Homeಮುಖಪುಟಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

- Advertisement -
- Advertisement -

ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳಿಗಾಗಿ ಮಾಡಿಕೊಂಡ 2-ಬಿಲಿಯನ್ ಡಾಲರ್‌‌ ಪ್ಯಾಕೇಜ್‌ನ ಭಾಗವಾಗಿ 2017ರಲ್ಲಿ ಭಾರತ ಸರ್ಕಾರ ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನೂ ಖರೀದಿಸಿತು ಎಂದು ನ್ಯೂಯಾರ್ಕ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಕೂಡ ಸ್ಪೈವೇರ್ ಅನ್ನು ಖರೀದಿಸಿದೆ ಹಾಗೂ ಪರೀಕ್ಷಿಸಿದೆ ಎಂದು ವರ್ಷವಿಡೀ ನಡೆಸಿದ ತನಿಖೆಯಲ್ಲಿ ತಿಳಿದುಬಂದಿದೆ.

ಪತ್ರಕರ್ತರು, ಭಿನ್ನಮತೀಯರನ್ನು ಗುರಿಯಾಗಿಸಲು ಮೆಕ್ಸಿಕೋ ದೇಶ ಪೆಗಾಸಸ್ ಬಳಸಿದೆ. ಸೌದಿ ಅರೇಬಿಯಾ ದೇಶಯು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಸೌದಿ ಕಾರ್ಯಕರ್ತರಿಂದ ಕೊಲ್ಲಲ್ಪಟ್ಟ ಅಂಕಣಕಾರ ಜಮಾಲ್ ಖಶೋಗಿಯ ಸಹಚರರ ವಿರುದ್ಧ ಸ್ಪೈವೇರ್ ಬಳಸಿದೆ ಎಂದು ವರದಿ ಹೇಳಿದೆ. ಇಸ್ರೇಲಿ ರಕ್ಷಣಾ ಸಚಿವಾಲಯದಿಂದ ಪರವಾನಗಿ ಪಡೆದ ಹೊಸ ಒಪ್ಪಂದಗಳ ಅಡಿಯಲ್ಲಿ, ಪೋಲೆಂಡ್, ಹಂಗೇರಿ, ಭಾರತ ಮತ್ತು ಇತರ ದೇಶಗಳಿಗೆ ಪೆಗಾಸಸ್ ಅನ್ನು ಒದಗಿಸಲಾಗಿದೆ ಎಂದು ತನಿಖಾ ವರದಿ ಮಾಡಿದೆ.

ಜುಲೈ 2017ರಲ್ಲಿ ಇಸ್ರೇಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಆಗಿನ ಒಪ್ಪಂದಗಳತ್ತ ತನಿಖಾ ವರದಿ ಬೆರಳು ತೋರಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯು ಐತಿಹಾಸಿಕವಾಗಿ ಗಮನ ಸೆಳೆಯಿತು. ಅಲ್ಲದೆ ಸೌಹಾರ್ದಯುತವಾಗಿತ್ತು. ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸ್ಥಳೀಯ ಕಡಲತೀರದಲ್ಲಿ ಬರಿಗಾಲಿನಲ್ಲಿ ತಿರುಗಾಡಿದ್ದರು. ಸುಮಾರು 2 ಬಿಲಿಯನ್ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್ ಅನ್ನು ಮಾರಾಟ ಮಾಡಲು ಉಭಯ ದೇಶಗಳು ಒಪ್ಪಿಕೊಂಡವು ಎಂದು ವರದಿ ಹೇಳುತ್ತದೆ.

ತಿಂಗಳುಗಳ ನಂತರ ಆ ಸಮಯದಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರು ಭಾರತಕ್ಕೆ ಅಪರೂಪದ ಭೇಟಿ ನೀಡಿದರು. ಜೂನ್ 2019ರಲ್ಲಿ ಭಾರತವು ಯುಎನ್‌ನ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ವೀಕ್ಷಕ ಸ್ಥಾನಮಾನವನ್ನು ನಿರಾಕರಿಸಲು ಇಸ್ರೇಲ್‌ಗೆ ಬೆಂಬಲವಾಗಿ ಮತ ಹಾಕಿತು ಎಂದು ವರದಿ ಉಲ್ಲೇಖಿಸಿದೆ.

ಭಾರತ ಸರ್ಕಾರ ಅಥವಾ ಇಸ್ರೇಲ್ ಸರ್ಕಾರವು ಪೆಗಾಸಸ್ ಅನ್ನು ಭಾರತ ಖರೀದಿಸಿದೆ ಎಂದು ಇಲ್ಲಿಯವರೆಗೆ ಒಪ್ಪಿಕೊಂಡಿಲ್ಲ.

ತಮ್ಮ ವಿರೋಧಿಗಳು, ಪತ್ರಕರ್ತರು, ಉದ್ಯಮಿಗಳು ಇತ್ಯಾದಿಗಳ ಮೇಲೆ ಕಣ್ಣಿಡಲು ಸ್ಪೈವೇರ್ ಅನ್ನು ವಿಶ್ವದಾದ್ಯಂತ ಹಲವಾರು ಸರ್ಕಾರಗಳು ಬಳಸಿರುವ ಕುರಿತು ಮಾಧ್ಯಮ ಗುಂಪುಗಳ ಜಾಗತಿಕ ಒಕ್ಕೂಟವು ಎಚ್ಚರಿಸಿದೆ.

ಭಾರತ ಪ್ರಖ್ಯಾತ ಸುದ್ದಿ ಜಾಲತಾಣ ದಿ ವೈರ್ ನಡೆಸಿದ ತನಿಖೆಯಲ್ಲಿ ಪೆಗಾಸಸ್ ಗೂಡಾಚರ್ಯೆ ನಡೆಸಿರುವ ಸಂಭಾವ್ಯ ಪ್ರಖ್ಯಾತರ ಪಟ್ಟಿ ಹೊರಬಿದ್ದಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಸೇರಿದಂತೆ ಹಲವಾರು ಇತರ ಪ್ರಮುಖರ ಹೆಸರುಗಳಿದ್ದವು.

ಪೆಗಾಸಸ್ ಬಗ್ಗೆ ಮೊದಲ ವರದಿಗಳು ಹೊರಬಂದ ನಂತರ, ಈ ವಿಷಯವನ್ನು ಸಂಸತ್ತಿನಲ್ಲಿ ಪ್ರತಿಪಕ್ಷಗಳು ಮಂಡಿಸಿದವು. ತೀವ್ರ ಪ್ರತಿಭಟನೆಯನ್ನು ಸರ್ಕಾರದ ವಿರುದ್ಧ ನಡೆಸಲಾಯಿತು. ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತು. ಸುಪ್ರೀಂ ಕೋರ್ಟ್ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿತು. ಅದರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿ‌ದೆ.

ಭಾರತ ಪೆಗಾಸಸ್ ಸ್ಪೈವೇರ್‌ ಖರೀದಿಸಿದೆ ಎಂಬ ತನಿಖಾ ವರದಿ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ರಾಷ್ಟ್ರ ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಮೋದಿ ಸರ್ಕಾರ ಪೆಗಾಸಸ್ ಖರೀದಿಸಿತು. ಫೋನ್ ಕದ್ದಾಲಿಕೆ ಮಾಡುವ ಮೂಲಕ ಆಡಳಿತ ಪಕ್ಷ, ವಿರೋಧ ಪಕ್ಷ, ಸೇನೆ, ನ್ಯಾಯಾಂಗ ಎಲ್ಲರ ಮೇಲೂ ಕಣ್ಣು ಇಡಲಾಗಿದೆ. ಇದು ದೇಶದ್ರೋಹ” ಎಂದಿದ್ದಾರೆ.


ಇದನ್ನೂ ಓದಿರಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...