Homeಮುಖಪುಟಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

- Advertisement -
- Advertisement -

ಸ್ವೀಡನ್ ಸಂಸ್ಥೆಯೊಂದರ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ” ಎಂದು ಗುರುವಾರ ಹೇಳಿದ್ದಾರೆ.

ಭಾರತ ಈಗ ಪಾಕಿಸ್ತಾನದಂತೆ ಸರ್ವಾಧಿಕಾರ ರಾಷ್ಟ್ರವಾಗಿದ್ದು, ಬಾಂಗ್ಲಾದೇಶಕ್ಕಿಂತಲೂ ಹದಗೆಟ್ಟಿದೆ ಎಂಬ ವರದಿಯನ್ನು ರಾಹುಲ್ ಗಾಂಧಿ ಉಲ್ಲೇಖ ಮಾಡಿದ್ದಾರೆ.

ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ಭಾರತವನ್ನು “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ” ದಿಂದ “ಚುನಾವಣಾ ಪ್ರಜಾಪ್ರಭುತ್ವ” ಕ್ಕೆ ಇಳಿಸಿದೆ ಎಂದು ಹೇಳುವ ಸ್ವೀಡನ್‌ನ ವಿ-ಡೆಮ್ ಸಂಸ್ಥೆಯ ಪ್ರಜಾಪ್ರಭುತ್ವ ವರದಿಯನ್ನು ಉಲ್ಲೇಖಿಸಿ “ಭಾರತ ಇನ್ನು ಮುಂದೆ ಪ್ರಜಾಪ್ರಭುತ್ವ ರಾಷ್ಟ್ರವಲ್ಲ” ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ಅಮೆರಿಕ ಮೂಲದ ಫ್ರೀಡಂ ಹೌಸ್ ಬಿಡುಗಡೆ ಮಾಡಿರುವ ನಾಗರಿಕ ಸ್ವಾತಂತ್ರ್ಯ ಅಧ್ಯಯನ ವರದಿಯಲ್ಲಿ ಪ್ರಜಾಪ್ರಭುತ್ವ ರಾಷ್ಟ್ರಗಳ ಪೈಕಿ ಭಾರತದ ಶ್ರೇಯಾಂಕ ಗಣನೀಯವಾಗಿ ಇಳಿಕೆ ಕಂಡಿತ್ತು.

ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ನಾಗರಿಕ ಹಕ್ಕುಗಳು ನಶಿಸುತ್ತಿವೆ ಎಂದು ಫ್ರೀಡಂ ಹೌಸ್ ವರದಿಯು ತಿಳಿಸಿತ್ತು.

ಫ್ರೀಡಂ ಹೌಸ್ ವರದಿಯನ್ನು ಭಾರತ ಸರ್ಕಾರವು ಬಲವಾಗಿ ಖಂಡಿಸಿದ್ದು, ದೇಶವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉತ್ತಮವಾಗಿಸಿದೆ ಎಂದು ಪ್ರತಿಪಾದಿಸಿದೆ.


ಇದನ್ನೂ ಓದಿ: ‘ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಮೂಲಧ್ಯೇಯ’: ದಿಶಾ ಬೆಂಬಲಿಸಿ ಗ್ರೆಟಾ ಟ್ವೀಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...