೆ ನಡೆಸಲು ಸಾಧ್ಯವಿಲ್ಲ. ಏಕೆಂದರೆ, ಅದು ಅವರ ವಿರುದ್ಧವೇ ತನಿಖೆ ನಡೆಸುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಸಂಸದರು, ಆರ್‌ಜೆಡಿ ಮತ್ತು ಎಡಪಕ್ಷಗಳಂತಹ ಹಲವಾರು ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಲಂಚ ಮತ್ತು ವಂಚನೆ ಆರೋಪದ ಮೇಲೆ ಅಮೆರಿಕ ನ್ಯಾಯಾಲಯದಲ್ಲಿ ಅದಾನಿ ವಿರುದ್ಧದ ದೋಷಾರೋಪಣೆಯ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯದ ಬಗ್ಗೆ ಸದನದಲ್ಲಿ ಮಾತನಾಡಬೇಕು ಎಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ಒತ್ತಾಯಿಸಿದರು.

ಲೋಕಸಭೆಯ ಸಚಿವಾಲಯದ ಸಲಹೆಯಂತೆ ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಮುಂದೆ ಪ್ರತಿಭಟನೆ ನಡೆಸಲಾಯಿತು. ಸಂಶತ್ತಿಗೆ ಹೋಗುವ ಮೆಟ್ಟಿಲುಗಳ ಮೇಲೆ ಅಲ್ಲ. ಸ್ಪೀಕರ್ ಓಂ ಬಿರ್ಲಾ ಅವರು ಈ ವಿಷಯವನ್ನು ಸದಸ್ಯರ ಗಮನಕ್ಕೆ ತಂದರು.

ಸ್ವಲ್ಪ ಸಮಯದ ನಂತರ, ಪ್ರತಿಭಟನಾ ನಿರತ ಸಂಸದರು ಸಂವಿದಾನ ಸದನದ ಮುಂದೆ ಸರತಿ ಸಾಲಿನಲ್ಲಿ ನಿಂತು ಮೋದಿ ಮತ್ತು ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಂಸತ್ತಿನ ಗೇಟ್‌ಗಳ ಮುಂದೆ ಪ್ರತಿಭಟನೆ ನಡೆಸದಂತೆ ಸಂಸದರಿಗೆ ಲೋಕಸಭೆ ಸೆಕ್ರೆಟರಿಯೇಟ್ ಮಂಗಳವಾರ ಸಲಹೆ ನೀಡಿದ್ದು, ಸಂಚಾರಕ್ಕೆ ಅಡ್ಡಿಯು ಅವರ ಸುರಕ್ಷತೆ ಮತ್ತು ಭದ್ರತೆಯ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.

ಮಂಗಳವಾರ ಮತ್ತು ಬುಧವಾರ ಮಕರ ದ್ವಾರದ ಮೆಟ್ಟಿಲುಗಳ ಮೇಲೆ ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದ್ದರು.

ಯುಎಸ್ ನ್ಯಾಯಾಲಯದಲ್ಲಿ ಅದಾನಿ ಮತ್ತು ಇತರ ಕಂಪನಿಯ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಮಾಡಿದ ನಂತರ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸುತ್ತಿವೆ.

ಇದನ್ನೂ ಓದಿ; ಹೋಟೆಲ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ಮೇಲೆ ಸಂಪೂರ್ಣ ನಿಷೇಧ: ಅಸ್ಸಾಂ ಸಿಎಂ ಘೋಷಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...