Homeಅಂತರಾಷ್ಟ್ರೀಯ'ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ': ಮತ್ತೆ ಆರೋಪಿಸಿದ ಕೆನಡಾ

‘ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ’: ಮತ್ತೆ ಆರೋಪಿಸಿದ ಕೆನಡಾ

- Advertisement -
- Advertisement -

ಏಪ್ರಿಲ್ 28ರಂದು ನಡೆಯಲಿರುವ ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆಯಿದೆ ಎಂದು ಕೆನಡಾದ ಗುಪ್ತಚರ ಸೇವೆ ಸೋಮವಾರ (ಮಾ.25) ಹೇಳಿದೆ.

ಭಾರತ ಮತ್ತು ಚೀನಾ ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಕೃತಕ ಬುದ್ಧಿಮತ್ತೆಯನ್ನು ಹೆಚ್ಚಾಗಿ ಬಳಸುತ್ತಿವೆ ಎಂದು ಚುನಾವಣೆಗೆ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ ಕೆನಡಾದ ಭದ್ರತಾ ಗುಪ್ತಚರ ಸೇವೆಯ (CSIS)ಕಾರ್ಯಾಚರಣೆಗಳ ಉಪ ನಿರ್ದೇಶಕಿ ವನೆಸ್ಸಾ ಲಾಯ್ಡ್ ಆರೋಪಿಸಿದ್ದಾರೆ.

ಭಾನುವಾರ (ಮಾ.23) ಪ್ರಧಾನಿ ಮಾರ್ಕ್ ಕಾರ್ನಿ ಅವರು ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದು, ಈ ಬೆನ್ನಲ್ಲೇ ಗಂಭೀರ ಆರೋಪ ಕೇಳಿ ಬಂದಿದೆ.

ಭಾರತ ಸರ್ಕಾರವು ತನ್ನ ಭೌಗೋಳಿಕ ರಾಜಕೀಯ ಪ್ರಭಾವವನ್ನು ಹೆಚ್ಚಿಸಲು ಕೆನಡಾದ ಸಮುದಾಯಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಮತ್ತು ಸಾಮರ್ಥ್ಯವನ್ನು ಹೊಂದಿದೆ ಎಂದು ಲಾಯ್ಡ್ ಹೇಳಿದ್ದಾರೆ.

ಈ ಚುನಾವಣೆಯ ಸಮಯದಲ್ಲಿ ಕೆನಡಾದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಚೀನಾ, ವಿಶೇಷವಾಗಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ (PRC)ಎಐ-ಚಾಲಿತ ಸಾಧನಗಳನ್ನು ಬಳಸುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಲಾಯ್ಡ್ ಪ್ರಕಾರ, ಚೀನಾ ತನ್ನ ಹಿತಾಸಕ್ತಿಗಳಿಗೆ ಹೊಂದಿಕೆಯಾಗುವ ನರೇಟಿವ್‌ಗಳನ್ನು ಉತ್ತೇಜಿಸಲು ಸಾಮಾಜಿಕ ಮಾಧ್ಯಮವನ್ನು ಬಳಸುವ ಸಾಧ್ಯತೆಯಿದೆ. ಕೆನಡಾದಲ್ಲಿರುವ ಚೀನೀ ಜನಾಂಗೀಯ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಮುದಾಯಗಳನ್ನು ‘ರಹಸ್ಯ ಮತ್ತು ವಂಚನೆಯ ತಂತ್ರಗಳೊಂದಿಗೆ ಚೀನಾ ಗುರಿಯಾಗಿಸಬಹುದು.

ಭಾರತ ಮತ್ತು ಚೀನಾ ಎರಡೂ ಕೆನಡಾ ಈ ಹಿಂದೆ ಮಾಡಿದ್ದ ಇದೇ ರೀತಿಯ ಆರೋಪವನ್ನು ನಿರಾಕರಿಸಿತ್ತು. ಆದರೆ, ಇತ್ತೀಚಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿಲ್ಲ.

ವಿದೇಶಿ ಸರ್ಕಾರಗಳು ನಮ್ಮ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿವೆ ಎಂದು ಆರೋಪಿಸಿ ಕೆನಡಾ ಆಯೋಗ ನೀಡಿದ್ದ ವರದಿಯ ಆರೋಪಗಳನ್ನು ಭಾರತ ಈ ವರ್ಷದ ಜನವರಿಯಲ್ಲಿ ತಿರಸ್ಕರಿಸಿತ್ತು.

ವಿದೇಶಾಂಗ ಸಚಿವಾಲಯ (MEA)ಹೇಳಿಕೆ ನೀಡಿ, ಕೆನಡಾದ ಆರೋಪಗಳನ್ನು ತಳ್ಳಿಹಾಕಿತ್ತು. ಕೆನಡಾ ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿತ್ತು.

ಕೆನಡಾದ ಪತ್ರಿಕೆಯಾದ ಗ್ಲೋಬ್ ಅಂಡ್ ಮೇಲ್, ಫೆಡರಲ್ ಚುನಾವಣೆಯ ಸಮಯದಲ್ಲಿ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ರಹಸ್ಯ ಹಣಕಾಸು ಬೆಂಬಲ ಒದಗಿಸಲು ಭಾರತವು ಪ್ರಾಕ್ಸಿ ಏಜೆಂಟ್‌ಗಳನ್ನು ಬಳಸಿಕೊಂಡಿರಬಹುದು ಎಂದು ವರದಿ ಮಾಡಿತ್ತು.

ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ರಷ್ಯಾ ಮತ್ತು ಪಾಕಿಸ್ತಾನ ಕೂಡ ಹಸ್ತಕ್ಷೇಪ ಮಾಡಲು ಪ್ರಯತ್ನಿಸಬಹುದು ಎಂದು ಲಾಯ್ಡ್ ಎಚ್ಚರಿಸಿದ್ದಾರೆ.

ಕ್ರೆಮ್ಲಿನ್ (ರಷ್ಯಾ) ಚರ್ಚಾ ಅಂಶಗಳನ್ನು ಉತ್ತೇಜಿಸುವ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿ ವೆಬ್‌ಸೈಟ್‌ಗಳಲ್ಲಿ ‘ಪ್ರಸರಣ ಜಾಲಗಳನ್ನು’ ರಚಿಸಲು ರಷ್ಯಾ ಕೆಲಸ ಮಾಡಿದೆ ಎಂದು ಲಾಯ್ಡ್ ಆರೋಪಿಸಿದ್ದು, ಕೆನಡಿಯನ್ನರನ್ನು ಗುರಿಯಾಗಿಸಿಕೊಂಡು ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ರಷ್ಯಾ ಈ ಆನ್‌ಲೈನ್ ನೆಟ್‌ವರ್ಕ್‌ಗಳನ್ನು ಬಳಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಭಾರತದ ಜಾಗತಿಕ ಶಕ್ತಿಯಾಗಿ ಬೆಳೆಯುವಾಗ, ಅದನ್ನು ಎದುರಿಸಿ ರಾಜಕೀಯ, ಭದ್ರತೆ ಮತ್ತು ಆರ್ಥಿಕ ಸ್ಥಿರತೆಯನ್ನು ಕಾಪಾಡುವ ತನ್ನ ಕಾರ್ಯತಂತ್ರವನ್ನು ಸಾಧಿಸಲು ಪಾಕಿಸ್ತಾನ ವಿದೇಶಿ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವ ಕಾರ್ಯ ಮಾಡಬಹುದು ಎಂದು ಲಾಯ್ಡ್ ಹೇಳಿದ್ದಾರೆ.

ಖಲಿಸ್ತಾನಿ ಪ್ರತ್ಯೇಕತವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 2023ರಲ್ಲಿ ಆರೋಪಿಸಿದ್ದರು. ನಂತರ ಭಾರತ ಮತ್ತು ಕೆನಡಾ ನಡುವೆ ಈ ವಿಚಾರವಾಗಿ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿತ್ತು. ಭಾರತ ತನ್ನ ಮೇಲಿನ ಆರೋಪವನ್ನು ಬಲವಾಗಿ ನಿರಾಕರಿಸಿತ್ತು.

ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...

ಭೋಪಾಲ್: ಮಕ್ಕಳ ಸಾವಿನ ಬಗ್ಗೆ ವರದಿ ಮಾಡುತ್ತಿದ್ದಾಗ ಪೊಲೀಸರು ಹೋಟೆಲ್‌ಗಳಿಂದ ಹೊರಹಾಕಿದರು ಎಂದು ಖ್ಯಾತ ಯೂಟ್ಯೂಬರ್ ಕಾವ್ಯ ಕರ್ನಾಟಕ್ ಆರೋಪ

ಭೋಪಾಲ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಕುರಿತು ವರದಿ ಮಾಡಲು ತೆರಳಿದ್ದ ತಮ್ಮ ತಂಡವನ್ನು ಎರಡು ಹೋಟೆಲ್‌ಗಳಿಂದ ಹೊರಹೋಗುವಂತೆ ಒತ್ತಾಯಿಸಲಾಯಿತು. ಪೊಲೀಸರು ಹೋಟೆಲ್‌ಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದೆಹಲಿಯಿಂದ ಬಂದ ಪತ್ರಕರ್ತರನ್ನು ಅಲ್ಲಿಂದ...

DELHI SIR |’ನೋಟಿಸ್‌ಗಳನ್ನು ಯಾಂತ್ರಿಕವಾಗಿ ನೀಡಿದಂತಿದೆ, ಲಾಜಿಕಲ್ ಡಿಸ್ಕ್ರಿಪೆನ್ಸಿ ಬಗ್ಗೆ ಸ್ಪಷ್ಟನೆ ಅಗತ್ಯ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಮಯದಲ್ಲಿ ಮತದಾರರಿಗೆ ನೀಡಲಾದ ನೋಟಿಸ್‌ಗಳು 'ಬಹುತೇಕ ಯಾಂತ್ರಿಕವಾಗಿ' ಜಾರಿಯಾದಂತೆ ಕಂಡುಬರುತ್ತಿವೆ ಮತ್ತು 'ತಾರ್ಕಿಕ ವ್ಯತ್ಯಾಸ'ವನ್ನು ಗುರುತಿಸಲು ಬಳಸಲಾದ ಆಧಾರದ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ...