ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತುಗೊಳಿಸಿದ ನಂತರ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು “ಬಲವಂತವಾಗಿ” ಅಂಗೀಕರಿಸಲಾಗಿದೆ. ದೇಶದ ಸಂಸದೀಯ ವ್ಯವಸ್ಥೆಯಲ್ಲಿ ಇಂತಹ “ಬುಲ್ಡೋಜರ್ ನ್ಯಾಯ” ಮೇಲುಗೈ ಸಾಧಿಸಲು ಇಂಡಿಯಾ ಬಣ ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸೋಮವಾರದಿಂದ ದೇಶದಲ್ಲಿ ಜಾರಿಗೆ ಬಂದಿದ್ದು, ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತಂದಿವೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ (ಬಿಎಸ್‌ಎ) ಕೆಲವು ಪ್ರಸ್ತುತ ಸಾಮಾಜಿಕ ನೈಜತೆಗಳು ಮತ್ತು ಆಧುನಿಕ ಅಪರಾಧಗಳನ್ನು ಗಣನೆಗೆ ತೆಗೆದುಕೊಳ್ಳುತ್ತವೆ.
चुनाव में राजनीतिक व नैतिक झटके के बाद मोदी जी और भाजपा वाले संविधान का आदर करने का ख़ूब दिखावा कर रहें हैं, पर सच तो ये है कि आज से जो आपराधिक न्याय प्रणाली के तीन क़ानून लागू हो रहे हैं, वो 146 सांसदों को सस्पेंड कर जबरन पारित किए गए।
INDIA अब ये “बुलडोज़र न्याय” संसदीय…
— Mallikarjun Kharge (@kharge) July 1, 2024
ಹೊಸ ಕಾನೂನುಗಳು ಕ್ರಮವಾಗಿ ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳನ್ನು ಬದಲಿಸಿದವು.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, “ಚುನಾವಣೆಯಲ್ಲಿ ರಾಜಕೀಯ ಮತ್ತು ನೈತಿಕ ಆಘಾತದ ನಂತರ, ಮೋದಿ ಮತ್ತು ಬಿಜೆಪಿ ಸಂವಿಧಾನವನ್ನು ಗೌರವಿಸುವಂತೆ ನಟಿಸುತ್ತಿದ್ದಾರೆ. ಆದರೆ, ಸತ್ಯವೆಂದರೆ ಅಪರಾಧ ನ್ಯಾಯ ವ್ಯವಸ್ಥೆಯ ಮೂರು ಕಾನೂನುಗಳು ಜಾರಿಯಾಗುತ್ತಿವೆ. ಇಂದಿನಿಂದ ಜಾರಿಗೆ ಬಂದಿದ್ದು, 146 ಸಂಸದರನ್ನು ಅಮಾನತುಗೊಳಿಸಿದ ನಂತರ ಬಲವಂತವಾಗಿ ಅಂಗೀಕರಿಸಲಾಗಿದೆ. ಸಂಸದೀಯ ವ್ಯವಸ್ಥೆಯಲ್ಲಿ ಈ ‘ಬುಲ್ಡೋಜರ್ ನ್ಯಾಯ’ ಮೇಲುಗೈ ಸಾಧಿಸಲು ಇಂಡಿಯಾ ಇನ್ನು ಮುಂದೆ ಬಿಡುವುದಿಲ್ಲ” ಎಂದು ಅವರು ಪ್ರತಿಪಾದಿಸಿದರು.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಹೊಸ ಕಾನೂನುಗಳು ನ್ಯಾಯ ಒದಗಿಸಲು ಆದ್ಯತೆ ನೀಡುತ್ತವೆ. ವಸಾಹತುಶಾಹಿ ಯುಗದ ಕಾನೂನುಗಳು ದಂಡದ ಕ್ರಮಕ್ಕೆ ಪ್ರಾಮುಖ್ಯತೆಯನ್ನು ನೀಡುತ್ತವೆ” ಎಂದು ಹೇಳಿದ್ದರು.
ಸೋಮವಾರದಿಂದ, ಎಲ್ಲ ಹೊಸ ಎಫ್‌ಐಆರ್‌ಗಳನ್ನು ಬಿಎನ್‌ಎಸ್ ಅಡಿಯಲ್ಲಿ ದಾಖಲಿಸಲಾಗುತ್ತದೆ. ಆದಾಗ್ಯೂ, ಈ ಹಿಂದೆ ದಾಖಲಾದ ಪ್ರಕರಣಗಳು ಅಂತಿಮ ವಿಲೇವಾರಿಯಾಗುವವರೆಗೆ ಹಳೆಯ ಕಾನೂನುಗಳ ಅಡಿಯಲ್ಲಿ ವಿಚಾರಣೆಯನ್ನು ಮುಂದುವರಿಸಲಾಗುತ್ತದೆ.
ಇದನ್ನೂ ಓದಿ; ಇಂದಿನಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ; ಬೀದಿ ವ್ಯಾಪಾರಿ ವಿರುದ್ಧ ಮೊದಲ ಪ್ರಕರಣ ದಾಖಲು


