Homeಮುಖಪುಟಚುನಾವಣೆ ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಘೋಷಣೆ: ಜೈರಾಮ್ ರಮೇಶ್

ಚುನಾವಣೆ ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಘೋಷಣೆ: ಜೈರಾಮ್ ರಮೇಶ್

- Advertisement -
- Advertisement -

ಇಂಡಿಯಾ ಮೈತ್ರಿಕೂಟವು ಲೋಕಸಭೆ ಚುನಾವಣೆಯಲ್ಲಿ ನಿರ್ಣಾಯಕ ಜನಾದೇಶ ಪಡೆಯಲಿದೆ ಮತ್ತು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಇಂಡಿಯಾ ಮೈತ್ರಿಕೂಟದಲ್ಲಿ ಗರಿಷ್ಠ ಸ್ಥಾನಗಳನ್ನು ಪಡೆಯುವ ಪಕ್ಷವು ಮೈತ್ರಿಕೂಟದ ನಾಯಕತ್ವಕ್ಕೆ “ನೈಸರ್ಗಿಕ ಹಕ್ಕುದಾರ” ಆಗಿರುತ್ತದೆ. ಇಂಡಿಯಾ ಮೈತ್ರಿಕೂಟ ಲೋಕಸಭೆಯಲ್ಲಿ ಬಹುಮತಕ್ಕೆ ಬೇಕಾದ 272 ಅಂಕಗಳಿಗಿಂತ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ. ಇಂಡಿಯಾ ಮೈತ್ರಿಕೂಟವು ಬಹುಮತ ಪಡೆದಾಗ, ಕೆಲವು ಎನ್‌ಡಿಎ ಮೈತ್ರಿ ಪಕ್ಷಗಳು  ಇಂಡಿಯಾ ಮೈತ್ರಿ ಕೂಟದ ಜೊತೆ ಸೇರಲು ಮುಂದೆ ಬರಬಹುದು, ಈ ವೇಳೆ ಮೈತ್ರಿಗೆ ಸೇರಿಸಬೇಕೇ ಅಥವಾ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕು ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರನ್ನು ಇಂಡಿಯಾ ಮೈತ್ರಿಕೂಟಕ್ಕೆ ಸೇರಿಸಲಾಗುತ್ತಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಜೈರಾಮ್‌ ರಮೇಶ್, ನಿತೀಶ್ ಕುಮಾರ್  ಪಲ್ಟಿ ರಾಜಕಾರಣಕ್ಕೆ ಯಾವಾಗಲೂ ಹೆಸರುವಾಸಿಯಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನಾಯ್ಡು ಅವರು 2019ರಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರು. ಇಂಡಿಯಾ ಮೈತ್ರಿ ಪಕ್ಷಗಳಿಗೆ ಜನಾದೇಶ ಸಿಕ್ಕಾಗ, ಇಂಡಿಯಾ ಮೈತ್ರಿಕೂಟದ ಪಕ್ಷಗಳು ಮಾತ್ರವಲ್ಲದೆ ಕೆಲವು ಎನ್‌ಡಿಎ ಮೈತ್ರಿ ಪಕ್ಷಗಳು ಕೂಡ ಒಕ್ಕೂಟಕ್ಕೆ ಸೇರಬಹುದು. ಕಾಂಗ್ರೆಸ್‌ ಹೈಕಮಾಂಡ್‌, ಖರ್ಗೆ, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಎನ್‌ಡಿಎ ಮಿತ್ರಪಕ್ಷಗಳನ್ನು ಇಂಡಿಯಾ ಕೂಟದ ಜೊತೆ ಸೇರಿಸಬೇಕೆ ಎಂದು ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ಇಂಡಿಯಾ ಮತ್ತು ಎನ್‌ಡಿಎ ನಡುವಿನ ವ್ಯತ್ಯಾಸವೆಂದರೆ ಎರಡು ‘ಐ'(I)ಗಳಾಗಿದೆ. ಅದರಲ್ಲಿ ಒಂದು  ‘ಇನ್ಸಾನಿಯತ್’ ಮತ್ತು ಇನ್ನೊಂದು ‘ಇಮಾಂದಾರಿ’ ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ. ‘ಇಮಾಂದಾರಿ’ ಎಂದರೆ ಪ್ರಾಮಾಣಿಕತೆ  ಮತ್ತು ‘ಇನ್ಸಾನಿಯತ್’ ಎಂದರೆ ಮಾನವೀಯತೆ ಎಂಬ ಅರ್ಥವನ್ನು ಹೊಂದಿದೆ. ಎನ್‌ಡಿಎ ಒಳಗೆ ಇರುವ ಮಾನವೀಯತೆಯನ್ನು ಹೊಂದಿರುವ ಮತ್ತು ಪ್ರಾಮಾಣಿಕತೆಯನ್ನು ಹೊಂದಿರುವ ಪಕ್ಷವನ್ನು ಇಂಡಿಯಾ ಮೈತ್ರಿಕೂಟದ ಜೊತೆ ಸೇರಿಸುವುದಾಗಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

ನಾವು ದೊಡ್ಡ ಮಟ್ಟದಲ್ಲಿ ಗೆಲುವನ್ನು ಹೊಂದಲಿದ್ದೇವೆ ಎಂದು ನಾನು ಭಾವಿಸುತ್ತೇನೆ. ನಾವು ಸೇಡಿನ ರಾಜಕೀಯ ಮಾಡುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ವಿವೇಕಾನಂದ ರಾಕ್ ಸ್ಮಾರಕಕ್ಕೆ ಹೋಗಿ ಎರಡು ದಿನಗಳ ಕಾಲ ಧ್ಯಾನಸ್ಥರಾಗಿರುತ್ತಾರೆ. ಅದೇ ವಿವೇಕಾನಂದ ಸ್ಮಾರಕದಿಂದ ರಾಹುಲ್ ಗಾಂಧಿ ಅವರು ಸೆಪ್ಟೆಂಬರ್ 7, 2022ರಂದು ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಿದ್ದರು. ಮೋದಿ ನಿವೃತ್ತಿಯ ನಂತರದ ಜೀವನ ಏನಾಗಲಿದೆ ಎಂಬುದರ ಕುರಿತು ಧ್ಯಾನಿಸಲಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಇದನ್ನು ಓದಿ:ಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...