Homeಮುಖಪುಟ‘10 ಸಾವಿರ ಕೋಟಿ ಡಾಲರ್‌‌’ ತಲುಪಲಿರುವ ಭಾರತ-ಚೀನಾ ವ್ಯಾಪಾರ!

‘10 ಸಾವಿರ ಕೋಟಿ ಡಾಲರ್‌‌’ ತಲುಪಲಿರುವ ಭಾರತ-ಚೀನಾ ವ್ಯಾಪಾರ!

ಹಲವಾರು ವರ್ಷಗಳಿಂದ ಚೀನಾ ವಸ್ತುಗಳನ್ನು ಬ್ಯಾನ್‌ ಮಾಡಲು ಕರೆ ನೀಡುತ್ತಿರುವ ಬಿಜೆಪಿ ಆಡಳಿತದಲ್ಲೇ ಚೀನಾದೊಂದಿಗೆ ವ್ಯಾಪಾರ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ

- Advertisement -
- Advertisement -

ಭಾರತ ಮತ್ತು ಚೀನಾ ನಡುವೆ ಪೂರ್ವ ಲಡಾಖ್‌ನಲ್ಲಿ ನಡೆದ ಸೇನಾ ಸಂಘರ್ಷದಿಂದಾಗಿ ದ್ವಿಪಕ್ಷೀಯ ಸಂಬಂಧಗಳಲ್ಲಿ ಬಿರುಕು ಬಿಟ್ಟಿದ್ದರೂ, ಉಭಯ ದೇಶಗಳ ವ್ಯಾಪಾರದ ಪ್ರಮಾಣವು ಈ ವರ್ಷ ದಾಖಲೆ ಮೊತ್ತ 10 ಸಾವಿರ ಕೋಟಿ ಡಾಲರ್ ದಾಟಲಿದೆ ಎಂದು ಅಂದಾಜಿಸಲಾಗಿದೆ. ಈ ವರ್ಷದ ಒಂಬತ್ತು ತಿಂಗಳಲ್ಲಿ ವ್ಯಾಪಾರದ ಒಟ್ಟು ಮೊತ್ತವು ಈಗಾಗಲೇ 9 ಸಾವಿರ ಕೋಟಿ ಡಾಲರ್ ತಲುಪಿದೆ ಎಂದು ವರದಿಗಳು ತಿಳಿಸಿದೆ.

2021 ರ ಮೊದಲ ಮೂರು ತ್ರೈಮಾಸಿಕಗಳಲ್ಲಿ ಚೀನಾದ ಒಟ್ಟು ಆಮದು ಮತ್ತು ರಫ್ತುಗಳು ವರ್ಷದಿಂದ ವರ್ಷಕ್ಕೆ 22.7% ಹೆಚ್ಚಾಗಿದ್ದು 28.33 ಟ್ರಿಲಿಯನ್ ಯುವಾನ್‌ಗೆ (ಸುಮಾರು 4.38 ಲಕ್ಷ ಕೋಟಿ ಡಾಲರ್‌) ತಲುಪಿದೆ ಎಂದು ಅಧಿಕೃತ ಅಂಕಿಅಂಶಗಳು ಬುಧವಾರ ಹೇಳಿವೆ.

ಇದನ್ನೂ ಓದಿ: ಪೂರ್ವ ಲಡಾಖ್‌‌ನಲ್ಲಿ ಸೇನಾ ನಿಯೋಜನೆ ಹೆಚ್ಚಿಸಿದ ಚೀನಾ: ಭಾರತೀಯ ಸೇನಾ ಮುಖ್ಯಸ್ಥರ ಹೇಳಿಕೆ

ಈ ಅಂಕಿ-ಅಂಶವು 2019 ರ ಸಾಂಕ್ರಾಮಿಕದ ಮುಂಚಿನ ಮಟ್ಟಕ್ಕಿಂತ 23.4% ದಷ್ಟು ಹೆಚ್ಚಳವಾಗಿದೆ ಎಂದು ಜನರಲ್ ಅಡ್ಮಿನಿಸ್ಟ್ರೇಷನ್ ಆಫ್ ಕಸ್ಟಮ್ಸ್ ಹೇಳಿದೆ.

ಸೆಪ್ಟೆಂಬರ್ ಅಂತ್ಯದ ವೇಳೆಗೆ ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ವ್ಯಾಪಾರವು 9 ಸಾವಿರ ಕೋಟಿ ಡಾಲರ್ ತಲುಪಿದ್ದು, ಇದು ಕಳದೆ ವರ್ಷಕ್ಕಿಂತ 49.3% ಹೆಚ್ಚಾಗಿದೆ ಎಂದು ಚೀನಾ ಕಸ್ಟಮ್ಸ್ ಬಿಡುಗಡೆ ಮಾಡಿದ ಒಂಬತ್ತು ತಿಂಗಳ ಅಂಕಿಅಂಶಗಳು ಹೇಳಿದೆ.

ಭಾರತಕ್ಕೆ ಚೀನಾದ ರಫ್ತುಗಳು 6,846 ಕೋಟಿ ಡಾಲರ್‌ಗೆ ಏರಿಕೆಯಾಗಿದ್ದು, ಈ ಏರಿಕೆ 51.7% ರಷ್ಟಾಗುತ್ತದೆ. ಭಾರತೀಯ ರಫ್ತುಗಳು ಒಟ್ಟು 2,191 ಕೋಟಿ ಡಾಲರ್‌ಗೆ ತಲುಪಿದ್ದು, 42.5% ಏರಿಕೆಯೊಂದಿಗೆ ಗಮನಾರ್ಹ ಹೆಚ್ಚಳವನ್ನು ದಾಖಲಿಸಿದೆ.

ಬಿಜೆಪಿ ಆಡಳಿತ ಮತ್ತು ಅವರ ಬೆಂಬಲಿಗರು ಹಲವಾರು ವರ್ಷದಿಂದಲೂ ಚೀನಾ ವಸ್ತುಗಳನ್ನು ಬ್ಯಾನ್ ಮಾಡುವಂತೆ ಕರೆನೀಡುತ್ತಿದ್ದರೂ, ಬಿಜೆಪಿ ಆಡಳಿತದಲ್ಲೇ ಚೀನಾದೊಂದಿಗೆ ವ್ಯಾಪಾರ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ಚೀನಾ+ಪಾಕಿಸ್ತಾನ+ಮಿ.56″= ಭಾರತದ ಪ್ರದೇಶಗಳ ಮೇಲೆ ಚೀನಾ ಅತಿಕ್ರಮಣ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...