Homeಮುಖಪುಟಅಂತರ್ಗತ ಜಾಗತಿಕ ಭದ್ರತೆಗೆ ಭಾರತ ಬದ್ಧವಾಗಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ 

ಅಂತರ್ಗತ ಜಾಗತಿಕ ಭದ್ರತೆಗೆ ಭಾರತ ಬದ್ಧವಾಗಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ 

ಸಾಂಪ್ರದಾಯಿಕ ಮತ್ತು ಸಾಂಪ್ರದಾಯಿಕವಲ್ಲದ ಬೆದರಿಕೆಗಳನ್ನು ಎದುರಿಸಲು ನಮಗೆ ಸಾಂಸ್ಥಿಕ ಸಾಮರ್ಥ್ಯ ಬೇಕು ಎಂದು ರಾಜನಾಥ್ ಸಿಂಗ್ ಹೇಳಿದರು

- Advertisement -
- Advertisement -

ಎಸ್‌ಸಿಒಯ ಪ್ರಾದೇಶಿಕ ಭಯೋತ್ಪಾದನಾ-ವಿರೋಧಿ ರಚನೆಯ ಕಾರ್ಯಗಳನ್ನು ಭಾರತವು ಗೌರವಿಸುತ್ತದೆ ಎಂದು ಮಾಸ್ಕೋದಲ್ಲಿ ಶುಕ್ರವಾರ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಚಿವಾಲಯದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಸಾಂಪ್ರದಾಯಿಕ ಮತ್ತು ಸಾಂಪ್ರದಾಯಿಕವಲ್ಲದ ಬೆದರಿಕೆಗಳನ್ನು ಎದುರಿಸಲು ನಮಗೆ ಸಾಂಸ್ಥಿಕ ಸಾಮರ್ಥ್ಯ ಬೇಕು. ಎಲ್ಲಕ್ಕಿಂತ ಹೆಚ್ಚಾಗಿ, ನಾವು ಭಯೋತ್ಪಾದನೆ, ಮಾದಕವಸ್ತು ಕಳ್ಳಸಾಗಣೆ ಮತ್ತು ದೇಶೀಯ ಅಪರಾಧಗಳನ್ನು ಎದುರಿಸಬೇಕಾಗಿದೆ ಎಂದರು.

ಇದನ್ನೂ ಓದಿ: ಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ಭಾರತವು ಭಯೋತ್ಪಾದನೆಯನ್ನು, ಅದರ ಪ್ರತಿಪಾದಕರನ್ನು ಎಲ್ಲಾ ರೀತಿಯಲ್ಲಿ ನಿಸ್ಸಂದೇಹವಾಗಿ ಖಂಡಿಸುತ್ತದೆ. ಅಂತಾರಾಷ್ಟ್ರೀಯ ಕಾನೂನುಗಳಲ್ಲಿ ಇರುವಂತೆ ಪಾರದರ್ಶಕ ಮತ್ತು ಅಂತರ್ಗತ ಜಾಗತಿಕ ಭದ್ರತೆಗೆ ಭಾರತ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದರು.

ಇನ್ನು ಪರ್ಷಿಯನ್ ಕೊಲ್ಲಿ ಮತ್ತು ಅಫ್ಘಾನಿಸ್ತಾನದಲ್ಲಿ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜನಾಥ್ ಸಿಂಗ್ “ಪರ್ಷಿಯನ್ ಕೊಲ್ಲಿಯ ಪರಿಸ್ಥಿತಿಯ ಬಗ್ಗೆ ಭಾರತ ತೀವ್ರ ಕಳವಳ ಹೊಂದಿದೆ. ಪರಸ್ಪರ ಗೌರವ ಮತ್ತು ಸಾರ್ವಭೌಮತ್ವದ ಆಧಾರದ ಮೇಲೆ ಸಂವಾದದ ಮೂಲಕ ವ್ಯತ್ಯಾಸಗಳನ್ನು ಪರಿಹರಿಸಲು ನಾವು ಕೊಲ್ಲಿ ಪ್ರದೇಶದ ದೇಶಗಳಿಗೆ ಕರೆ ನೀಡುತ್ತೇವೆ ಎಂದರು.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...