Homeಮುಖಪುಟಕೆಲ ನಿರೂಪಕರು, ಟಿವಿ ಕಾರ್ಯಕ್ರಮಗಳಿಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ INDIA ಒಕ್ಕೂಟ

ಕೆಲ ನಿರೂಪಕರು, ಟಿವಿ ಕಾರ್ಯಕ್ರಮಗಳಿಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ INDIA ಒಕ್ಕೂಟ

- Advertisement -
- Advertisement -

INDIA ಒಕ್ಕೂಟದ ನಾಯಕರು ಕೆಲ ಟಿವಿ ಕಾರ್ಯಕ್ರಮಗಳು ಮತ್ತು ನಿರೂಪಕರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬಹಿಷ್ಕಾರ ಹಾಕಲು ಮುಂದಾಗಿದ್ದಾರೆ.

ಈ ಕುರಿತು INDIA ಒಕ್ಕೂಟದ ಸಮನ್ವಯ ಸಮಿತಿಯ ಮಾಧ್ಯಮ ಉಪ ಸಮಿತಿ ರಚಿಸಿದ್ದು, ಸಮಿತಿ ಬಹಿಷ್ಕಾರ ಹಾಕಬೇಕಾಗಿರುವ ನಿರೂಪಕರು ಮತ್ತು ಕಾರ್ಯಕ್ರಮಗಳ ಹೆಸರನ್ನು ಸಿದ್ಧಪಡಿಸುತ್ತಿದೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಮನೆಯಲ್ಲಿ ನಡೆದ  INDIA ಒಕ್ಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಕೆಲ ಮಾಧ್ಯಮಗಳಿಗೆ ಬಹಿಷ್ಕಾರ ಹಾಕುವ ಸಲುವಾಗಿ ಆಂಕರ್‌ಗಳು ಮತ್ತು ಕಾರ್ಯಕ್ರಮಗಳನ್ನು ಪಟ್ಟಿ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಮಾಧ್ಯಮದ ಒಂದು ವಿಭಾಗವು ಕಡಿಮೆ ಕವರೇಜ್ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಯಾತ್ರೆಗೆ ಜನ ಬೆಂಬಲ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಯಾತ್ರೆಗೆ ಹೆಚ್ಚು ಬೆಂಬಲ ನೀಡಲಾಗಿದೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ರಾಹುಲ್‌ ಯಾತ್ರೆಯನ್ನು ಬಹಿಷ್ಕರಿಸುವುದನ್ನು ಮುಂದುವರೆಸಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಸಂಪಾದಕರು ಯಾತ್ರೆಯನ್ನು ಬಹಿಷ್ಕರಿಸಿದ್ದಾರೆ ಎಂಬುದು ನನ್ನ ಆರೋಪ. ಲಕ್ಷಗಟ್ಟಲೆ  ಜನ ಯಾತ್ರೆಗೆ ಸೇರಿದ್ದಾರೆ. ಇಷ್ಟು ದೊಡ್ಡ ಯಾತ್ರೆಯನ್ನು ನೀವು ತೋರಿಸುವುದಿಲ್ಲವೇ? ಎಂದು ರಾಜಸ್ಥಾನ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

ಮೇ 2019ರಲ್ಲಿ ಕಾಂಗ್ರೆಸ್ ಒಂದು ತಿಂಗಳ ಕಾಲ ದೂರದರ್ಶನ ಕಾರ್ಯಕ್ರಮಗಳನ್ನು ಬಹಿಷ್ಕರಿಸಿತ್ತು.

ಒಂದು ತಿಂಗಳ ಕಾಲ ಟೆಲಿವಿಷನ್ ಚರ್ಚೆಗಳಿಗೆ ವಕ್ತಾರರನ್ನು ಕಳುಹಿಸದಿರಲು ಕಾಂಗ್ರೆಸ್ ನಿರ್ಧರಿಸಿತ್ತು. ಮಾಧ್ಯಮ ಚಾನೆಲ್‌ಗಳು ಮತ್ತು ಸಂಪಾದಕರು ತಮ್ಮ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಪ್ರತಿನಿಧಿಗಳನ್ನು ಇರಿಸದಂತೆ ವಿನಂತಿಸಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ 12 ಪಕ್ಷಗಳ ಪರವಾಗಿ ಮಾತನಾಡಿದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಇಂಡಿಯಾ ಒಕ್ಕೂಟದ ನಾಯಕರು ಟಿವಿಯ ಕೆಲ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಲಿದ್ದು, ಮಾಧ್ಯಮದ ಉಪ ಸಮಿತಿಯು ಈ ಕುರಿತ ಟಿವಿ ಶೋಗಳು ಮತ್ತು ನಿರೂಪಕರನ್ನು ಪಟ್ಟಿ ಮಾಡಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ದಲಿತ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮೂತ್ರವಿಸರ್ಜನೆ:  ಬಿಜೆಪಿ ಶಾಸಕನ ಬೆಂಬಲಿಗ ಸೇರಿ 7 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...