Homeಮುಖಪುಟಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿ ವಿರೋಧಿಸಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ

ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿ ವಿರೋಧಿಸಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ

- Advertisement -
- Advertisement -

ಆರೋಗ್ಯ ಮತ್ತು ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಹಿಂಪಡೆಯುವಂತೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಸಂಸತ್ತಿನ್ ಭವನದ ಬಳಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿತು.

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದ ಪ್ರತಿಭಟನೆಯ ವೇಳೆ ಮಾತನಾಡಿದ “ಕಾಂಗ್ರೆಸ್ ಸಂಸದೆ ಜೆಬಿ ಮಾಥರ್ “ಆರೋಗ್ಯ ಮತ್ತು ಜೀವ ವಿಮೆಗೆ ಯಾವುದೇ ಜಿಎಸ್‌ಟಿ ಅನ್ವಯಿಸಬಾರದು. ಸರ್ಕಾರದ ನಿರ್ಧಾರವು ಮಾನವ ನಂಬಿಕೆಗೆ ಯಾವುದೇ ಗೌರವ ಇಲ್ಲ ಎಂಬುವುದನ್ನು ಪ್ರತಿಬಿಂಬಿಸುತ್ತದೆ” ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಮಾಥರ್ “ಪ್ರಸ್ತುತ ಕೇಂದ್ರ ಸರ್ಕಾರ ವಿಮೆಯ ಮೇಲೆ 18 ಶೇಖಡ ಜಿಎಸ್‌ಟಿ ವಿಧಿಸಿದೆ. ಇದು ಬಡವರಿಂದ ಕಿತ್ತುಕೊಳ್ಳುವುದಾಗಿದೆ. ಸರ್ಕಾರದ ಈ ನಿರ್ಧಾರವು ಮಾನವ ನಂಬಿಕೆ ಯಾವುದೇ ಗೌರವವಿಲ್ಲ ಎಂಬುವುದನ್ನು ಪ್ರತಿಬಿಂಬಿಸುತ್ತದೆ. ವಿಮೆಯ ಮೇಲಿನ ಜಿಎಸ್‌ಟಿಯನ್ನು ಹಿಂತೆಗೆದುಕೊಳ್ಳುವ ಬೇಡಿಕೆಯ ವಿಚಾರದಲ್ಲಿ ಇಂಡಿಯಾ ಒಕ್ಕೂಟ ಒಗ್ಗಟ್ಟಾಗಿ ನಿಂತಿದೆ” ಎಂದಿದ್ದಾರೆ.

ಟಿಎಂಸಿ ವಿರೋಧ

ಆಗಸ್ಟ್ 2ರಂದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಮತ್ತು ಸಂಸದ ಸುದೀಪ್ ಬಂಡೋಪಾಧ್ಯಾಯ ಅವರೂ ಕೂಡ ಕೇಂದ್ರ ಸರ್ಕಾರದ ವೈದ್ಯಕೀಯ ಮತ್ತು ಆರೋಗ್ಯ ವಿಮೆಯ ಮೇಲಿನ 18 ಶೇ. ಜಿಎಸ್‌ಟಿ “ಜನ ವಿರೋಧಿ” ಎಂದು ಕರೆದಿದ್ದರು. ಇದು ನಾಗರಿಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ್ದ ಬಂಡೋಪಾಧ್ಯಾಯ, “ಆರೋಗ್ಯದ ಮೇಲಿನ ಜಿಎಸ್‌ಟಿ ವಿಷಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ” ಎಂದಿದ್ದರು.

“ಜೀವ ವಿಮೆ ಮತ್ತು ಔಷಧಗಳ ಮೇಲಿನ ಜಿಎಸ್‌ಟಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ನಾವು ಇಂದು ವಿಷಯ ಪ್ರಸ್ತಾಪಿಸಿದ್ದೇವೆ. ನಮ್ಮ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಿನ್ನೆ ಧ್ವನಿ ಎತ್ತಿದ್ದರು. ಈ ಜಿಎಸ್‌ಟಿ ಜನ ವಿರೋಧಿ ಎಂದು ನಮಗೆ ಅನಿಸುತ್ತಿದೆ. ಜಿಎಸ್‌ಟಿಯು ಜನರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ” ಎಂದು ಹೇಳಿದ್ದರು.

“ಜಿಎಸ್‌ಟಿ ವಿರುದ್ದ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಾವು ಬೀದಿಗಿಳಿದು ದೊಡ್ಡಮಟ್ಟದ ಹೋರಾಟ ನಡೆಸುತ್ತೇವೆ ಎಂದಿದ್ದರು. ಆಗಸ್ಟ್ 3 ರಂದು ವೈದ್ಯಕೀಯ ಮತ್ತು ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ಟಿಎಂಸಿ ಲೋಕಸಭಾ ಸಂಸದರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ : ಬಾಂಗ್ಲಾ ಬಿಕ್ಕಟ್ಟು | ಸರ್ವಪಕ್ಷ ಸಭೆ ನಡೆಸಿದ ಕೇಂದ್ರ ಸರ್ಕಾರ : ವಿಪಕ್ಷಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...