ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್(ಹೆಚ್‌ಸಿಎ)ನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ ತಂಡದ ಮಾಜಿ ನಾಯಕ, ಕಾಂಗ್ರೆಸ್ ರಾಜಕಾರಣಿ ಮೊಹಮ್ಮದ್ ಅಜರುದ್ದೀನ್ ಅವರಿಗೆ ವಿಚಾರಣೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಗುರುವಾರ ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅಕ್ಟೋಬರ್ 3 ರಂದು ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಕೇಳಲಾಗಿದೆ ಎಂದು ಮೂಲಗಳು ಉಲ್ಲೇಖಿಸಿವೆ. ಆದರೆ ಅವರು ಇಡಿ ಮುಂದೆ ಹಾಜರಾಗಿಲ್ಲ ಮತ್ತು ಹೆಚ್ಚಿನ ಸಮಯ ಕೇಳಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಇಡಿ ದಾಖಲಿಸಿದ್ದ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್(ಹೆಚ್‌ಸಿಎ)ನಲ್ಲಿನ ಹಣಕಾಸು ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಈ ತನಿಖೆಯು ಸಂಬಂಧಿಸಿದೆ.
ಹೆಚ್‌ಸಿಎಯ 20 ಕೋಟಿ ರೂಪಾಯಿಗಳ ಹಣ ಕ್ರಿಮಿನಲ್ ದುರುಪಯೋಗಕ್ಕೊಳಗಾಗಿದೆ ಎಂದು ಆರೋಪಿಸಿ ತೆಲಂಗಾಣ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೂರು ಎಫ್‌ಐಆರ್‌ಗಳು ದಾಖಲಿಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಮೂರು ಎಫ್‌ಐಆರ್‌ಗಳನ್ನು ಆಧರಿಸಿ ಇಡಿ ತನಿಖೆಯನ್ನು ಪ್ರಾರಂಭಿಸಿತ್ತು.
ಎಚ್‌ಸಿಎ ಮಾಜಿ ಅಧ್ಯಕ್ಷರೂ ಆಗಿರುವ ಅಜರ್ 2019 ರಿಂದ 2022 ರವರೆಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪ ಹೊರಿಸಲಾಗಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂಗಾಗಿ ಡೀಸೆಲ್ ಜನರೇಟರ್‌ಗಳು, ಅಗ್ನಿಶಾಮಕ ವ್ಯವಸ್ಥೆಗಳು ಮತ್ತು ಕ್ಯಾನೋಪಿಗಳ ಖರೀದಿಗೆ ಮಂಜೂರು ಮಾಡಿದ 20 ಕೋಟಿಯನ್ನು ದುರುಪಯೋಗಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.
ಹೆಚ್‌ಸಿಎ ಪದಾಧಿಕಾರಿಗಳಾದ, ಅದರ ಆಗಿನ ಕಾರ್ಯದರ್ಶಿ, ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಇತರ ಖಾಸಗಿ ಜನರೊಂದಿಗೆ ಸೇರಿ ಏಕಪಕ್ಷೀಯವಾಗಿ ಹೆಚ್ಚಿನ ಮಾರುಕಟ್ಟೆ ದರದಲ್ಲಿ ಆದ್ಯತೆಯ ಗುತ್ತಿಗೆದಾರರಿಗೆ ವಿವಿಧ ಟೆಂಡರ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ಚಾರ್ಜ್‌ಶೀಟ್ ಬಹಿರಂಗಪಡಿಸಿದೆ. ಸಂಬಂಧಪಟ್ಟವರು ಸರಿಯಾದ ಟೆಂಡರ್ ಪ್ರಕ್ರಿಯೆಗಳನ್ನು ಅನುಸರಿಸದೆ ಮುಂದುವರೆದಿದ್ದು, ಮುಂಗಡ ಪಾವತಿಯನ್ನು ಸಹ ಕೆಲಸ ಮಾಡದೆಯೇ ಹಲವರಿಗೆ ನೀಡಲಾಗಿದೆ ಎಂದು ಅದು ಹೇಳಿದೆ.ಮೊಹಮ್ಮದ್ ಅಜರುದ್ದೀನ್
ಇದನ್ನೂಓದಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು


