Homeಕ್ರೀಡೆಕ್ರಿಕೆಟ್ಜಿಂಬಾಬ್ವೆ ಮಣಿಸಿದ ಭಾರತ: ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರಾಳಿ

ಜಿಂಬಾಬ್ವೆ ಮಣಿಸಿದ ಭಾರತ: ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರಾಳಿ

ಸೆಮಿಫೈನಲ್‌ ಪಂದ್ಯಗಳಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಮತ್ತು ಪಾಕಿಸ್ತಾನವು ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದರೆ ಮತ್ತೊಮ್ಮೆ ಫೈನಲ್‌ನಲ್ಲಿ ಭಾರತ-ಪಾಕ್ ಮುಖಾಮುಖಿಯಾಗಹುದಾಗಿದೆ.

- Advertisement -
- Advertisement -

ಇಂದು ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಕೊನೆಯ ಮೂರು ಪಂದ್ಯಗಳು ಭಾರೀ ರೋಚಕತೆ ಸೃಷ್ಟಿಸಿದ್ದವು. ಕೊನೆಗೂ ಪಾಕಿಸ್ತಾನ ಮತ್ತು ಭಾರತ ತಂಡಗಳು ತಮ್ಮ ಕೊನೆಯ ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್‌ಗೆ ಪ್ರವೇಶ ಪಡೆದಿವೆ. ಭಾರತ ತಂಡ ತನ್ನ ಕೊನೆಯ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು 71 ರನ್‌ಗಳ ಭಾರೀ ಗೆಲುವಿನೊಂದಿಗೆ ಗ್ರೂಪ್ 2 ರಲ್ಲಿ ಅಗ್ರಸ್ಥಾನ ಪಡೆಯಿತು. ಹಾಗಾಗಿ ಅದು ಗ್ರೂಪ್ 1 ರಲ್ಲಿ ಎರಡನೇ ಸ್ಥಾನ ಪಡೆದಿರುವ ಇಂಗ್ಲೆಂಡ್‌ನೊಂದಿಗೆ ನವೆಂಬರ್ 10ರಂದು ಸೆಮಿಫೈನಲ್‌ ಎದುರಿಸಲಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆ.ಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್‌ರವರು ಆಕರ್ಷಕ ಅರ್ಧಶತಕದ ನೆರವಿನೊಂದಿಗೆ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 186 ರನ್ ಗಳಿಸಿತು. ಆರಂಭಿಕ ಆಟಗಾರ ಕೆ.ಎಲ್ ರಾಹುಲ್ 35 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು ಮೂರು ಬೌಂಡರಿ ಸೇರಿ 51 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಕೇವಲ 25 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 6 ಬೌಂಡರಿಗಳೊಂದಿಗೆ 61 ರನ್ ಚಚ್ಚಿದರು. ಚೆಂಡನ್ನು ಅಂಗಳದ ಮೂಲೆ ಮೂಲೆಗೆ ಅಟ್ಟಿದ ಅವರು ಜಿಂಬಾಬ್ವೆ ಬೌಲರ್‌ಗಳ ಬೆವರಿಳಿಸಿದರು.

ಗೆಲುವಿಗೆ 187 ರನ್‌ಗಳ ಗುರಿಪಡೆದು ಕಣಕ್ಕಿಳಿದ ಜಿಂಬಾಬ್ವೆ ಆಟಗಾರರು ಒಬ್ಬರ ನಂತರ ಒಬ್ಬರು ಔಟಾಗಿ ಯಾವುದೇ ಪ್ರತಿರೋಧ ತೋರದೆ ಭಾರತಕ್ಕೆ ಶರಣಾದರು. ಸಿಖಂದರ್ ರಾಜ 34 ಮತ್ತು ರ್ಯಾನ್ ಬುರಿ 35 ರನ್ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಉತ್ತಮ ಪ್ರದರ್ಶನ ತೋರಲು ವಿಫಲರಾದರು. ಇವರಿಬ್ಬರೂ ಆಟದ ನೆರವಿನಿಂದ ಜಿಂಬಾಬ್ವೆ ತಂಡ 17.2 ಓವರ್‌ಗಳಲ್ಲಿ 115 ರನ್ ಗಳಿಸಿ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಭಾರತದ ಪರ ರವಿಚಂದ್ರನ್ ಅಶ್ವಿನ್ ಮೂರು ವಿಕೆಟ್ ಪಡೆದರೆ ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದು ಮಿಂಚಿದರು.

ಮತ್ತೊಂದು ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆಲುವು ಸಾಧಿಸಿದ ಪಾಕಿಸ್ತಾನ ಕೂಡ ಸೆಮಿಫೈನಲ್ ಪ್ರವೇಶಿಸಿದೆ. ಅದು ನವೆಂಬರ್ 09 ರಂದು ನ್ಯೂಜಿಲೆಂಡ್ ತಂಡದ ವಿರುದ್ಧ ಸೆಮಿಫೈನಲ್ ಪಂದ್ಯವನ್ನಾಡಲಿದೆ. ಸೆಮಿಫೈನಲ್‌ ಪಂದ್ಯಗಳಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಮತ್ತು ಪಾಕಿಸ್ತಾನವು ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದರೆ ಮತ್ತೊಮ್ಮೆ ಫೈನಲ್‌ನಲ್ಲಿ ಭಾರತ-ಪಾಕ್ ಮುಖಾಮುಖಿಯಾಗಹುದಾಗಿದೆ. 2007ರ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಇವೆರೆಡು ತಂಡಗಳು ಫೈನಲ್‌ನಲ್ಲಿ ಸೆಣಸಿದ್ದವು. ಆ ಪಂದ್ಯದಲ್ಲಿ ಭಾರತ ತಂಡ 5 ರನ್‌ಗಳಿಂದ ಪಾಕ್‌ ಅನ್ನು ಮಣಿಸಿ ಚಾಂಪಿಯನ್ ಆಗಿತ್ತು.

ಈ ಭಾರಿಯ ಫೈನಲ್ ಪಂದ್ಯವು ನವೆಂಬರ್ 13 ರಂದು ಜರುಗಲಿದೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಬಾಂಗ್ಲಾ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಪಾಕ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...