Homeಮುಖಪುಟಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಮೇಲೆ ಇಂದು ಚರ್ಚೆ: INDIA ನಿರ್ಧಾರ

ಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಮೇಲೆ ಇಂದು ಚರ್ಚೆ: INDIA ನಿರ್ಧಾರ

- Advertisement -
- Advertisement -

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಪ್ರತಿಪಕ್ಷಗಳು ಬುಧವಾರ ಅವಿಶ್ವಾಸ ನಿರ್ಣಯ ಮಂಡಿಸಿದ್ದು, 20 ವರ್ಷಗಳಲ್ಲಿ ಮೊದಲ ಬಾರಿಗೆ ಅಂತಹ ನಿರ್ಣಯವನ್ನು ಮಂಡಿಸಲಾಗಿದೆ. ಹಾಗಾಗಿ ಇದು ಬಹಳ ಮಹತ್ವ ಪಡೆದುಕೊಂಡಿದೆ.

ಮಣಿಪುರದ ಜನಾಂಗೀಯ ಹಿಂಸಾಚಾರದ ವಿಷಯದ ಬಗ್ಗೆ ಗಮನ ಸೆಳೆಯಲು ಚರ್ಚೆ ನಡೆಸಬೇಕು ಎಂದು ವಿರೋಧ ಪಕ್ಷಗಳ ಮೈತ್ರಿ INDIA ಬಯಸುತ್ತಿದೆ. ಕೇಂದ್ರ ಗೃಹ ಸಚಿವರ ಮೂಲಕ ಮಾತ್ರವಲ್ಲದೆ ಇಡೀ ಸರ್ಕಾರದ ಮೇಲೆ ಒತ್ತಡ ಹೇರುವುದು ಅವರ ಗುರಿಯಾಗಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ಚರ್ಚೆಗೆ ಸೂಕ್ತ ಸಮಯವನ್ನು ಭರವಸೆ ನೀಡಿದ್ದಾರೆ. ಆದರೆ, ಗುರುವಾರವೇ ಚರ್ಚೆ ನಡೆಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ಆಗ್ರಹವಾಗಿದೆ.

ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿದ್ದಾರೆ ಆದರೆ ಮೋದಿ ಅವರು ಆ ಬಗ್ಗೆ ಮಾತನಾಡದೇ ಆವಿಚಾರದಲ್ಲಿ ಮೌನವಹಿಸಿದ್ದಾರೆ. ಹಾಗಾಗಿಯೇ ಸಂಸತ್ತಿನ ಮುಂಗಾರು ಅಧಿವೇಶನ ಗದ್ದಲ ಗಲಾಟೆಯಲ್ಲೇ ಮುಂದುವರೆದಿದೆ.

ಈ ಬಗ್ಗೆ ಆರ್‌ಜೆಡಿ ಸಂಸದ ಮನೋಜ್ ಝಾ ಮಾತನಾಡಿದ್ದು, ”ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿವೆ. ಈ ಬಾರಿಯ ಅವಿಶ್ವಾಸ ನಿರ್ಣಯವೂ ಮಹತ್ವದ್ದಾಗಿದೆ ಏಕೆಂದರೆ ನಮಗೆ ಪ್ರಧಾನಿ ಮೋದಿ ಇಷ್ಟವಾಗದ ಕಾರಣ ಅಲ್ಲಮ ಜನರ ಹೊಣೆಗಾರಿಕೆಗಾಗಿ. ಮಣಿಪುರದಲ್ಲಿ ಅವರಿಗೆ ಶಾಸಕಾಂಗ ಬಹುಮತವಿದೆ ಮತ್ತು ನೈತಿಕ ಬಹುಮತವಿಲ್ಲ…” ಎಂದು ವಾಗ್ದಾಳಿ ನಡೆಸಿದ್ದಾರೆ.

”ಪ್ರಧಾನಿ ಮೋದಿ ಮಾತನಾಡಿದರೆ ಮಣಿಪುರದ ಪರಿಸ್ಥಿತಿ ಸುಧಾರಿಸಬಹುದು… ಈ ಘಟನೆಯ ಬಗ್ಗೆ ಸಂಸತ್ತು ಸಾಮೂಹಿಕ ಅವಮಾನವನ್ನು ವ್ಯಕ್ತಪಡಿಸಬೇಕು ಎಂದು ನಾವು ಬಯಸುತ್ತೇವೆ… ಮಣಿಪುರದ ಜನರು ಭಾರತಕ್ಕೆ ಸೇರಿದವರು ಎನ್ನುವ ಭಾವನೆಯನ್ನು ನೀಡಲಾಗಿಲ್ಲ, ಇದು ಸಂಪೂರ್ಣ ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿಯಾಗಿದೆ” ಎಂದು ಹೇಳಿದರು.

ಮಣಿಪುರ ಹಿಂಸಾಚಾರದ ಕುರಿತು ಸದನದಲ್ಲಿ ಹೇಳಿಕೆ ನೀಡಲು ಪ್ರಧಾನಿ ಮೋದಿ ಮನವೊಲಿಸುವ ಸಲುವಾಗಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪಕ್ಷದ ಸಂಸದ ಗೌರವ್ ಗೊಗೊಯ್ ಅವರು ತಂದಿದ್ದ ಅವಿಶ್ವಾಸ ನಿರ್ಣಯವನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ನಿನ್ನೆ ಅಂಗೀಕರಿಸಿದ್ದಾರೆ. ರಾಷ್ಟ್ರೀಯ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ ಅಂಗೀಕರಿಸಿದ ಅವಿಶ್ವಾಸ ನಿರ್ಣಯವಾಗಿದೆ.

ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯ ಮೇಲೆ ಇಂದು ಚರ್ಚೆ ನಡೆಸಲು I.N.D.I.A. ನಿರ್ಧಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...