Homeರಂಜನೆಕ್ರೀಡೆಇಂಗ್ಲೆಂಡ್ ವಿರುದ್ಧ ಇನ್ನಿಂಗ್ಸ್ ಜಯ: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ತಲುಪಿದ ಭಾರತ

ಇಂಗ್ಲೆಂಡ್ ವಿರುದ್ಧ ಇನ್ನಿಂಗ್ಸ್ ಜಯ: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ತಲುಪಿದ ಭಾರತ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ

- Advertisement -
- Advertisement -

ಅಹ್ಮದಾಬಾದ್‌ನಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 25 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ತಲುಪಿದ್ದು ನ್ಯೂಜಿಲೆಂಡ್ ವಿರುದ್ಧ ಫೈನಲ್‌ನಲ್ಲಿ ಸೆಣಸಲಿದೆ.

ನಾಲ್ಕನೇ ಟೆಸ್ಟ್‌ನ ಮೂರನೇ ದಿನದಾಟದಲ್ಲಿ ಇಂಗ್ಲೆಂಡ್ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 135 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ಎದುರು ಇನ್ನಿಂಗ್ಸ್ ಹಾಗೂ 25 ರನ್‌ಗಳ ಅಂತರದ ಸೋಲಪ್ಪಿಕೊಂಡಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 205 ರನ್‌ಗಳಿಗೆ ಆಲೌಟ್‌ ಆಗಿತ್ತು. ಪ್ರತಿಯಾಗಿ ಭಾರತವು ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 365 ರನ್ ಗಳಿಸುವ ಮೂಲಕ 160ಗಳ ಭರ್ಜರಿ ಮುನ್ನಡೆ ಸಾಧಸಿತ್ತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಕೇವಲ 135 ರನ್‌ಗಳಿಗೆ ಆಲೌಟ್ ಕಂಡಿತು.

ಭಾರತದ ಗೆಲುವಿನಲ್ಲಿ ರಿಷಬ್ ಪಂತ್, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್ ಮಹತ್ವದ ಪಾತ್ರ ವಹಿಸಿದರು. ರಿಷಬ್ ಪಂತ್ 101 ರನ್ ಗಳಿಸಿ ಕುಸಿಯುತ್ತಿದ್ದ ಭಾರತಕ್ಕೆ ಆಸೆಯಾಗಿದ್ದರು. ವಾಷಿಂಗ್ಟನ್ ಸುಂದರ್ 96 ರನ್‌ ಗಳಿಸಿ ಭಾರತ ಮುನ್ನಡೆ ಗಳಿಸಲು ನೆರವಾಗಿದ್ದರು. ಇನ್ನು ಬೌಲಿಂಗ್ ವಿಭಾಗದಲ್ಲಿ ಅಕ್ಸರ್ ಪಟೇಲ್ 9 (ಮೊದಲ ಇನ್ನಿಂಗ್ಸ್‌ನಲ್ಲಿ 4 ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 5) ವಿಕೆಟ್ ಪಡೆದು ಮಿಂಚಿದರು. ರವಿಚಂದ್ರನ್ ಅಶ್ವಿನ್ 8 (ಮೊದಲ ಇನ್ನಿಂಗ್ಸ್‌ನಲ್ಲಿ 3 ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 5) ವಿಕೆಟ್ ಪಡೆದು ಗೆಲುವಿಗೆ ಜೊತೆಯಾದರು.


ಇದನ್ನೂ ಓದಿ; ಹ್ಯಾಟ್ರಿಕ್ ಗಳಿಸಿದ ಬೌಲರ್ ಅಕಿಲಾ ಧನಂಜಯ: ಮರು ಓವರ್‌ನಲ್ಲೆ 6 ಬಾಲ್‌ಗೆ 6 ಸಿಕ್ಸರ್‌ ಬಾರಿಸಿದ ಪೊಲಾರ್ಡ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್...

0
ರಾಮ ಮಂದಿರ ನಿರ್ಮಾಣ, ಸಿಖ್‌ ತೀರ್ಥಯಾತ್ರೆಯ ಹಾದಿಯಾದ ಕರ್ತಾರ್‌ಪುರ್‌ ಸಾಹಿಬ್‌ ಕಾರಿಡಾರ್‌ ಅಭಿವೃದ್ಧಿ, ಸಿಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ ಪ್ರತಿಗಳನ್ನು ಅಫ್ಗಾನಿಸ್ತಾನದಿಂದ ವಾಪಸ್‌ ತರಲು ಸರ್ಕಾರದ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿ...