Homeಅಂತರಾಷ್ಟ್ರೀಯಭಾರತ-ಚೀನಾ ಗಡಿ ಸಂಘರ್ಷ: ಲಡಾಖ್‌ನಲ್ಲಿ ಗಂಭೀರ ಪರಿಸ್ಥಿತಿ

ಭಾರತ-ಚೀನಾ ಗಡಿ ಸಂಘರ್ಷ: ಲಡಾಖ್‌ನಲ್ಲಿ ಗಂಭೀರ ಪರಿಸ್ಥಿತಿ

ಪ್ರಸ್ತುತ ಲಡಾಖ್‌ನ 1,597 ಕಿ.ಮೀ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಚೀನಾದ ಯಾವುದೇ ಆಕ್ರಮಣವನ್ನು ಹಿಮ್ಮೆಟ್ಟಿಸಲು ಭಾರತೀಯ ಸೇನೆ ತಯಾರಾಗಿದೆ ಎನ್ನಲಾಗಿದೆ.

- Advertisement -
- Advertisement -

ಆಗಸ್ಟ್ 29 ಮತ್ತು 30 ರ ರಾತ್ರಿ ಚೀನಾ ಸೈನ್ಯದ ಚುಶುಲ್‌ನಲ್ಲಿನ ಆಕ್ರಮಣಕಾರಿ ಪ್ರಯತ್ನಗಳನ್ನು ಭಾರತೀಯ ಸೈನ್ಯ ತಡೆದ ನಂತರ ಪೂರ್ವ ಲಡಾಖ್‌ನಲ್ಲಿ ಪರಿಸ್ಥಿತಿ ಗಂಭೀರವಾಗಿದೆ.

“ಚುಶುಲ್ ಪ್ರದೇಶದಲ್ಲಿ ಪರಿಸ್ಥಿತಿ ತುಂಬಾ ಉದ್ವಿಗ್ನವಾಗಿದ್ದು, ಚೀನಾ ಸೇನೆ ಸಂಪೂರ್ಣವಾಗಿ ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ. ಭಾರತದ ಸೈನ್ಯ ಪ್ರತ್ಯುತ್ತರ ನೀಡುವಂತೆ ಹೆವಿ-ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುತ್ತದೆ. ಭಾರತೀಯ ಸೇನೆಯು ಶಸ್ತ್ರಾಸ್ತ್ರಗಳನ್ನು ಹೊಂದಿಸಿ, ದಕ್ಷಿಣ ಪ್ಯಾಂಗಾಗ್‌ತ್ಸೋ ಮತ್ತು ರೆಂಜನ್‌ಲಾದ ಚೀನಾದ ಆಕ್ರಮಣವನ್ನು ವಿಶೇಷ ಗಡಿರಕ್ಷಣಾ ಪಡೆಗಳು ಪ್ರತಿ-ಆಕ್ರಮಣ ಮಾಡಿದೆ” ಎಂದು ಹಿರಿಯ ಮಿಲಿಟರಿ ಅಧಿಕಾರಿಯೊಬ್ಬರು ಹೇಳಿದ್ದಾಗಿ ಹಿಂದೂಸ್ಥಾನ್ ಟೈಂಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ ಉದ್ವಿಗ್ನತೆ: ಮತ್ತೆ ಲಡಾಖ್ ಗಡಿ ಅತಿಕ್ರಮಿಸಿದ ಚೀನಾ ಪಡೆಗಳು

ಪ್ರಸ್ತುತ ಲಡಾಖ್‌ನ 1,597 ಕಿ.ಮೀ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಚೀನಾದ ಯಾವುದೇ ಆಕ್ರಮಣವನ್ನು ಹಿಮ್ಮೆಟ್ಟಿಸಲು ಭಾರತೀಯ ಸೇನೆ ತಯಾರಾಗಿದೆ ಎನ್ನಲಾಗಿದೆ.

ಭಾರತದ ಪ್ರತಿದಾಳಿಯು ವಾಸ್ತವಿಕ ನಿಯಂತ್ರಣ ರೇಖೆಯಯಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ ಮತ್ತು ಚೀನಾದ ನಡೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಖಚಿತಪಡಿಸಿದೆ. “ಪರಿಸ್ಥಿತಿ ಭೀಕರವಾಗಿದೆ ಮತ್ತು ಚೀನಾದ ಸೂಚನೆಯ ಮೇರೆಗೆ ಚೀನೀ ಸೈನ್ಯ ಭಾರತೀಯ ಸೈನ್ಯವನ್ನು ಹಿಮ್ಮೆಟ್ಟಿಸಲು ಹೊರಟಿದೆ, ಪರಿಸ್ಥಿತಿ ಉಲ್ಬಣಗೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಎರಡನೇ ಹಿರಿಯ ಮಿಲಿಟರಿ ಕಮಾಂಡರ್ ಹೇಳಿದ್ದಾರೆ.

ಮಾಸ್ಕೋದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ಸಭೆಯ ಸನಿಹದಲ್ಲೇ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್‌ಯಿ ನಡುವಿನ ಸಭೆ ನಡೆದರೆ ಶಾಂತಿ ಮರುಸ್ಥಾಪನೆಗೊಳ್ಳುವ ಭರವಸೆ ಇದೆ. ಆದರೆ ಚೀನಾ ಸೈನ್ಯದ ಆಕ್ರಮಣಕಾರಿ ನಡೆಯು ಈ ರಾಜತಾಂತ್ರಿಕ ಉಪಕ್ರಮವನ್ನು ತಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಲಡಾಖ್‌ನಲ್ಲಿ ಚೀನಾ ಸೈನ್ಯದ ಆಕ್ರಮಣ ನಡೆಯುತ್ತಿರುವಾಗಲೂ, ಭಾರತದ ರಾಷ್ಟ್ರೀಯ ಭದ್ರತಾ ಯೋಜಕರು ಲಡಾಖ್‌ನಲ್ಲಿ ಅಥವಾ 3,488 ಕಿ.ಮೀ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಎಲ್ಲಿಯೂ ಯಾವುದೇ ಪ್ರಾದೇಶಿಕ ರಾಜಿ ಮಾಡಿಕೊಳ್ಳಬಾರದು ಎಂಬ ಸ್ಪಷ್ಟ ನಿರ್ದೇಶನಗಳೊಂದಿಗೆ ಎಲ್ಲಾ ನಡೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹಿಂದುಸ್ಥಾನ್ ಟೈಮ್ಸ್‌ ವರದಿ ಮಾಡಿದೆ.


ಇದನ್ನೂ ಓದಿ: ಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...