Homeಮುಖಪುಟಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಇಂದು ಭಾರತದಲ್ಲಿ ಶೋಕಾಚರಣೆ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಇಂದು ಭಾರತದಲ್ಲಿ ಶೋಕಾಚರಣೆ

- Advertisement -
- Advertisement -

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಗೌರವಾರ್ಥವಾಗಿ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ.

ಭಾರತದಾದ್ಯಂತ ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗುವುದು ಮತ್ತು ಶೋಕಾಚರಣೆಯ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದಿಲ್ಲ ಎಂದು ಗೃಹ ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

ಗೃಹ ಸಚಿವಾಲಯದ ವಕ್ತಾರರು ಈ ಕುರಿತು ಮಾಹಿತಿ ನೀಡಿದ್ದು, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ದೇಶದ ವಿದೇಶಾಂಗ ಸಚಿವ ಹುಸೇನ್ ಅಮಿತ್-ಅಬ್ದುಲ್ಲಾಹಿಯಾನ್ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಗೌರವಾರ್ಪಣೆ ಹಿನ್ನೆಲೆ ಭಾರತ ಸರ್ಕಾರವು ಮೇ 21 ರಂದು (ಮಂಗಳವಾರ) ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ರೈಸಿ ಅವರ ಸಾವಿನ ದೃಢೀಕರಣದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿದ್ದಾರೆ. ರೈಸಿ ಅವರ ದುರಂತ ನಿಧನದಿಂದ ನನಗೆ ಅತೀವ ದುಃಖವಾಗಿದೆ ಮತ್ತು ಆಘಾತವಾಗಿದೆ. ಈ ದುಃಖದ ಸಮಯದಲ್ಲಿ ಭಾರತವು ಇರಾನ್‌ನೊಂದಿಗೆ ನಿಂತಿದೆ ಎಂದು ಹೇಳಿದ್ದರು.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಇದ್ದ ಹೆಲಿಕಾಪ್ಟರ್‌ ಭಾನುವಾರ ಪತನವಾಗಿತ್ತು. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಅಧಿಕಾರಿಗಳು ಪರ್ವತ ಭೂಪ್ರದೇಶದ ಹಿಮಾವೃತ ವಾತಾವರಣದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಸೋಮವಾರ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಅವಶೇಷಗಳನ್ನು ಪತ್ತೆ ಮಾಡಿದ ನಂತರ ಹೇಳಿದ್ದರು.

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಇರಾನ್‌ನ ತಬ್ರೀಝ್‌ ನಗರದಲ್ಲಿ ಆಝರ್‌ಬೈಜಾನ್‌ನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಜೊತೆಗೂಡಿ ಖಿಝ್‌ ಖಲಾಸಿ ಅಣೆಕಟ್ಟನ್ನು ಎರಡೂ ದೇಶಗಳು ಹಂಚಿರುವ ಗಡಿ ಸ್ಥಳದಲ್ಲಿ ಉದ್ಘಾಟಿಸಿ ವಾಪಸಾಗುತ್ತಿರುವಾಗ ಈ ಘಟನೆ ಸಂಭವಿಸಿತ್ತು. ಹಾರಾಟ ಆರಂಭಿಸಿದ ಸುಮಾರು 30 ನಿಮಿಷಗಳಲ್ಲಿ ಹೆಲಿಕಾಪ್ಟರ್‌ ಸಂಪರ್ಕ ಕಳೆದುಕೊಂಡಿತ್ತು. ಇರಾನ್‌ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆಯಾಗಿದೆ ಎಂಬ ಸುದ್ದಿ ಬೆನ್ನಲ್ಲಿ 60ಕ್ಕೂ ಹೆಚ್ಚು ರಕ್ಷಣಾ ತಂಡಗಳು ಕೆಟ್ಟ ಹವಾಮಾನ ಪರಿಸ್ಥಿತಿಗಳ ನಡುವೆ ಶೋಧ ನಡೆಸಿದ್ದವು.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...