Homeಮುಖಪುಟಇವಿಎಂ ದುರ್ಬಳಕೆ ಆರೋಪ : ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಇಂಡಿಯಾ ಮೈತ್ರಿಕೂಟ ನಿರ್ಧಾರ

ಇವಿಎಂ ದುರ್ಬಳಕೆ ಆರೋಪ : ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಇಂಡಿಯಾ ಮೈತ್ರಿಕೂಟ ನಿರ್ಧಾರ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಮತಯಂತ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ‘ಇಂಡಿಯಾ ಮೈತ್ರಿಕೂಟ’ ನಿರ್ಧರಿಸಿದೆ ಎಂದು ಎನ್‌ಸಿಪಿ (ಎಸ್‌ಪಿ- ಶರದ್ ಪವಾರ್ ಬಣ) ನಾಯಕ ಪ್ರಶಾಂತ್ ಸುದಮ್ರಾವ್ ಜಗತಾಪ್ ಹೇಳಿದ್ದಾರೆ.

ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಸುಪ್ರಿಯಾ ಸುಳೆ, ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್, ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರೊಂದಿಗೆ ಮಂಗಳವಾರ (ಡಿ.10) ರಾತ್ರಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಜಗತಾಪ್ ಅವರು ಈ ವಿಷಯ ತಿಳಿಸಿದ್ದಾರೆ.

“ನಮಗೆ ಸುಪ್ರೀಂ ಕೋರ್ಟ್ ಮೇಲೆ ಭರವಸೆ ಇದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ನಮ್ಮ ಪರ ಆದೇಶ ನೀಡಲಿದೆ” ಎಂದು ಜಗತಾಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಜಯಗಳಿಸಲು ನಡೆಸಿದ ಹಗರಣ ಸಂಬಂಧ ‘ಇಂಡಿಯಾ ಮೈತ್ರಿಕೂಟ’ದ ಪರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಇಂದು ಶರದ್ ಪವಾರ್ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ನಾವು ನಿರ್ಧರಿಸಿದ್ದೇವೆ. ಇಂಡಿಯಾ ಮೈತ್ರಿಕೂಟದ ಎಲ್ಲಾ ಪಕ್ಷಗಳು ಒಂದಾಗಿ ನ್ಯಾಯಾಲಯದ ಮೊರೆ ಹೋಗಲಿವೆ. ಮತಗಳ ಸಂಖ್ಯೆಯಲ್ಲಿ ಏರಿಕೆ, ಇವಿಎಂ-ವಿವಿಪ್ಯಾಟ್ ದುರ್ಬಳಕೆ ಕುರಿತು ನಾವು ದೂರು ನೀಡಲಿದ್ದೇವೆ. ಸುಪ್ರೀಂ ಕೋರ್ಟ್ ಮೇಲೆ ನಮಗೆ ಭರವಸೆ ಇದೆ. ಅದು ನಮ್ಮ ಪರವಾಗಿ ಮತ್ತು ಹಗರಣದ ವಿರುದ್ದ ಆದೇಶ ನೀಡಲಿದೆ” ಎಂದು ಪುಣೆ ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷರೂ ಆಗಿರುವ ಪ್ರಶಾಂತ್ ಸುದಮ್ರಾವ್ ಜಗತಾಪ್ ತಿಳಿಸಿದ್ದಾರೆ.

ಈ ನಡುವೆ ಮಹಾರಾಷ್ಟ್ರದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕಿರಣ್ ಕುಲಕರ್ಣಿ ಮತಯಂತ್ರಗಳ ದುರ್ಬಳಕೆ ಆರೋಪವನ್ನು ತಳ್ಳಿ ಹಾಕಿದ್ದು, “ಇವಿಎಂಗಳಲ್ಲಿ ಬಳಸುವ ಚಿಪ್‌ಗಳು ‘ಒನ್‌ ಟೈಂ ಪ್ರೊಗ್ರಾಮೇಬಲ್’ ಆಗಿದ್ದು, ಟ್ಯಾಂಪರಿಂಗ್ ಅಸಾಧ್ಯ” ಎಂದಿದ್ದಾರೆ.

“ಕೇಂದ್ರ ಚುನಾವಣಾ ಆಯೋಗ ಇವಿಎಂ ಮತ್ತು ವಿವಿಪ್ಯಾಟ್‌ ಮತಯಂತ್ರಗಳಲ್ಲಿ ಅಭ್ಯರ್ಥಿ ಪಡೆದ ಮತಗಳನ್ನು ಹೊಂದಾಣಿಕೆ (ಟ್ಯಾಲಿ) ಮಾಡಿ ನೋಡಲು ನಿರ್ದೇಶಿಸಿರುವುದರಿಂದ ಇವಿಎಂ ಕುರಿತು ತಪ್ಪು ತಿಳುವಳಿಕೆ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ | VVPAT ಸ್ಲಿಪ್‌ಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...