Homeಮುಖಪುಟಪಾಕಿಸ್ತಾನದ ಮೇಲೆ ಮತ್ತೆ ಸರ್ಜಿಕಲ್ ಸ್ಟ್ರೈಕ್; ಸುಳ್ಳು ಸುದ್ದಿ ಎಂದ ರಕ್ಷಣಾ ಸಚಿವಾಲಯ

ಪಾಕಿಸ್ತಾನದ ಮೇಲೆ ಮತ್ತೆ ಸರ್ಜಿಕಲ್ ಸ್ಟ್ರೈಕ್; ಸುಳ್ಳು ಸುದ್ದಿ ಎಂದ ರಕ್ಷಣಾ ಸಚಿವಾಲಯ

- Advertisement -
- Advertisement -

ಪಾಕಿಸ್ತಾನದ ಮೇಲೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಮಾಡಲಾಗಿದೆ ಎಂದು ಮಾದ್ಯಮವೊಂದರ ವರದಿ ಬಗ್ಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವಾಲಯ ಇಂತಹ ಯಾವುದೇ ಸರ್ಜಿಕಲ್ ಸ್ಟ್ರೈಕ್ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಈ ಕುರಿತು ಹಿಂದಿ ಪತ್ರಿಕೆಯೊಂದು ವರದಿ ಮಾಡಿ, ಭಾರತ ಮತ್ತೆ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಭಾಗದ  ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ಕನಿಷ್ಠ 8 ಮಂದಿ ಉಗ್ರರ ಹತ್ಯೆ ಮಾಡಿದೆ ಎಂದು ಹೇಳಿತ್ತು.ಇದರ ಜೊತೆಗೆ ಭಾರತೀಯ ಸೇನೆ ಪಿಒಕೆಯ ಪೂಂಚ್ ಮತ್ತು ರಾಜೋರಿ ಸೆಕ್ಟರ್ ನಲ್ಲಿ  2.5ಕಿ.ಮೀ ಮುಂದೆ ಸಾಗಿದೆ ಮತ್ತು ನಾಲ್ಕು ಉಗ್ರರ ತಾಂಡವನ್ನು ಹೊಡೆದುರುಳಿಸಿದೆ ಎಂದು ವರದಿ ಮಾಡಿತ್ತು.

ಸರ್ಜಿಕಲ್ ಸ್ಟ್ರೈಕ್ 3.0 ನಲ್ಲಿ ಭಾಗಿಯಾಗಿದ್ದ ಭಾರತೀಯ ಸೇನೆಯು ತಮ್ಮ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಸುರಕ್ಷಿತವಾಗಿ ಭಾರತದ ನೆಲೆಗೆ ಮರಳಿದೆ ಎಂದು ವರದಿಯು ಹೇಳಿಕೊಂಡಿದೆ. ಭಾರತದ ಸರ್ಜಿಕಲ್ ಸ್ಟ್ರೈಕ್ 3.0 ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿದ್ದರೆ, ಭಾರತದ ರಕ್ಷಣಾ ಸಚಿವಾಲಯ ಅದನ್ನು ಸುಳ್ಳು ಎಂದು ಹೇಳಿದೆ.

ಈ ವರದಿಯನ್ನು ತಳ್ಳಿಹಾಕಿದ ಭಾರತೀಯ ಸೇನೆ ಇಂತಹ ಯಾವುದೇ ಸರ್ಜಕಲ್ ಸ್ಟ್ರೈಕ್ ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಜೊತೆಗೆ ಬಾಲಾಕೋಟ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕರು ಒಳನುಸುಳಲು  ಪ್ರಯತ್ನವನ್ನು ಮಾಡಿದ್ದು, ಭಾರತೀಯ ಸೇನೆ  ಅದನ್ನು ವಿಫಲಗೊಳಿಸಿದೆ ಎಂದು ಸಚಿವಾಲಯ  ತಿಳಿಸಿದೆ.

ಭಾರತೀಯ ಸೇನೆಯ ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಭಾರತೀಯ ಸೇನೆಯು   AK 47 ರೈಫಲ್, ಎರಡು ಮ್ಯಾಗಜೀನ್‌ಗಳು, ಗ್ರೆನೇಡ್‌ಗಳು ಮತ್ತು ಪಾಕ್ ಮೂಲದ ಔಷಧಿಗಳನ್ನು ವಶಪಡಿಸಿಕೊಂಡಿದೆ.

ಇನ್ನು  ಸೋಮವಾರ ಪೂಂಚ್ ಜಿಲ್ಲೆಯ ಎಲ್‌ಒಸಿ ಬಳಿ  ನುಸುಳಲು ಪ್ರಯತ್ನಿಸುತ್ತಿದ್ದಾಗ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು ಎಂದು ಭಾರತೀಯ ಸೇನೆಯ ವಕ್ತಾರರನ್ನು ಉಲ್ಲೇಖಿಸಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಇದನ್ನು ಓದಿ: ದೆಹಲಿ: ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಾ ಚರ್ಚ್ ಗೆ ನುಗ್ಗಿ ದಾಂಧಲೆ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...