Homeಮುಖಪುಟಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

ಭಾರತದಲ್ಲಿ ಆಕ್ಸಿಜನ್‌ಗೆ ಹಾಹಾಕಾರ; ನೇಪಾಳಕ್ಕೆ ವೆಂಟಿಲೇಟರ್‌‌‌ ಹೊಂದಿರುವ 39 ಆಂಬುಲೆನ್ಸ್‌ ಗಿಫ್ಟ್‌‌‌!

- Advertisement -
- Advertisement -

ಭಾರತದಲ್ಲಿ ಕೊರೊನಾ ಪ್ರಕರಣದಲ್ಲಿ ತೀವ್ರ ಮಟ್ಟದಲ್ಲಿ ಏರುತ್ತಿದ್ದು ಆಮ್ಲಜನಕ, ಆಸ್ಪತ್ರೆ ಸೇರಿದಂತೆ ಅಗತ್ಯ ಔಷಧಗಳ ಕೊರತೆ ಬಗ್ಗೆ ಸಾಕಷ್ಟು ವರದಿಯಾಗುತ್ತಿದೆ. ಈ ಮಧ್ಯೆ ಭಾರತವು ಗುರುವಾರ ವೆಂಟಿಲೇಟರ್‌ಗಳು ಹೊಂದಿದ 39 ಆಂಬುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ನೇಪಾಳಕ್ಕೆ ಉಡುಗೊರೆಯಾಗಿ ನೀಡಿದೆ.

ಆಂಬುಲೆನ್ಸ್‌ಗಳನ್ನು ಭಾರತ ಸರ್ಕಾರದ ನಿರಂತರ ಬೆಂಬಲದ ಭಾಗವಾಗಿ ಮತ್ತು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ನೇಪಾಳದ ಹೋರಾಟಕ್ಕೆ ಪೂರಕವಾಗಿ ನೀಡಲಾಯಿತು ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

“ಭಾರತ ಸರ್ಕಾರದ ನಿರಂತರ ಬೆಂಬಲ ಮತ್ತು ಕೊರೊನಾ ಸಾಂಕ್ರಾಮಿಕ ವಿರುದ್ಧದ ನೇಪಾಳದ ಹೋರಾಟಕ್ಕೆ ಪೂರಕವಾಗಿ, ರಾಯಭಾರ ಕಚೇರಿಯು ಇಂದು ವೆಂಟಿಲೇಟರ್‌ಗಳು, ಇಸಿಜಿ, ಆಕ್ಸಿಜನ್ ಮಾನಿಟರ್ ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಹೊಂದಿದ 39 ಆಂಬ್ಯುಲೆನ್ಸ್‌ಗಳನ್ನು ನೇಪಾಳದ ಸರ್ಕಾರಿ ಮತ್ತು ಎನ್‌ಜಿಒಗಳಿಗೆ ಉಡುಗೊರೆಯಾಗಿ ನೀಡಿತು. ಇಂಡಿಯಾ ನೇಪಾಲ್ ಫ್ರೆಂಡ್ಶಿಪ್” ಎಂದು ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿದೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

“ರಾಯಭಾರ ಕಚೇರಿಯು 6 ಶಾಲಾ ಬಸ್ಸುಗಳನ್ನು ಉಡುಗೊರೆಯಾಗಿ ನೀಡಿತು. ಇವುಗಳನ್ನು ರಾಯಭಾರ ಕಚೇರಿಯ ದೀರ್ಘಕಾಲದ ಸಂಪ್ರದಾಯ ಮತ್ತು ಭಾರತ ಸ್ವಾತಂತ್ಯ್ರಗೊಂಡ 75 ವರ್ಷಾಚರಣೆಯ ಭಾಗವಾಗಿ ಉಡುಗೊರೆಯಾಗಿ ನೀಡಲಾಗಿದೆ” ಎಂದು ರಾಯಭಾರ ಕಚೇರಿಯು ಹೇಳಿದೆ.

ಕಳೆದ ವರ್ಷ ಕೂಡಾ ಭಾರತವು ಮಹಾತ್ಮ ಗಾಂಧಿಯವರ 151 ನೇ ಜನ್ಮದಿನದಂದು ನೇಪಾಳಕ್ಕೆ ಒಟ್ಟು 41 ಆಂಬ್ಯುಲೆನ್ಸ್‌ಗಳು ಮತ್ತು ಆರು ಶಾಲಾ ಬಸ್‌ಗಳನ್ನು ಉಡುಗೊರೆಯಾಗಿ ನೀಡಿತು.

ಇಷ್ಟೇ ಅಲ್ಲದೆ ಭಾರತವು ನೇಪಾಳದ ವಿವಿಧ ಯೋಜನೆಗಳಿಗೆ ಧನ ಸಹಾಯವನ್ನು ನೀಡುತ್ತಿದೆ. ಮನೆಗಳು, ಪಾರಂಪರಿಕ ತಾಣಗಳು ಮತ್ತು ಇತರ ಮೂಲಸೌಕರ್ಯಗಳ ಪುನರ್ನಿರ್ಮಾಣಕ್ಕೆ ಕೂಡಾ ಭಾರತ ನೇಪಾಳಕ್ಕೆ ಸಹಾಯ ನೀಡುತ್ತಿದೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಸಾಲಾ ಬಾಂಡ್ ಪ್ರಕರಣ : ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಶೋಕಾಸ್ ನೋಟಿಸ್ ನೀಡಿದ ಇಡಿ

ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ಮಾಜಿ ಹಣಕಾಸು ಸಚಿವ ಥಾಮಸ್ ಐಸಾಕ್ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ಎಂ ಅಬ್ರಹಾಂ ಅವರಿಗೆ ಜಾರಿ ನಿರ್ದೇಶನಾಲ 466 ಕೋಟಿ ರೂ.ಗಳ...

ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್

ಸೋಮವಾರ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ತುರ್ತು ಚರ್ಚೆ ನಡೆಸಬೇಕೆಂದು ಕೋರಿ ಕಾಂಗ್ರೆಸ್ ನಿಲುವಳಿ ಸೂಚನೆ...

ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಡಿಕ್ಕಿ:10ಕ್ಕೂ ಹೆಚ್ಚು ಜನರ ಸಾವು, 20 ಜನರಿಗೆ ಗಂಭೀರ ಗಾಯಗಳಾಗಿವೆ

ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.  ನವೆಂಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ: ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ 

ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ...

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ...

ಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಯಲ್ಲಿ ಮತದಾರರು ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 4 ರಿಂದ 11ಕ್ಕೆ ಚುನಾವಣಾ ಆಯೋಗ...

ಗೆಳತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹ: 18ವರ್ಷದ ಪದವಿಪೂರ್ವ ವಿದ್ಯಾರ್ಥಿ ಆತ್ಮಹತ್ಯೆ

ತನ್ನ ಗೆಳತಿ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾದ ಕಾರಣ ನವೆಂಬರ್ 29, ಶನಿವಾರ ಹೈದರಾಬಾದ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸುರರಾಮ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು 18 ವರ್ಷದ ಅಭಿಲಾಷ್ ಎಂದು...

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ...